Saturday, October 12, 2024

ಕರ್ಪೂರಿ ಠಾಕೂರ್, ಕೃಷಿ ವಿಜ್ಞಾನಿ ಎಂಎಸ್ ಸ್ವಾಮಿನಾಥನ್ ಸೇರಿ ಐವರಿಗೆ ʼಭಾರತ ರತ್ನʼ ಪ್ರಧಾನ !

ಜನಪ್ರತಿನಿಧಿ (ನವ ದೆಹಲಿ) : ಮಾಜಿ ಪ್ರಧಾನಿಗಳಾದ ಚೌಧರಿ ಚರಣ್ ಸಿಂಗ್, ಮಾಜಿ ಪ್ರಧಾನಿ ಪಿವಿ ನರಸಿಂಹ ರಾವ್, ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಮತ್ತು ಕೃಷಿ ವಿಜ್ಞಾನಿ ಎಂಎಸ್ ಸ್ವಾಮಿನಾಥನ್ ಅವರಿಗೆ ಮರಣೋತ್ತರವಾಗಿ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ ವನ್ನು ನೀಡಲಾಯಿತು.  ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಾಲ್ಕು ಪುರಸ್ಕೃತರಿಗೆ ಭಾರತ ರತ್ನವನ್ನು ಪ್ರದಾನ ಮಾಡಿದರು.

ಐದನೇ ಪ್ರಶಸ್ತಿ ಪುರಸ್ಕೃತರಾದ ಎಲ್.ಕೆ.ಅಡ್ವಾಣಿ ಅನಾರೋಗ್ಯದ ಕಾರಣ ಸಮಾರಂಭದಲ್ಲಿ ಭಾಗವಹಿಸಿರಲಿಲ್ಲ. ರಾಷ್ಟ್ರಪತಿ ಮುರ್ಮು ಅವರಿಗೆ ನಾಳೆ(ಆದಿತ್ಯವಾರ) ಅವರ ನಿವಾಸದಲ್ಲಿ ಭಾರತ ರತ್ನವನ್ನು ನೀಡಿ ಗೌರವಿಸುವ ನಿರೀಕ್ಷೆಯಿದೆ.

ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ನರಸಿಂಹರಾವ್ ಅವರ ಪುತ್ರ ಪಿ.ವಿ.ಪ್ರಭಾಕರ್ ರಾವ್ ಅವರು ತಮ್ಮ ತಂದೆಗೆ ಪ್ರದಾನ ಮಾಡಿದ ಪ್ರಶಸ್ತಿಯನ್ನು ರಾಷ್ಟ್ರಪತಿಗಳಿಂದ ಸ್ವೀಕರಿಸಿದರು.

ಚೌಧರಿ ಚರಣ್ ಸಿಂಗ್ ಅವರ ಪರವಾಗಿ ಮೊಮ್ಮಗ ಮತ್ತು ರಾಷ್ಟ್ರೀಯ ಲೋಕದಳ (RLD)ದ ಮುಖ್ಯಸ್ಥ ಜಯಂತ್ ಸಿಂಗ್ ರಾಷ್ಟ್ರಪತಿ ಮುರ್ಮು ಅವರಿಂದ ಚೌಧರಿ ಚರಣ್‌ ಸಿಂಗ್‌ ಅವರಿಗ ಲಭಿಸಿದ ಮರಣೋತ್ತರ ಭಾರತ ರತ್ನ ಗೌರವವನ್ನು ಸ್ವೀಕರಿಸಿದರು.

ಸ್ವಾಮಿನಾಥನ್ ಅವರ ಪುತ್ರಿ ನಿತ್ಯಾ ರಾವ್ ಮತ್ತು ಕರ್ಪೂರಿ ಠಾಕೂರ್ ಅವರ ಪುತ್ರ ರಾಮ್ ನಾಥ್ ಠಾಕೂರ್ ಅವರು ರಾಷ್ಟ್ರಪತಿಗಳಿಂದ ಪ್ರಶಸ್ತಿ ಸ್ವೀಕರಿಸಿದರು.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಉಪ ರಾಷ್ಟ್ರಪತಿ ಜಗದೀಪ್ ಧಂಖರ್ ಮತ್ತು ಇತರ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇನ್ನು, ಈ ಬಗ್ಗೆ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ, ʼಈ ಮಹನೀಯರು ದೇಶಕ್ಕೆ ನೀಡಿದ ಮಹನೀಯ ಸೇವೆಯನ್ನು ಪರಿಗಣಿಸಿ ಭಾರತ ರತ್ನವನ್ನು ನೀಡುವುದಕ್ಕೆ ಆಯ್ಕೆ ಮಾಡಲಾಗಿದೆʼ ಎಂದು ಘೋಷಿಸಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!