spot_img
Wednesday, April 1, 2026
spot_img

ಕಾಂಗ್ರೆಸ್‌ಗೆ ಮತ್ತೊಂದು ಆರ್ಥಿಕ ಹೊಡೆತ | ಕಾಂಗ್ರೆಸ್‌ಗೆ 1,700 ಕೋಟಿ ರೂಪಾಯಿ ಮೊತ್ತದ ಡಿಮ್ಯಾಂಡ್‌ ನೋಟಿಸ್‌ ನೀಡಿದ ಐಟಿ ಇಲಾಖೆ !

ಜನಪ್ರತಿನಿಧಿ (ನವ ದೆಹಲಿ) : ಆದಾಯ ತೆರಿಗೆ ಇಲಾಖೆಯು ಹಿಂದಿನ ವರ್ಷಗಳ ತೆರಿಗೆ ರಿಟರ್ನ್ಸ್‌ನಲ್ಲಿನ ವ್ಯತ್ಯಾಸಗಳಿಗಾಗಿ 1,700 ಕೋಟಿ ರೂಪಾಯಿ ಮೊತ್ತದ ಹೊಸ ನೋಟಿಸ್ ಅನ್ನು ಕಾಂಗ್ರೆಸ್‌ಗೆ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಲೋಕಸಭೆ ಚುನಾವಣೆಗೆ ಮುನ್ನ ಆರ್ಥಿಕ ಸಮಸ್ಯೆ ಎದುರಿಸುತ್ತಿರುವ ರಾಷ್ಟ್ರೀಯ ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಹೊಡೆತ ಕೊಟ್ಟಿದೆ ಎಂದು ರಾಷ್ಟ್ರೀಯ ಮೂಲಗಳು ಇಂದು(ಶುಕ್ರವಾರ) ತಿಳಿಸಿವೆ.

2017-18 ರಿಂದ 2020-21 ರವರೆಗಿನ ತೆರಿಗೆ ಬಾಕಿ, ಬಡ್ಡಿ ಹಾಗೂ ದಂಡಕ್ಕೆ ಸಂಬಂಧಿಸಿದಂತೆ ಹೊಸದಾಗಿ ಕಾಂಗ್ರೆಸ್‌ಗೆ ಈ ನೋಟಿಸ್ ನೀಡಲಾಗಿದೆ ಎಂದು ಮೂಲಗಳು ಮಾಹಿತಿ ನೀಡಿವೆ.

2018-19ನೇ ಸಾಲಿಗೆ ಸಂಬಂಧಿಸಿದಂತೆ ಐ-ಟಿ ರಿಟರ್ನ್ಸ್ ಸಲ್ಲಿಸದ ಕಾರಣಕ್ಕೆ 201 ಕೋಟಿ ರೂ. ದಂಡ ಪಾವತಿಸಬೇಕು ಎಂದು ನೋಟಿಸ್ ನೀಡಿದ್ದ ಆದಾಯ ತೆರಿಗೆ ಇಲಾಖೆ, ಕಾಂಗ್ರೆಸ್ ಪಕ್ಷದ ಒಂಬತ್ತು ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿತ್ತು ಎನ್ನುವುದು ಇಲ್ಲಿ ಉಲ್ಲೇಖಾರ್ಹ.

2017 ರಿಂದ 2021ರ ಅವಧಿಯ ತೆರಿಗೆ ಮರುಮೌಲ್ಯಮಾಪನಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಆರಂಭಿಸಿದ್ದ ಪ್ರಕ್ರಿಯೆಯ ವಿರುದ್ಧ ಕಾಂಗ್ರೆಸ್ ಸಲ್ಲಿಸಿದ್ದ ಮೇಲ್ಮನವಿಯನ್ನು ದೆಹಲಿ ಹೈಕೋರ್ಟ್ ಗುರುವಾರ (ಮಾರ್ಚ್ 28) ವಜಾ ಮಾಡಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸುಪ್ರೀಂ ಕೋರ್ಟ್‌ ಮೆಟ್ಟಿಲೇರುವ ಸಾಧ್ಯತೆಯಿದೆ ಎಂದು ಕೂಡ ಹೇಳಲಾಗುತ್ತಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್‌  ಏಪ್ರಿಲ್ 19 ರಿಂದ ಆರಂಭವಾಗುತ್ತಿರುವ ಲೋಕಸಭೆ ಚುನಾವಣೆಗೆ ಮೊದಲಾಗಿ ಬಿಜೆಪಿ ಆರ್ಥಿಕವಾಗಿ ಕಾಂಗ್ರೆಸ್‌ ಪಕ್ಷದ ಕತ್ತು ಹಿಸುಕಿ ಉಸಿರು ಕಟ್ಟಿಸುತ್ತಿದೆ ಹಾಗೂ ತೆರಿಗೆ ಅಧಿಕಾರಿಗಳನ್ನು ಪಕ್ಷದ ವಿರುದ್ಧ ಬಳಸುತ್ತಿದೆ. ಆದಾಯ ತೆರಿಗೆ ಇಲಾಖೆಯ ಕ್ರಮದಿಂದಾಗಿ ಪಕ್ಷದ ಎಲ್ಲ ರಾಜಕೀಯ ಚಟುವಟಿಕೆಗಳ ಮೇಲೆ ವಿಪರೀತ ಪರಿಣಾಮ ಉಂಟಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆರೋಪಿಸಿದೆ.

 

 

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!