Tuesday, April 30, 2024

ಮಾಜಿ ಸಂಸದೆ ತೇಜಸ್ವಿನಿ ಗೌಡ ಕಾಂಗ್ರೆಸ್‌ಗೆ ಘರ್ವಾಪ್ಸಿ | ಬಿಜೆಪಿಗೆ ಸಂವಿಧಾನ, ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ : ತೇಜಸ್ವಿನಿ ಆಕ್ರೋಶ

ಜನಪ್ರತಿನಿಧಿ (ನವ ದೆಹಲಿ) : ಮಾಜಿ ಸಂಸದೆ ಹಾಗೂ ಬಿಜೆಪಿಯಿಂದ ವಿಧಾನಪರಿಷತ್ ಸದಸ್ಯೆಯಾಗಿದ್ದ ತೇಜಸ್ವಿನಿ ಗೌಡ ಅವರು ಬಿಜೆಪಿ ತೊರೆದು ಇದೀಗ ಕಾಂಗ್ರೆಸ್‌ಗೆ ಸೇರ್ಪಡೆ ಆಗಿದ್ದಾರೆ.

ವಿಧಾನಪರಿಷತ್‌ ಬಿಜೆಪಿ ಸದಸ್ಯೆ ತೇಜಸ್ವಿನಿ ಗೌಡ ತಮ್ಮ ಸದಸ್ಯತ್ವಕ್ಕೆ ರಾಜಿನಾಮೆ ಸಲ್ಲಿಸಿದ ಬೆನ್ನಲ್ಲೇ ಅವರು ಇಂದು (ಶನಿವಾರ) ಕಾಂಗ್ರೆಸ್‌ ಸೇರ್ಪಡೆಗೊಂಡಿದ್ದಾರೆ.

ನವ ದೆಹಲಿಯ ಕಾಂಗ್ರೆಸ್‌ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಹಾಗೂ ಹಿರಿಯ ಮುಖಂಡ ಜೈರಾಂ ರಮೇಶ್‌ ಅವರ ಸಮ್ಮುಖದಲ್ಲಿ ತೇಜಸ್ವಿನಿ ಗೌಡ ಅವರು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ತೇಜಸ್ವಿನಿ ಗೌಡ ಅವರು ಪರಿಷತ್‌ ಸದಸ್ಯತ್ವಕ್ಕೆ ಬುಧವಾರ ರಾಜೀನಾಮೆ ನೀಡಿದ್ದರು.

ತೇಜಸ್ವಿನಿ ಗೌಡ ಬಿಜೆಪಿಯಿಂದ ಮೈಸೂರು ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಆದರೆ ಅವರಿಗೆ ಟಿಕೆಟ್ ಕೊಟ್ಟಿಲ್ಲ. ಇದರಿಂದ ಅವರು ಅಸಮಾಧಾನಗೊಂಡಿದ್ದರು. ಇದರ ಬೆನ್ನಲ್ಲೇ ಅವರು ಬಿಜೆಪಿಗೆ ಗುಡ್ ಬೈ ಹೇಳುತ್ತಾರೆ ಎಂದು ನಿರೀಕ್ಷೆ ಮಾಡಲಾಗಿತ್ತು. ಈ ನಡುವೆ ಅವರು ತಮ್ಮ ವಿಧಾನಪರಿಷತ್ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ದೆಹಲಿಯಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆ ಆಗಿದ್ದಾರೆ.

ಕಾಂಗ್ರೆಸ್‌ ಪಕ್ಷವನ್ನು ಸೇರ್ಪಡೆಗೊಂಡು ಮಾತನಾಡಿದ ಅವರು, ರಾಜ್ಯದಲ್ಲಿ ಲೋಕಸಭೆ ಚುನಾವಣೆಯಲ್ಲಿ 23 ಕ್ಷೇತ್ರ ಗೆಲ್ಲುವ ಅವಕಾಶ ಕಾಂಗ್ರೆಸ್‌ ಗೆ ಇದೆ. ನಾನು 9 ವರ್ಷ ಕಾಂಗ್ರೆಸ್‌ನಲ್ಲಿ ಇದ್ದೆ. ನಾನು ಲೋಕಸಭೆ ಚುನಾವಣೆಗೆ ನಿಂತಾದ ಠೇವಣಿ ಹಣವನ್ನು ತನ್ನ ಪಕ್ಷದ ಕಾರ್ಯಕರ್ತರು ನೀಡಿದ್ದರು ಎಂದು ನೆನಪಿಸಿಕೊಂಡರು.

ಪತ್ರಕರ್ತೆಯಾಗಿದ್ದ ನನಗೆ ಕಾಂಗ್ರೆಸ್ ಅವಕಾಶ ಕೊಟ್ಟಿತ್ತು. ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ವಿರುದ್ಧ ಸ್ಪರ್ಧೆಗೆ ಅವಕಾಶ ಕೊಟ್ಟಿತ್ತು. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಗೆ ಧನ್ಯವಾದ ಸಲ್ಲಿಸುತ್ತೇನೆ. ಪಕ್ಷದಲ್ಲಿ ಆಂತರಿಕ ಪ್ರಜಾಪ್ರಭುತ್ವಕ್ಕೆ ರಾಹುಲ್ ಗಾಂಧಿ ಮಾದರಿ. ಕಾಂಗ್ರೆಸ್ ಜನರ ಪರವಾಗಿ ಯಾವತ್ತೂ ನಿಂತಿದೆ ಎಂದರು.

‌ಬಿಜೆಪಿ ವಿರುದ್ಧ ಹರಿಹಾಯ್ದ ಅವರು, ಬಿಜೆಪಿಗೆ ಸಂವಿಧಾನ, ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ. ಮೋದಿ ಪ್ರಭಾವಿ ಆಗಿದ್ದರೆ ಕರ್ನಾಟಕದಲ್ಲಿ ಹಾಲಿ ಕೇಂದ್ರ ಸಚಿವರಿಗೆ ಏಕೆ ಟಿಕೆಟ್ ನೀಡಿಲ್ಲ? ಏಕೆ ಅವರ ವಿರುದ್ಧ ಗೋ ಬ್ಯಾಕ್ ಹೋರಾಟ ನಡೆಯುತ್ತಿದೆ? ಎಂದು ಪ್ರಶ್ನಿಸಿದರು.

Related Articles

Stay Connected

21,961FansLike
3,912FollowersFollow
21,700SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!