Saturday, October 12, 2024

ಪ್ರವಾಹ, ಬರಗಾಲ ಬಂದಾಗ, ರಾಜ್ಯಕ್ಕೆ ತೆರಿಗೆ ವಂಚನೆಯಾದಾಗ ಮೋದಿ ಬರಲಿಲ್ಲ, ಚುನಾವಣೆ ಬಂತು- ಮೋದಿ ಮತ್ತೆ ಮತ್ತೆ ಬರ್ತಾರೆ : ಸಿದ್ದರಾಮಯ್ಯ

ಜನಪ್ರತಿನಿಧಿ (ಮೈಸೂರು) : ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಜನರ ಧ್ವನಿ, ಸಂವಿಧಾನ ರಕ್ಷಣೆಯ ಧ್ವನಿ, ರಾಜ್ಯದ ಪರವಾದ ಧ್ವನಿ, ಸಾಮಾಜಿಕ ನ್ಯಾಯದ ಧ್ವನಿ, ಇವರು ನಮ್ಮ-ನಿಮ್ಮಲ್ಲರ ಧ್ವನಿಯಾಗಿ ಸಂಸತ್ತಿಗೆ ಹೋಗ್ತಾರೆ. ಒಗ್ಗಟ್ಟಾಗಿ ಕೆಲಸ ಮಾಡಿ ಗೆಲ್ಲಿಸಿ ಕಳಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮ ಅಭ್ಯರ್ಥಿ ಎಂ.ಲಕ್ಷ್ಮಣ್ ಸಾಮಾನ್ಯ ಒಕ್ಕಲಿಗ ಕುಟುಂಬದಿಂದ ಬಂದು ಶ್ರಮದಿಂದ ಮೇಲೆ ಬಂದ ಕಾರ್ಯಕರ್ತ. ಇವರು ಒಕ್ಕಲಿಗರೇ ಅಲ್ಲ ಎನ್ನುವ ಅಪಪ್ರಚಾರವನ್ನು ವ್ಯಾಪಕವಾಗಿ ಮಾಡುತ್ತಿದ್ದಾರೆ. ಆದರೆ, ಎಂ.ಲಕ್ಷ್ಮಣ್ ಅವರು ಅಪ್ಪಟ ಒಕ್ಕಲಿಗರು. ರಾಜ್ಯ ಬಿಜೆಪಿ ಒಕ್ಕಲಿಗರಿಗೆ ಟಿಕೆಟ್ ತಪ್ಪಿಸಿದೆ ಎನ್ನುವ ಅಸಮಾಧಾನ ಹಲವರಲ್ಲಿದೆ, ಆ ಕಾರಣಕ್ಕೇ ಲಕ್ಷ್ಮಣ್ ಅವರು ಒಕ್ಕಲಿಗರೇ ಅಲ್ಲ ಎನ್ನುವ ಅಪಪ್ರಚಾರ ಮಾಡುತ್ತಿದ್ದಾರೆ. ಈ ಸುಳ್ಳು ಮತ್ತು ಅಪಪ್ರಚಾರವನ್ನು ನಂಬಬೇಡಿ ಎಂದು ಅವರು ಹೇಳಿದ್ದಾರೆ.

ಚುನಾವಣೆ ಬಂತು, ಮೋದಿ ರಾಜ್ಯಕ್ಕೆ ಮೇಲಿಂದ ಮೇಲೆ ಬರ್ತಾರೆ : ಸಿದ್ದರಾಮಯ್ಯ

ನಮ್ಮ ನಾಡಿಗೆ ಪ್ರವಾಹ ಬಂದಾಗ ಪ್ರಧಾನಿ ನರೇಂದ್ರ ಮೋದಿ ಬರಲಿಲ್ಲ, ಬರಗಾಲ ಬಂದಾಗಲೂ ಮೋದಿ ಬರಲಿಲ್ಲ, ತೆರಿಗೆಯಲ್ಲಿ ರಾಜ್ಯಕ್ಕೆ ಅನ್ಯಾಯವಾದಾಗಲೂ ಮೋದಿ ಬರಲಿಲ್ಲ. ಚುನಾವಣೆ ಬಂತು ನೋಡಿ – ಮೋದಿ ರಾಜ್ಯಕ್ಕೆ ಮೇಲಿಂದ ಮೇಲೆ ಬರ್ತಾರೆ.

ಹೆಚ್.ಡಿ.ಕುಮಾರಸ್ವಾಮಿ ಅವರ ಸರ್ಕಾರವನ್ನು ಬೀಳಿಸಿದ್ದೇ ರಾಜ್ಯ ಬಿಜೆಪಿ. ಹಾಗಂತ ಇದೇ ಕುಮಾರಸ್ವಾಮಿ ಬಯ್ಯುತ್ತಿದ್ದರು. ಈಗ ದೇವೇಗೌಡರು ಮತ್ತು ಕುಮಾರಸ್ವಾಮಿ ಇಬ್ಬರೂ ಬಿಜೆಪಿ ಜತೆ ಸೇರಿಕೊಂಡಿದ್ದಾರೆ. ಆದ್ದರಿಂದ ಇವರು ತಮ್ಮ ಪಕ್ಷದ ಹೆಸರಿನಲ್ಲಿರುವ ಸೆಕ್ಯುಲರ್ ಪದವನ್ನು ಕಿತ್ತಾಕೋದು ಉತ್ತಮ ಎಂದೆ. ಇಷ್ಟು ಹೇಳಿದ್ದಕ್ಕೇ ದೇವೇಗೌಡರು ಸಿದ್ದರಾಮಯ್ಯರಿಗೆ ಗರ್ವ ಇದೆ ಎನ್ನುತ್ತಿದ್ದಾರೆ ಎಂದು ಹೇಳಿದರು.

ದೇವೇಗೌಡರ ಕುರಿತ ನಮಗಿರುವುದು ರಾಜಕೀಯ ವಿರೋಧ ಮಾತ್ರ. ನಿಮ್ಮ ರಾಜಕೀಯ ನಿಲುವುಗಳಿಗೆ ಮಾಡುವ ವಿರೋಧ. ಯಾವುದೇ ಕಾರಣಕ್ಕೂ ದೇವೇಗೌಡರ ಬಗ್ಗೆ ವೈಯುಕ್ತಿಕ ವಿರೋಧ ಇಲ್ಲವೇ ಇಲ್ಲ. ಚಾಮರಾಜ ಕ್ಷೇತ್ರದ ಶಾಸಕ ಹರೀಶ್ ಗೌಡರನ್ನೂ ಬಳಸಿ ಬಿಸಾಡಿದ ಜೆಡಿಎಸ್, ನನ್ನನ್ನೂ ಪಕ್ಷದಿಂದ ಹೊರಗೆ ಹಾಕಿದರು. ಇದೇ ರೀತಿ ಹಲವು ನಾಯಕರನ್ನು ಬಳಸಿ ಬಿಸಾಕಿದ್ದಾರೆ. ಇವರ ಈ ರಾಜಕೀಯ ವರ್ತನೆಗೆ ಮಾತ್ರ ನಮ್ಮ ವಿರೋಧ.

ಆದ್ದರಿಂದ ದೇವೇಗೌಡರು ಮತ್ತು ಕುಮಾರಸ್ವಾಮಿ ಅವರ ಕಣ್ಣೀರಿಗೆ ಮರಳಾಗದೆ, ಅವರ ಮಾತುಗಳನ್ನು, ಅವರ ವರ್ತನೆಯನ್ನು, ಪದೇ ಪದೇ ಬದಲಾಗುವ ಅವರ ನಿಲುವುಗಳನ್ನು ಪ್ರಶ್ನಿಸಿ ಪ್ರಭುದ್ಧವಾದ ಮತ್ತು ಖಚಿತವಾದ ರಾಜಕೀಯ ನಿರ್ಧಾರ ತೆಗೆದುಕೊಳ್ಳಬೇಕು ಎಂದರು.

ಮೈಸೂರಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಮಾಡಿದ, ನಾನು ಮುಖ್ಯಮಂತ್ರಿಯಾಗಿ ಮಾಡಿದ ಅಭಿವೃದ್ಧಿ ಕೆಲಸಗಳು ಕಣ್ಣ ಮುಂದಿವೆ. ರಾಜ್ಯ ಬಿಜೆಪಿ, ಜೆಡಿಎಸ್ ಸರ್ಕಾರದಲ್ಲಿ ಮೈಸೂರಿಗೆ ಏನು ಕೆಲಸ ಮಾಡಿದ್ದಾರೆ ತೋರಿಸಲಿ ಎಂದು ಅವರು ಆಶಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!