Saturday, October 12, 2024

ಪ್ರಜಾಪ್ರಭುತ್ವ ನೆಲೆಸಬೇಕಾದರೇ ಇಂಡಿಯಾ ಮೈತ್ರಿಕೂಟಕ್ಕೆ ಮತ ಚಲಾಯಿಸಿ : ಸ್ಟ್ಯಾಲಿನ್‌ ಕರೆ

ಜನಪ್ರತಿನಿಧಿ (ತಮಿಳುನಾಡು) :  ಪ್ರಜಾಪ್ರಭುತ್ವ ಹಾಗೂ ಸಾಮಾಜಿಕ ನ್ಯಾಯ ನಮ್ಮ ದೇಶದಲ್ಲಿ ಉಳಿಯಬೇಕಾದರೇ, ನೆಲೆಯಾಗಬೇಕಾದರೇ ʼಇಂಡಿಯಾʼ ಮೈತ್ರಿಕೂಟಕ್ಕೆ ತಮ್ಮ ಮತ ಚಲಾವಣೆ ಮಾಡಿ ಎಂದು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಇಲ್ಲಿನ ಜನರಿಗೆ ಕರೆ ಕೊಟ್ಟಿದ್ದಾರೆ.

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ವಾಗ್ದಾಳಿ ನಡೆಸಿದ ಸ್ಟಾಲಿನ್, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಕಷ್ಟು ಹಣವಿಲ್ಲ ಎಂಬ ಅವರ ಹೇಳಿಕೆ ನಿಜವಾಗಿದ್ದರೆ, ಬಿಜೆಪಿ ಚುನಾವಣಾ ಬಾಂಡ್‌ಗಳ ಮೂಲಕ ಪಡೆದ ಹಣ ಏನಾಯಿತು ಎಂಬುದು ಪ್ರಶ್ನೆಯಾಗಿದೆ ಎಂದರು.

‘ಮೇಡಂ, ನೀವು ಚುನಾವಣೆಗೆ ಸ್ಪರ್ಧಿಸಲು ಬಯಸಿದರೆ, ನೀವು ಜನರನ್ನು ಭೇಟಿ ಮಾಡಬೇಕು ಮತ್ತು ಜನರ ಕಲ್ಯಾಣಕ್ಕಾಗಿ ಶ್ರಮಿಸಬೇಕು. ಜನ ನಿಮಗೆ ಮತ ಹಾಕುವುದಿಲ್ಲ ಎಂಬ ಫಲಿತಾಂಶ ಗೊತ್ತಿರುವುದರಿಂದ ಸ್ಪರ್ಧಿಸದಿರಲು ನಿರ್ಧರಿಸಿದ್ದೀರಿ’ ಎಂದು ಸ್ಟ್ಯಾಲಿನ್‌ ವ್ಯಂಗ್ಯವಾಡಿದ್ದಾರೆ.

ಇನ್ನು, ದೆಹಲಿಯಲ್ಲಿ ಈಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ವಿತ್ತ ಸಚಿವರು, ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಬಂದಿದ್ದ ಬಿಜೆಪಿ ಪ್ರಸ್ತಾಪವನ್ನು ನಿರಾಕರಿಸಿದ್ದೇನೆ. ಏಕೆಂದರೆ, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಅಗತ್ಯವಿರುವ ಹಣ ತಮ್ಮ ಬಳಿ ಇಲ್ಲ ಎಂದಿದ್ದರು.

ಡಿಎಂಕೆಯ ಧರ್ಮಪುರಿ ಅಭ್ಯರ್ಥಿ ಎ ಮಣಿ ಮತ್ತು ಕೃಷ್ಣಗಿರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೋಪಿನಾಥ್ ಪರ ಮತಯಾಚಿಸಿದ ಸ್ಟಾಲಿನ್, ದೇಶದಲ್ಲಿ ಪ್ರಜಾಪ್ರಭುತ್ವ ಮತ್ತು ಸಾಮಾಜಿಕ ನ್ಯಾಯವನ್ನು ಖಚಿತಪಡಿಸಿಕೊಳ್ಳಲು ಜನರು ಇಂಡಿಯಾ ಮೈತ್ರಿಕೂಟಕ್ಕೆ ಮತ ನೀಡಬೇಕು. ನೀವು ಅದನ್ನು ಮಾಡುತ್ತೀರಾ?. ನೀವು ಇಂಡಿಯಾ ಮೈತ್ರಿಕೂಟಕ್ಕೆ ಮತ ಹಾಕಲು ಸಿದ್ಧರಿದ್ದೀರಾ? ಎಂದು ಇಲ್ಲಿ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಅವರು ಪ್ರಶ್ನಿಸಿದರು.

‘ಮುಂಬರುವ ಚುನಾವಣೆ ಭಾರತದ ಇತಿಹಾಸದಲ್ಲಿ ಪ್ರಮುಖವಾದದ್ದು, ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಯನ್ನು ಮನೆಗೆ ಕಳುಹಿಸುವ ಸಮಯ. ಜಾತಿ, ಧರ್ಮ, ಭಾಷೆಯ ಆಧಾರದ ಮೇಲೆ ಜನರನ್ನು ಒಡೆಯಲು ಬಿಜೆಪಿ ಬಯಸುತ್ತಿದೆ’ ಎಂದು ಆರೋಪಿಸಿದರು.

 

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!