spot_img
Wednesday, April 1, 2026
spot_img

ತೆರಿಗೆ ವಂಚನೆ : ರಾಜಧಾನಿಯ 20ಕ್ಕೂ ಹೆಚ್ಚು ಕಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಂದ ರೇಡ್‌ !

ಜನಪ್ರತಿನಿಧಿ (ಬೆಂಗಳೂರು) : ರಾಜಧಾನಿಯ ಬೆಂಗಳೂರು ನಗರದ 20ಕ್ಕೂ ಹೆಚ್ಚು ಕಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಇಂದು (ಶನಿವಾರ) ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿ ಶಾಕ್‌ ನೀಡಿದ್ದಾರೆ.

ಐಟಿ ಅಧಿಕಾರಿಗಳು ಬೆಂಗಳೂರಿನ ಬಿಲ್ಡರ್‌ಗಳ ಮನೆ ಮೇಲೆ ದಾಳಿ ದಾಳಿ ನಡೆಸಿದ್ದು, ಕಡತ ಪರಿಶೀಲನೆಯಲ್ಲಿ ತೊಡಗಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ಬೆಂಗಳೂರಿನ ಕೆಆರ್ ಪುರಂ, ಕೊಡಿಗೇಹಳ್ಳಿ ಸೇರಿ ಇನ್ನೂ ಹಲವು ಕಡೆಗಳಲ್ಲಿ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ನಂಜುಂಡೇಶ್ವರ ಇನ್ಫ್ರಾಸ್ಟ್ರಕ್ಚರ್ ಪ್ರೈವೆಟ್ ಲಿಮಿಟೆಡ್ ಸೇರಿದಂತೆ ಹಲವು ಬಿಲ್ಡರ್ ಕಚೇರಿ, ಮನೆಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆಂದು ಮಾಹಿತಿ ಲಭ್ಯವಾಗಿದೆ.

ಬೆಂಗಳೂರಿನ ಮೇಘನಾ ಫುಡ್ಸ್​ ಗ್ರೂಪ್ ಕಂಪನಿಗೆ ಸೇರಿದ 10ಕ್ಕೂ ಹೆಚ್ಚು ಕಡೆ  ಕಳೆದ ವಾರ  ದಾಳಿ ಮಾಡಿದ್ದರು. ಮೇಘನಾ ಫುಡ್ಸ್ ಕಂಪನಿ ಹೋಟೆಲ್ ಮತ್ತು ರೆಸ್ಟೋರೆಂಟ್​ಗಳನ್ನು ನಡೆಸುತ್ತಿದ್ದು, ಇದರ ಕೋರಮಂಗಲ, ಇಂದಿರಾನಗರ, ಜಯನಗರದಲ್ಲಿರುವ ಶಾಖೆಗಳಿವೆ. ಆದಾಯ ತೆರಿಗೆ ಪಾವತಿಯಲ್ಲಿ ವ್ಯತ್ಯಾಸ ಕಂಡು ಬಂದ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು.

ಆದಾಯ ತೆರಿಗೆ ಇಲಾಖೆ ಒಂದು ಸ್ಥಳದಲ್ಲಿ ನಡೆಸುವ ಶೋಧ ಮತ್ತು ಸರ್ವೇಕ್ಷಣೆ ಕಾರ್ಯಾಚರಣೆಯನ್ನೇ ಐಟಿ ದಾಳಿ ಎಂದು ಕರೆಯಲಾಗುತ್ತದೆ. ಒಬ್ಬ ವ್ಯಕ್ತಿ ಅಥವಾ ಸಂಸ್ಥೆ ಅಕ್ರಮವಾಗಿ ಹಣ ಇಟ್ಟುಕೊಂಡಿದ್ದು ತಿಳಿದುಬಂದರೆ ಅಥವಾ ಅನುಮಾನ ಬಂದರೆ ಐಟಿ ಇಲಾಖೆ ದಾಳಿ ಮಾಡುತ್ತದೆ.

 

 

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!