spot_img
Monday, March 24, 2025
spot_img

ಲೋಕಸಭಾ ಚುನಾವಣೆ : ರಾಜ್ಯದ ಏಳು ಜಿಲ್ಲಾ ಘಟಕದ ನೂತನ ಅಧ್ಯಕ್ಷರನ್ನು ನೇಮಿಸಿದ ಕಾಂಗ್ರೆಸ್‌ ಹೈಕಮಾಂಡ್‌ !

ಜನಪ್ರತಿನಿಧಿ (ಬೆಂಗಳೂರು): ಲೋಕಸಭೆ ಚುನಾವಣೆ ಸನ್ನಿಹಿತವಾಗುತ್ತಿದ್ದಂತೆ ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕದ ಏಳು ಜಿಲ್ಲೆಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿ ಈಕೂಡಲೇ ಜಾರಿಗೆ ಬರುವಂತೆ ಆದೇಶಿಸಿದೆ. ಬಳ್ಳಾರಿ ನಗರ, ಬೆಂಗಳೂರು ಪೂರ್ವ, ಹಾವೇರಿ, ಕೊಪ್ಪಳ, ಉಡುಪಿ, ರಾಯಚೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಧ್ಯಕ್ಷ ಸ್ಥಾನಕ್ಕೆ ನೂತನ ಹೆಸರುಗಳನ್ನು ಪಕ್ಷ ಘೋಷಣೆ ಮಾಡಿದೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಈ ಕೆಳಕಂಡ ಜಿಲ್ಲಾ/ನಗರ ಕಾಂಗ್ರೆಸ್ ಸಮಿತಿಗಳ ನೂತನ ಅಧ್ಯಕ್ಷರ ನೇಮಕದ ಪ್ರಸ್ತಾವನೆಗೆ ಕಾಂಗ್ರೆಸ್ ಅಧ್ಯಕ್ಷರು ತಕ್ಷಣದಿಂದ ಜಾರಿಗೆ ಬರುವಂತೆ ಅನುಮೋದನೆ ನೀಡಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ನಿನ್ನೆ(ಸೋಮವಾರ) ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈಮಧ್ಯೆ, ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಏಪ್ರಿಲ್ 5ರಂದು ದೆಹಲಿಯ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಕಚೇರಿಯಲ್ಲಿ ಬಿಡುಗಡೆ ಮಾಡಲಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಘೋಷಿಸಿದ್ದಾರೆ.

ಏಳು ಜಿಲ್ಲೆಗಳಿಗೆ ನೂತನ ಜಿಲ್ಲಾಧ್ಯಕ್ಷರ ನೇಮಿಸಿದ ಕಾಂಗ್ರೆಸ್‌ ಹೈಕಮಾಂಡ್‌ :

ಬಳ್ಳಾರಿ ನಗರ- ಪ್ರಶಾಂತ್ ಅಲ್ಲಂ ವೀರಭದ್ರಪ್ಪ

ಬೆಂಗಳೂರು ಪೂರ್ವ – ಕೆ. ನಂದಕುಮಾರ್

ಹಾವೇರಿ – ಸಂಜೀವ್ ಕುಮಾರ್ ನೀರಲಂಗಿ

ಕೊಪ್ಪಳ – ಅಮರೇಗೌಡ ಬಯ್ಯಾಪುರ

ಉಡುಪಿ – ಕಿಶನ್ ಹೆಗ್ಡೆ, ಕೊಳ್ಕೇಬೈಲ್

ರಾಯಚೂರು – ಬಸವರಾಜ ಇಟಗಿ

ಶಿವಮೊಗ್ಗ – ಪ್ರಸನ್ನ ಕುಮಾರ್

ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಕೆ. ಸಿ ವೇಣುಗೋಪಾಲ್, ‘ದೇಶದಾದ್ಯಂತ ಇರುವ ಜನರೊಂದಿಗೆ ವ್ಯಾಪಕ ಚರ್ಚೆ ನಡೆಸಿದ ನಂತರ, ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಏಪ್ರಿಲ್ 5 ರಂದು ಎಐಸಿಸಿ ಪ್ರಧಾನ ಕಚೇರಿಯಲ್ಲಿ ಬಿಡುಗಡೆ ಮಾಡಲಿದೆ. ನಂತರ ನಾವು ಏಪ್ರಿಲ್ 6 ರಂದು ಜೈಪುರ ಹಾಗೂ ಹೈದರಾಬಾದ್‌ನಲ್ಲಿ ಎರಡು ಮೆಗಾ ರ್ಯಾಲಿಗಳನ್ನು ನಡೆಸುತ್ತೇವೆ’ ಎಂದು ತಿಳಿಸಿದ್ದಾರೆ.

https://x.com/kcvenugopalmp/status/1774801563342557688?s=2   

Related Articles

Stay Connected

21,961FansLike
3,912FollowersFollow
22,300SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!