spot_img
Saturday, June 21, 2025
spot_img

ಕರ್ನಾಟಕ ಹೈಕೋರ್ಟ್‌ನಲ್ಲಿ ಉದ್ಯೋಗವಕಾಶ : ಇಲ್ಲಿದೆ ಮಾಹಿತಿ

ಜನಪ್ರತಿನಿಧಿ (ಬೆಂಗಳೂರು) : ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ಒಟ್ಟು 8 ಲಾ ಕ್ಲರ್ಕ್​ ಮತ್ತು ರಿಸರ್ಚ್​ ಅಸಿಸ್ಟೆಂಟ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 17, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.  ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.

ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ ಇಲ್ಲಿದೆ.

ವಿದ್ಯಾರ್ಹತೆ: ಕರ್ನಾಟಕ ಹೈಕೋರ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಕಾನೂನಿನಲ್ಲಿ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ: ಕರ್ನಾಟಕ ಹೈಕೋರ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 17, 2024ಕ್ಕೆ ಗರಿಷ್ಠ 30 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.  ಮಾಸಿಕ  25,000 ರೂ. ವೇತನವಿದೆ.

ಉದ್ಯೋಗದ ಸ್ಥಳ: ಬೆಂಗಳೂರು

ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ: ಅಕಾಡೆಮಿಕ್ ರೆಕಾರ್ಡ್​, ಸಾಧನೆಗಳು, ಸಂದರ್ಶನ

ಅರ್ಜಿ ಹಾಕುವುದು ಹೇಗೆ?
ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ.

Related Articles

Stay Connected

21,961FansLike
3,912FollowersFollow
22,400SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!