Saturday, October 12, 2024

ಅಬಕಾರಿ ನೀತಿ ಹಗರಣ | ಸಂಜಯ್‌ ಸಿಂಗ್‌ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ ʼಸುಪ್ರೀಂʼ

ಜನಪ್ರತಿನಿಧಿ (ನವ ದೆಹಲಿ): ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಎಎಪಿ ರಾಜ್ಯಸಭಾ ಸದಸ್ಯ ಸಂಜಯ್‌ ಸಿಂಗ್‌ಗೆ ಇಂದು (ಮಂಗಳವಾರ) ಸುಪ್ರೀಂ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಸುಪ್ರೀಂ ನೀಡಿದ ಈ ತೀರ್ಪನ್ನು ಆಮ್ ಆದ್ಮಿ ಪಕ್ಷ (ಎಎಪಿ) ಸ್ವಾಗತಿಸಿ, ಇದು ಪ್ರಜಾಪ್ರಭುತ್ವದ ಗೆಲುವು ಎಂದು ಹೇಳಿದೆ.

ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದೆ ಎಎಪಿ ನಾಯಕರು, ಇಡೀ ಅಬಕಾರಿ ನೀತಿ ಹಗರಣ ಪ್ರಕರಣವು ಸಾಕ್ಷಿಗಳಿಂದ ಬಲವಂತದ ಮೂಲಕ ಪಡೆದ ಹೇಳಿಕೆಗಳ ಮೇಲೆ ಅವಲಂಬಿತವಾಗಿದೆ ಎಂಬುವುದನ್ನು ನ್ಯಾಯಾಲಯದ ಆದೇಶವು ಬಹಿರಂಗಪಡಿಸಿದೆ ಎಂದು ಪ್ರತಿಪಾದಿಸಿದ್ದಾರೆ.

ದೇಶದಲ್ಲಿ ಪ್ರಜಾಪ್ರಭುತ್ವಕ್ಕೆ ಇದು ಒಂದು ದೊಡ್ಡ ದಿನ ಮತ್ತು ಸಂತೋಷ ಹಾಗೂ ಭರವಸೆಯ ಕ್ಷಣವಾಗಿದೆ’ ಎಂದು ದೆಹಲಿ ಸಚಿವ ಸೌರಭ್ ಭಾರದ್ವಾಜ್ ಹೇಳಿದರು.

ಇನ್ನು, ಎಎಪಿ ನಾಯಕರನ್ನು ಎರಡು ವರ್ಷಗಳಿಂದ ಸುಳ್ಳು ಪ್ರಕರಣಗಳಲ್ಲಿ ಗುರಿಯಾಗಿಸಿ ಬಂಧಿಸಲಾಗಿದೆ ಎಂದು ದೆಹಲಿ ಸರ್ಕಾರದ ಕ್ಯಾಬಿನೆಟ್ ಸಚಿವೆ ಅತಿಶಿ ಹೇಳಿದ್ದಾರೆ.

‘ನ್ಯಾಯಾಲಯದ ವಿಚಾರಣೆಯಲ್ಲಿ ಎರಡು ಮಹತ್ವದ ವಿಚಾರಗಳು ಬಹಿರಂಗಗೊಂಡಿವೆ. ಮೊದಲನೆಯದಾಗಿ, ಹಣದ ಜಾಡಿನ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನಿಸಿದಾಗ ಜಾರಿ ನಿರ್ದೇಶನಾಲಯ (ಇಡಿ) ಪ್ರತಿಕ್ರಿಯೆ ನೀಡಲು ವಿಫಲವಾಗಿದೆ; ಎರಡನೆಯದಾಗಿ, ಇ.ಡಿ ರೂಪಿಸಿರುವ ಈ ಪ್ರಕರಣವು ಅರವಿಂದ್ ಕೇಜ್ರಿವಾಲ್ ಅವರನ್ನು ದೋಷಾ ರೋಪಣೆ ಮಾಡಲು ಬಲವಂತಪಡಿಸಿದ ಸಾಕ್ಷಿಗಳ ಹೇಳಿಕೆಗಳ ಮೇಲೆ ನಿಂತಿದೆ’ ಎಂದು ಅವರು ಹೇಳಿದರು.

ಅಬಕಾರಿ ನೀತಿ ಪ್ರಕರಣದಲ್ಲಿ ಇ.ಡಿಯಿಂದ ಬಂಧನಕ್ಕೊಳಗಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸೋಮವಾರ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!