Saturday, October 12, 2024

ಕುಂದಾಪುರ : ಮತದಾನ ಜಾಗೃತಿ ಕಾರ್ಯಕ್ರಮಕ್ಕೆ ಸಿ.ಇ.ಒ ಚಾಲನೆ

 ಕುಂದಾಪುರ:  ಕುಂದಾಪುರ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಬುಧವಾರ ಕುಂದಾಪುರ ತಾಲೂಕು ಪಂಚಾಯತ್
ಕಚೇರಿ ಮುಂಭಾಗದಲ್ಲಿ ನಡೆದ ಮತದಾನ ಜಾಗೃತಿ ಕಾರ್ಯಕ್ರಮಕ್ಕೆ ಮತದಾರರ ಜಾಗೃತಿ ಸಂದೇಶ ಹೊಂದಿರುವ ರಾಷ್ಟ್ರ ಧ್ವಜ ತ್ರಿವರ್ಣ
ಬಣ್ಣಗಳ ಬಲೂನುಗಳನ್ನು ಹಾರಿಸುವ ಮೂಲಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರತೀಕ್ ಬಾಯಲ್ ಚಾಲನೆ
ನೀಡಿದರು.

ಈ ಸಂದರ್ಭದಲ್ಲಿ ಸಿ.ಇ.ಓ ಮಾತನಾಡಿ, ಜಿಲ್ಲೆಯಲ್ಲಿ ಪ್ರತಿಶತಃ ನೂರರಷ್ಟು ಮತದಾನ ನಮ್ಮ ಗುರಿಯಾಗಿದೆ. ಕಳೆದ
ಚುನಾವಣೆಯಲ್ಲಿ ಯಾವ ಮತಗಟ್ಟೆ ವ್ಯಾಪ್ತಿಯಲ್ಲಿ ಕಡಿಮೆ ಮತದಾನವಾಗಿದೆ ಅಂತಹ ಪ್ರದೇಶದಲ್ಲಿ ಹೆಚ್ಚು ಜಾಗೃತಿ ಮೂಡಿಸುವ
ಕೆಲಸವನ್ನು ಅಧಿಕಾರಿಗಳು ಮಾಡುವುದರೊಂದಿಗೆ ಮತದಾನದ ಪ್ರಮಾಣ ಹೆಚ್ಚಿಸಬೇಕು ಎಂದರು.

ಕುಂದಾಪುರ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಕೆ.ಜಿ.ಶಶಿಧರ್ ಮಾತನಾಡಿ, ಮತದಾರರಿಗೆ ಮತದಾನದ ಮಹತ್ವ ತಿಳಿಸಬೇಕು. ಈ
ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಮತದಾರರು ಭಾಗವಹಿಸುವಂತೆ ಜಾಗೃತಿ ಮೂಡಿಸುವ ಕೆಲಸವಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ಮತದಾನದ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು ಹಾಗೂ ಕಡ್ಡಾಯ ಮತದಾನದ ಅರಿವು ಮುಡಿಸುವ ಸಲುವಾಗಿ ಸಹಿ
ಸಂಗ್ರಹಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಕುಂದಾಪುರ ವಿಧಾನಸಭಾ ಕ್ಷೇತ್ರದ ಸಹಾಯಕ
ಚುನಾವಣಾಧಿಕಾರಿ ರಶ್ಮಿ, ತಹಶೀಲ್ದಾರಾದ ಶೋಭಾಲಕ್ಷ್ಮೀ, ತಾಲೂಕು ಪಂಚಾಯತಿಯ ಅಧಿಕಾರಿ ಮತ್ತು ಸಿಬ್ಬಂದಿ ವರ್ಗ, ತಾಲೂಕು
ಮಟ್ಟದ ಇಲಾಖಾಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ ಮತ್ತು ಸಿಬ್ಬಂದಿ ವರ್ಗ ಹಾಗೂ ಸ್ಥಳೀಯರು
ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!