spot_img
Wednesday, April 1, 2026
spot_img

ಸುಪ್ರೀಂ ಆದೇಶದ ನಂತರವೂ 1 ಕೋಟಿ ಮೌಲ್ಯದ 8,350 ಚುನಾವಣಾ ಬಾಂಡ್‌ ಪೂರೈಕೆ !

ಜನಪ್ರತಿನಿಧಿ (ನವ ದೆಹಲಿ) : ರಾಜಖಿಐ ಪಕ್ಷಗಳಿಗೆ ದೇಣಿಗೆ ನೀಡಲು ಅವಕಾಶ ಕಲ್ಪಿಸುವ ʼಚುನಾವಣಾ ಬಾಂಡ್‌ʼ ಯೋಜನೆಯು ಮಾಹಿತಿ ಹಕ್ಕು ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯ ಉಲ್ಲಂಘಿಸುತ್ತದೆ. ಹೀಗಾಗಿ ಇದು ಅಸಾಂವಿಧಾನಿಕ ಎಂದು ಸುಪ್ರೀಂ ಕೋರ್ಟ್‌ ಫೆಬ್ರವರಿ 15ರಂದು ಆದೇಶಿಸಿತ್ತು.

ಆದರೇ, ಫೆ.21ರಂದು ಮಹಾರಾಷ್ಟ್ರದ ನಾಸಿಕ್‌ ನಲ್ಲಿರುವ ಇಂಡಿಯಾ ಸೆಕ್ಯುರಿಟಿ ಪ್ರೆಸ್‌ ತಲಾ ಒಂದು ಕೋಟಿ ರೂಪಾಯಿ ಮೌಲ್ಯದ 8,350 ಬಾಂಡ್‌ಗಳನ್ನು ಅಧಿಕಾರಿಳಿಗೆ ಪೂರೈಸಿದೆ. ಈ ವಿಚಾರ ಮಾಹಿತಿ ಹಕ್ಕು ಕಾಯ್ದೆಯ (ಆರ್‌ಟಿಐ) ಅಡಿ ಕೇಳಲಾಗಿದ್ದ ಪ್ರಶ್ನೆಗೆ ದೊರೆತ ಪ್ರತಿಕ್ರಿಯೆಯಿಂದ ಬೆಳಕಿಗೆ ಬಂದಿದೆ.

ಆಗಸ್ಟ್‌ 18ರಂದು 2022ರಂದು ಇಂಡಿಯಾ ಸೆಕ್ಯುರಿಟಿ ಪ್ರೆಸ್‌  ಒಂದು ಕೋಟಿ ಮೌಲ್ಯದ ಹತ್ತು ಸಾವಿರ ಚುನಾವಣಾ ಬಾಂಡ್‌ಗಳನ್ನು ಮುದ್ರಿಸಿ ಸರಬರಾಜು ಮಾಡಿತ್ತು ಎನ್ನುವುದು ವರದಿಯಾಗಿದೆ.

ನೌಕಾಪಡೆಯ ನಿವೃತ್ತ ಅಧಿಕಾರಿಯೂ ಆಗಿರುವ ಆರ್‌ಟಿಐ ಕಾರ್ಯಕರ್ತ ಲೋಕೇಶ್‌ ಬಾತ್ರಾ ಕೇಳಿದ ಪ್ರಶ್ನೆಗಳಿಗೆ ಇಂಡಿಯಾ ಸೆಕ್ಯುರಿಟಿ ಪ್ರೆಸ್‌ ಪ್ರತಿಕ್ರಿಯಿಸಿದೆ. 2018ರ ಮಾರ್ಚ್‌ 1 ರಿಂದ 2024ರ ಫೆಬ್ರವರಿ 21 ರವರೆಗೆ ತಾನು ಮುದ್ರಿಸಿ ಸರಬರಾಜು ಮಾಡಿದ ಬಾಂಡ್‌ಗಳ ಮಾಹಿತಿ ನೀಡಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!