spot_img
Saturday, December 7, 2024
spot_img

ಸಹಕಾರ ಸಂಘಗಳ ಕಾಯಿದೆ ತಿದ್ದುಪಡಿ 30 (ಬಿ) ಕುರಿತ ಆದೇಶಕ್ಕೆ ಉಚ್ಚ ನ್ಯಾಯಾಲಯ ತಡೆಯಾಜ್ಞೆ

ಉಡುಪಿ: ಸಹಕಾರ ಸಂಘಗಳು ಸಂಗ್ರಹಿಸುತ್ತಿರುವ ಠೇವಣಿಗಳಿಗೆ ಮತ್ತು ವಿತರಿಸುವ ಸಾಲಗಳಿಗೆ ಬಡ್ಡಿದರ ನಿಗದಿಪಡಿಸುವುದು ಸೇರಿದಂತೆ ಇನ್ನಿತರ ಅಂಶಗಳನ್ನು ಸೇರಿಸಿ ಹೊರಡಿಸಿರುವ ಆದೇಶ/ ನಿರ್ದೇಶನಕ್ಕೆ ರಾಜ್ಯ ಉಚ್ಛ ನ್ಯಾಯಾಲಯವು ದಿನಾಂಕ 4.4.2024 ರಂದು ತಡೆಯಾಜ್ಞೆ ನೀಡಿದೆ.

ಈ ತಡೆಯಾಜ್ಞೆಯು ರಾಜ್ಯದ ಎಲ್ಲಾ ಕೃಷಿಯೇತರ ಪತ್ತಿನ ಹಾಗೂ ಇತರೆ ಸಹಕಾರ ಸಂಘಗಳಿಗೆ ಅನ್ವಯಿಸುತ್ತದೆ. ಈ ಕುರಿತು ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ,ಉಡುಪಿ ಜಿಲ್ಲೆಯ ವಿವಿಧ ಸಹಕಾರ ಸಂಘಗಳನ್ನು ಒಗ್ಗೂಡಿಸಿ ನ್ಯಾಯಾಲಯದಲ್ಲಿ ರಿಟ್ ಪ್ರಕರಣ ದಾಖಲಿಸಿತ್ತು. ಇದು ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಉಡುಪಿ ಇದರ ಅಧ್ಯಕ್ಷರಾದ ಬಿ.ಜಯಕರ ಶೆಟ್ಡಿ ಇಂದ್ರಾಳಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!