Saturday, October 12, 2024

ಮತದಾನದ ದಿನದಂದು ಪ್ರತಿಬಂಧಕಾಜ್ಞೆ ಜಾರಿ

 

ಉಡುಪಿ: ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬಂಧಿಸಿದಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ 119-ಕುಂದಾಪುರ, 120-ಉಡುಪಿ, 121 -ಕಾಪು ಹಾಗೂ 122-ಕಾರ್ಕಳ ವಿಧಾನಾ ಸಭಾ ಕ್ಷೇತ್ರದಲ್ಲಿ ಮೊದಲ
ಹಂತದಲ್ಲಿ ಏಪ್ರಿಲ್ 26 ರಂದು ಮತದಾನ ನಡೆಯಲಿದ್ದು, ಮತದಾನ ನಡೆಯುವ ಮತಗಟ್ಟೆಗಳ ಸುತ್ತಲೂ 200 ಮೀ. ವ್ಯಾಪ್ತಿಯಲ್ಲಿ
ಏಪ್ರಿಲ್ 24 ರ ಸಂಜೆ 6 ರಿಂದ ಏಪ್ರಿಲ್ 26 ರಂದು ಮತದಾನ ಮುಕ್ತಾಯವಾಗುವವರೆಗೆ ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರದ 118-ಬೈಂದೂರು ವಿಧಾನಾ ಸಭಾ ಕ್ಷೇತ್ರದಲ್ಲಿ ಮೇ 7 ರಂದು ಎರಡನೇ ಹಂತದ ಮತದಾನ ನಡೆಯುವ ಮತಗಟ್ಟೆಗಳ ಸುತ್ತಲೂ 200 ಮೀ.ವ್ಯಾಪ್ತಿಯಲ್ಲಿ ಮೇ. 5 ರ ಸಂಜೆ 6 ಗಂಟೆಯಿ0ದ ಮೇ 7 ರಂದು ಮತದಾನ ಮುಕ್ತಾಯವಾಗುವವರೆಗೆ ದಂಡ ಪ್ರಕ್ರಿಯಾ ಸಂಹಿತೆ 1973ರಕಲಂ 144ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ, ಈ ಕೆಳಗಿನಂತೆ ಷರತ್ತುಗಳನ್ನು ವಿಧಿಸಿ, ಪ್ರತಿಬಂಧಕಾಜ್ಞೆಯನ್ನು ಜಾರಿ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.

ಜಿಲ್ಲೆಯ ವ್ಯಾಪ್ತಿಯಲ್ಲಿ 05 ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು
ನಿಷೇಧಿಸಲಾಗಿರುತ್ತದೆ. ಶಸ್ತ್ರ, ಬಡಿಕೆ, ಬರ್ಚಿ, ಖಡ್ಗ, ಗದೆ, ಬಂದೂಕು, ಊರಿ, ಲಾಠಿ, ದೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನು
ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ಅವುಗಳೊಂದಿಗೆ ತಿರುಗಾಡುವುದನ್ನು
ಪ್ರತಿಬಂಧಿಸಲಾಗಿರುತ್ತದೆ.

ಮತಗಟ್ಟೆಗಳ 200 ಮೀಟರ್ ವ್ಯಾಪ್ತಿಯೊಳಗೆ ಚುನಾವಣೆ ಪ್ರಚಾರ ನಿಷೇದಿಸಲಾಗಿದ್ದು, ಈ ಪ್ರದೇಶದ ವ್ಯಾಪ್ತಿಯಲ್ಲಿ ಬರುವ
ಜೆರಾಕ್ಸ್ ಅಂಗಡಿ, ಬುಕ್ ಸ್ಟಾಲ್, ಸೈಬರ್ ಕೆಫೆಗಳನ್ನು ನಿರ್ಬಂಧಿಸಿದೆ. ಕಲ್ಲುಗಳನ್ನು, ಕ್ಷಾರ ಪದಾರ್ಥ ಇಲ್ಲವೆ ಸ್ಫೋಟಕ ವಸ್ತುಗಳು
ಇತ್ಯಾದಿಗಳನ್ನು ಸದರಿ ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ಮತ್ತು ಕಲ್ಲುಗಳನ್ನು ಹಾಗೂ
ಎಸೆಯುವಂತಹ ವಸ್ತುಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ.

ಮನುಷ್ಯ ಶವಗಳ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳ ಪ್ರದರ್ಶನ / ದಹನ ಮಾಡುವುದನ್ನು ನಿರ್ಬಂಧಿಸಲಾಗಿದೆ. ಸದರಿ
ಸ್ಥಳದಲ್ಲಿ ಬಹಿರಂಗವಾಗಿ ಘೋಷಣೆ ಮಾಡುವುದು, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ
ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು
ನಿಷೇಧಿಸಲಾಗಿರುತ್ತದೆ.

ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ
ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ
ಸಾರ್ವಜನಿಕ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿರುತ್ತದೆ. ಯಾವುದೇ ವ್ಯಕ್ತಿ ಬಹಿರಂಗವಾಗಿ ಮೇಲೆ ವಿವರಿಸಿದ ಮಾರಕಾಸ್ತ್ರಗಳು, ಸ್ಪೋಟಕ ವಸ್ತುಗಳು, ವಿನಾಶಕಾರಿ ವಸ್ತುಗಳು ಹಾಗೂ ಇತರ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿದ್ದು ಕಂಡು ಬಂದ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಅಧಿಕಾರ ಇರುತ್ತದೆ. ಅಂತಹ ಮಾರಕಾಸ್ತ್ರಗಳನ್ನು ಸರಕಾರಕ್ಕೆ ಮುಟ್ಟುಗೋಲು ಮಾಡಿಕೊಳ್ಳಲಾಗುವುದು. ಅಲ್ಲದೇ ಸಂಬAಧಿಸಿದ ವ್ಯಕ್ತಿಗಳ ಮೇಲೆ ಕಾನೂನು ರೀತಿಯಲ್ಲಿ ಕ್ರಮ ಜರುಗಿಸಲಾಗುವುದು.

ಮತಗಟ್ಟೆಗಳ ಸುತ್ತ 200 ಮೀಟರ್ ಅಂತರದಲ್ಲಿ ಮೊಬೈಲ್ ಫೋನ್, ಕಾರ್ಡಲೆಸ್ ಫೋನ್ ಅಥವಾ ಇನ್ನಿತರೆ ಎಲೆಕ್ಟ್ರಾನಿಕ್,
ಉಪಕರಣಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. ಮತಗಟ್ಟೆಗಳ ಸುತ್ತ 200 ಮೀಟರ್ ಪರಿಮಿತಿಯಲ್ಲಿ ಪ್ರಚಾರಕ್ಕೆ
ಸಂಬAಧಿಸಿದ ಪೋಸ್ಟರ್ / ಬ್ಯಾನರ್ ಅಥವಾ ಇನ್ನಾವುದೇ ವಸ್ತುಗಳನ್ನು ಹಾಗೂ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ.

ಕಲ್ಯಾಣ ಮಂಟಪಗಳು, ಸಮುದಾಯ ಭವನಗಳು, ಹೋಟೆಲ್‌ಗಳು ಮತ್ತು ಅತಿಥಿಗೃಹಗಳನ್ನು ವಾಸ್ತವ್ಯ ಹೂಡಿದವರ ಪಟ್ಟಿಗಳ
ಪರಿಶೀಲನೆ ಮಾಡಿ ಮತದಾರರಲ್ಲದವರನ್ನು ಕ್ಷೇತ್ರದ ವ್ಯಾಪ್ತಿಯಿಂದ ಹೊರಗೆ ಕಳುಹಿಸಲು ಕ್ರಮವಹಿಸಬೇಕು. ಸದರಿ ಆದೇಶವನ್ನು
ಉಲ್ಲಂಘಿಸುವವರ ವಿರುದ್ಧ ಕಾನೂನಿನ್ವಯ ಕಠಿಣ ಕ್ರಮವನ್ನು ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ
ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!