Sunday, September 8, 2024

ನೇಜಾರು ಕೊಲೆ ಪ್ರಕರಣ : ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ವೇಳೆ ಪಾನಮತ್ತರಾಗಿದ್ದ ಅಧಿಕಾರಿಗೆ ಸೂಕ್ತ ಕ್ರಮಕ್ಕೆ ಸೂಚನೆ !

ಜನಪ್ರತಿನಿಧಿ  (ಉಡುಪಿ) : ನೇಜಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್‌ ಚೌಗಲೆಯನ್ನು ನ್ಯಾಯಾಲಕ್ಕೆ ಹಾಜರು ಪಡಿಸುವ ಸಂದರ್ಭದಲ್ಲಿ ಅಧಿಕಾರಿಯೊಬ್ಬರು ಮಧ್ಯ ಸೇವನೆ ಮಾಡಿ ಕರ್ತವ್ಯ ನಿರ್ವಹಿಸಿರುವ ಆರೋಪ ಕೇಳಿ ಬಂದಿದೆ.

ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿದ್ದ ಉಡುಪಿಯ ನೇಜಾರಿನಲ್ಲಿ ಮುಸ್ಲೀಂ ಕುಟುಂಬದ  ನಾಲ್ವರ ಭೀಕರ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್‌ ಅರುಣ್‌ ಚೌಗುಲೆಯನ್ನು ನ್ಯಾಯಾಲಯಕ್ಕೆ ಕರೆ ತರುವ ಭದ್ರತೆಯ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದ ಬೆಂಗಳೂರಿನ ಮೀಸಲು ಪೊಲೀಸ್‌ ವಿಭಾಗದ ಸಬ್‌ ಇನ್‌ಸ್ಪೆಕ್ಟರ್‌ ಕರ್ತವ್ಯದ ವೇಳೆಯಲ್ಲಿ ಪಾನಮತ್ತರಾಗಿ ಬಂದಿರುವ ಬಗ್ಗೆ ಆರೋಪ ಕೇಳಿ ಬಂದಿದೆ.

ಅಧಿಕಾರಿಯ ಸಮವಸ್ತ್ರವನ್ನು ಕೂಡ ಸಮರ್ಪಕವಾಗಿ ಧರಿಸದೆ ಇರುವುದು ಹಾಗೂ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ಮದ್ಯ ಸೇವನೆ ಮಾಡಿರುವುದು ಹಾಗೂ ಮಾಧ್ಯಮದ ಪ್ರತಿನಿಧಿಗಳು ಹಾಗೂ ಸಾರ್ವಜನಿಕರೊಂದಿಗೆ ದುರ್ವರ್ತೆನೆ ತೋರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಸ್ಥಳದಲ್ಲಿದ್ದವರು ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಗಮನಕ್ಕೆ ತಂದಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಕೆ. ಅರುಣ್‌  ಶಿಸ್ತು ಕ್ರಮಕ್ಕೆ ಸಂಬಂಧಿಸಿದ ಅಧಿಕಾರಿಗಳಿಗೆ ವರದಿ ಸಲ್ಲಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

 

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!