spot_img
Wednesday, April 1, 2026
spot_img

ಉಡುಪಿ ಜಿಲ್ಲಾ ಕಾಂಗ್ರೆಸ್‌ : ಅಧ್ಯಕ್ಷ ಸ್ಥಾನಕ್ಕೆ ಕಿಶನ್‌ ಹೆಗ್ಡೆ ನೇಮಕಕ್ಕೆ ತಡೆ ನೀಡಿ ಹೈಕಮಾಂಡ್‌ ಆದೇಶ !

ಜನಪ್ರತಿನಿಧಿ (ಉಡುಪಿ) : ಕಾಂಗ್ರೆಸ್‌ ಹೈಕಮಾಂಡ್‌ ಇತ್ತೀಚೆಗೆ ಕರ್ನಾಟಕದ ಏಳು ಜಿಲ್ಲೆಗಳ ಕಾಂಗ್ರೆಸ್‌ ಘಟಕಕ್ಕೆ ನೂತನ ಜಿಲ್ಲಾಧ್ಯಕ್ಷರನ್ನು ಆಯ್ಕೆ ಮಾಡಿ ಆದೇಶಿಸಿತ್ತು. ಉಡುಪಿ ಜಿಲ್ಲೆಯ ಕಾಂಗ್ರೆಸ್‌ ಘಟಕದ ನೂತನ ಅಧ್ಯಕ್ಷರನ್ನಾಗಿ ಕಿಶನ್‌ ಹೆಗ್ಡೆ ಕೊಳ್ಕೆಬೈಲ್‌ ಅವರನ್ನು ಆಯ್ಕೆ ಮಾಡಿತ್ತು.

ಆದರೇ, ಈಗ ಸದ್ಯ ಉಡುಪಿ ಜಿಲ್ಲಾ ಕಾಂಗ್ರೆಸ್‌ ಘಟಕದ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಅವರನ್ನು ನೇಮಕ ಮಾಡಿಕೊಳ್ಳುವ ಪ್ರಕ್ರಿಯೆಯನ್ನು ಕಾಂಗ್ರೆಸ್‌ ಹೈಕಮಾಂಡ್‌ ತಡೆಹಿಡಿದು ಆದೇಶ ಹೊರಡಿಸಿದೆ.

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್‌ ಅವರು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಅವರಿಗೆ ಬರೆದಿರವ ಪತ್ರದಲ್ಲಿ ಈ ಆದೇಶವನ್ನು ಹೊರಡಿಸಿದ್ದಾರೆ.

ಕಿಶನ್‌ ಹೆಗ್ಡೆ ಕೊಳ್ಕೆಬೈಲ್‌ ಅವರನ್ನು ಹೈಕಮಾಂಡ್‌ ಜಿಲ್ಲಾ ಘಟಕದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವ ಕಾರಣಕ್ಕೆ ಜಿಲ್ಲಾ ಕಾಂಗ್ರೆಸ್‌ ವಲಯದಲ್ಲಿ ತೀವ್ರ ಅಸಮಾಧಾನ ಸೃಷ್ಟಿಯಾಗಿತ್ತು. ಈ ಬೆನ್ನಲ್ಲೇ ಕಿಶನ್‌ ಹೆಗ್ಡೆ ಅವರು ಅಧ್ಯಕ್ಷರಾಗಿ ನೇಮಕಗೊಳ್ಳುವ ಪ್ರಕ್ರಿಯೆಯನ್ನು ಹೈಕಮಾಂಡ್‌ ತಡೆಹಿಡಿದು ಆದೇಶ ನೀಡಿದೆ. ಸದ್ಯ, ಅಶೋಕ್‌ ಕುಮಾರ್‌ ಕೊಡವೂರು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!