spot_img
Wednesday, January 22, 2025
spot_img

ದಕ್ಷಿಣ ಕನ್ನಡ : ಚೌಟ ಪರ ಪ್ರಚಾರಕ್ಕೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅಖಾಡಕ್ಕೆ !

ಜನಪ್ರತಿನಿಧಿ (ಮಂಗಳೂರು ) : ಲೋಕಸಭಾ ಚುನಾವಣೆಯಲ್ಲಿ ಪ್ರತಿಷ್ಠಿತ ಕಣ ಎಂದು ಹೇಳಲಾಗುವ ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟಾ ಪರ ಕೇಂದ್ರ ಸಚಿವೆ ಸ್ಮೃತಿ ಇರಾನಿ ಶುಕ್ರವಾರ ಪ್ರಚಾರ ನಡೆಸಲಿದ್ದಾರೆ. ನಾಳೆ(ಗುರುವಾರ) ಬೆಳಗ್ಗೆ 11 ಗಂಟೆಗೆ ಕ್ಯಾಪ್ಟನ್ ಚೌಟ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮಾಹಿತಿ ನೀಡಿದ್ದಾರೆ.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ಮುಖಂಡ ಸುನೀಲ್ ಕುಮಾರ್, ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್, ಉಡುಪಿ-ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿ ಹಾಗೂ ಪ್ರಮುಖ ನಾಯಕರು ಈ ಸಂದರ್ಭದಲ್ಲಿ ಇರಲಿದ್ದಾರೆ, ಪ್ರಚಾರಕ್ಕಾಗಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಅವರಿಗೂ ಮನವಿ ಮಾಡಿದ್ದೇವೆ ಎಂದು ತಿಳಿಸಿದರು. ಅಣ್ಣಾಮಲೈ ಅವರು ಬರುವುದು ಇನ್ನೂ ಖಚಿತವಾಗಿಲ್ಲ ಎಂದು ಅವರು ತಿಳಿಸಿದ್ದಾರೆ.

ಇನ್ನು, ಸತ್ಯಜಿತ್ ಸುರತ್ಕಲ್ ಅವರು ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬಹಿರಂಗವಾಗಿ ಬೆಂಬಲ ವ್ಯಕ್ತಪಡಿಸಿರುವ ಬಗ್ಗೆ ಮಾತನಾಡಿದ ಕುಂಪಲ , ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸುವುದಾಗಿ ಹೇಳಿದರು.

ಸುರತ್ಕಲ್ ಹೇಳಿಕೆ ಚುನಾವಣೆ ಮೇಲೆ ಪರಿಣಾಮ ಬೀರಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿಗೆ ಎಲ್ಲರ ಬೆಂಬಲ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಒಂಬತ್ತು ಮಂಡಲಗಳು, 61 ಮಹಾಶಕ್ತಿ ಕೇಂದ್ರಗಳು ಮತ್ತು 495 ಶಕ್ತಿ ಕೇಂದ್ರಗಳಲ್ಲಿ ಇದುವರೆಗೆ ಮೊದಲ ಸುತ್ತಿನ ಪ್ರಚಾರ ಪೂರ್ಣಗೊಂಡಿದೆ ಎಂದು ಅವರು ಹೇಳಿದರು. ಶನಿವಾರದಿಂದ ಬೂತ್ ಮಟ್ಟದ ಪ್ರಚಾರ ಆರಂಭವಾಗಲಿದೆ. ಮಹಾ ಅಭಿಯಾನ ಅಥವಾ ಮನೆ-ಮನೆ ಪ್ರಚಾರ ಏಪ್ರಿಲ್ 21 ರಿಂದ ಪ್ರಾರಂಭವಾಗಲಿದೆ ಎಂದು ಅವರು ತಿಳಿಸಿದರು.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!