Sunday, September 8, 2024

ಪ್ರತಿಯೊಬ್ಬ ಅಭ್ಯರ್ಥಿಗಳ ಖರ್ಚು ವೆಚ್ಚಗಳ ಬಗ್ಗೆ ನಿಗಾ ವಹಿಸಿ: ವೆಚ್ಚ ವೀಕ್ಷಕ ಅಲೋಕ್ ಕುಮಾರ್

 

ಉಡುಪಿ: ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರತಿಯೊಬ್ಬ ಅಭ್ಯರ್ಥಿಗಳ ಚುನಾವಣಾ ಪ್ರಚಾರಕ್ಕೆ ಸಂಬಂದಿಸಿದ ಪ್ರತಿಯೊಂದು ವೆಚ್ಚದ ಬಗ್ಗೆ ಪ್ರತಿ ದಿನ ನಿಗಾ ವಹಿಸಿ ವರದಿ ಸಲ್ಲಿಸುವಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ವೆಚ್ಚ ವೀಕ್ಷಕರಾದ ಅಲೋಕ್ ಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಸಹಾಯಕ ವೆಚ್ಚ ವೀಕ್ಷಕರ ತಂಡದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.

ಚುನಾವಣಾ ಕೆಲಸಕ್ಕಾಗಿ ನೇಮಕವಾಗಿರುವ ಎಫ್.ಎಸ್.ಟಿ, ಎಸ್.ಎಸ್.ಟಿ, ವಿ.ವಿ.ಟಿ ಹಾಗೂ ಇನ್ನಿತರೆ ತಂಡಗಳು ಜವಾಬ್ದಾರಿಯುತವಾಗಿ ತಮಗೆ ವಹಿಸಿರುವ ಕೆಲಸ ನಡೆಸಿ, ಅಭ್ಯರ್ಥಿಗಳು ಚುನಾವಣಾ ಆಯೋಗ ನೀಡಿರುವ ನಿರ್ದೇಶನಗಳನ್ನು ಪಾಲಿಸುತ್ತಿರುವ ಬಗ್ಗೆ ನಿಗಾ ವಹಿಸುವುದರ ಜೊತೆಗೆ ಚುನಾವಣಾ ವೆಚ್ಚದ ವರದಿಯನ್ನು ನೀಡಬೇಕು. ಚುನಾವಣಾ ಆಯೋಗ ನೀಡಿರುವ ಮಾರ್ಗದರ್ಶನಗಳನ್ನು ತಪ್ಪದೇ ಪಾಲಿಸಬೇಕು ಎಂದರು.

ಹಣದ ಬಲದ ಮೇಲೆ ಚುನಾವಣೆ ನಡೆಯಬಾರದು. ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಚುನಾವಣೆ ನಡೆಯಬೇಕು. ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆಯನ್ನು ತೀವ್ರಗೊಳಿಸಿ, ಅನುಮಾನ ಬರುವ ವಾಹನಗಳನ್ನು ತಪಾಸಣೆ ನಡೆಸಬೇಕು. ದಾಖಲೆ ರಹಿತ ಹಣ ಅಥವಾ ಇನ್ನಿತರೆ ವಸ್ತುಗಳು ಸಾಗಾಣಿಕೆಯಾಗದಂತೆ ನೋಡಬೇಕು. ತಪಾಸಣೆ ವೇಳೆ ದಾಖಲೆ ರಹಿತ ಹಣ ಸಿಕ್ಕಲ್ಲಿ ಕೂಡಲೇ ಐ.ಟಿ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದರು.

ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿಗಳ ಚುನಾವಣಾ ವೆಚ್ಚ ನಿರ್ವಹಿಸಲು ನೇಮಕವಾಗಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದರು.

ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಮಾತನಾಡಿ, ಜಿಲ್ಲೆಯಲ್ಲಿ ಚುನಾವಣಾ ಕೆಲಸಕ್ಕಾಗಿ ನೇಮಕವಾಗಿರುವ ವಿವಿಧ ತಂಡಗಳು, ಅಧಿಕಾರಿಗಳು, ಸ್ಥಾಪನೆಯಾಗಿರುವ ಚೆಕ್‌ಪೋಸ್ಟ್‌ಗಳಲ್ಲಿನ ಅಧಿಕಾರಿಗಳು ಹಾಗೂ ಇನ್ನಿತರೆ ಚುನಾವಣಾ ಅಧಿಕಾರಿಗಳು ತಮಗೆ ನೀಡಿರುವ ಕಾರ್ಯಗಳನ್ನು ಚಾಚೂ ತಪ್ಪದೇ ಮಾಡಬೇಕು. ಹಣ ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳುವಾಗ ವೀಡಿಯೋ ಚಿತ್ರೀಕರಣವನ್ನು ತಪ್ಪದೇ ಮಾಡಬೇಕು ಎಂದರು.

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ದೂರುಗಳು ಬಂದಾಗ ಕೂಡಲೇ ಫ್ಲೈಯಿಂಗ್ ಸ್ಕ್ವಾಡ್ಸ್ ತಂಡಗಳು ಕಾರ್ಯಪ್ರವೃತ್ತರಾಗಿ ಅಕ್ರಮಗಳು ನಡೆಯದಂತೆ ನೋಡಿಕೊಳ್ಳಬೇಕು. ಒಂದೊಮ್ಮೆ ಉಲ್ಲಂಘನೆಯಾದಲ್ಲಿ ಅಂತಹವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿ?ಧಿಕಾರಿ ಡಾ.ಅರುಣ್.ಕೆ, ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿ.ಎಸ್, ಜಿ.ಪಂ.ನ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ್ ರಾವ್, ಚುನಾವಣೆಗೆ ಸಂಬಂಧಿಸಿದ ಎಫ್.ಎಸ್.ಟಿ, ಎಸ್.ಎಸ್.ಟಿ, ವಿ.ವಿ.ಟಿ ತಂಡದವರು ಸೇರಿದಂತೆ ಇನ್ನಿತರ ಜಿಲ್ಲಾ ಮಟ್ಟದ ನೋಡೆಲ್ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!