Wednesday, September 11, 2024

ಲೋಕಸಭಾ ಚುನಾವಣಾ ಪ್ರಣಾಳಿಕೆ ʼನ್ಯಾಯ ಪತ್ರʼವನ್ನು ಬಿಡುಗಡೆಗೊಳಿಸಿದ ಕಾಂಗ್ರೆಸ್‌ !

ಜನಪ್ರತಿನಿಧಿ (ನವದೆಹಲಿ) :  ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆ ‘ನ್ಯಾಯ ಪತ್ರ’ವನ್ನು ಇಂದು(ಶುಕ್ರವಾರ) ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಬಿಡುಗಡೆ ಮಾಡಿದರು. ಮೋದಿ ಆಡಳಿತ ಶೈಲಿ ಬದಲಾವಣೆ, ಪ್ರಜಾಪ್ರಭುತ್ವ ಸರ್ಕಾರ ಸ್ಥಾಪನೆ ವಿಶ್ವಾಸ ಸೇರಿದಂತೆ ಹಲವು ಅಂಶಗಳನ್ನು ಕಾಂಗ್ರೆಸ್‌ ʼನ್ಯಾಯ ಪತ್ರʼ ಒಳಗೊಂಡಿದೆ.

ಲೋಕಸಭಾ ಸನ್ನಿಹಿತವಾಗುತ್ತಿರುವ ಸಂದರ್ಭದಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಚುನಾವಣಾ ತಂತ್ರಗಾರಿಕೆಯಲ್ಲಿ ತೊಡಗಿವೆ. ಈ ಭಾರಿ ಏನಾದರೂ ಮಾಡಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಧಿಕಾರದಿಂದ ಕೆಳಗಿಳಸಲೇಬೇಕೆಂದಿರುವ ʼಇಂಡಿಯಾʼ ಮೈತ್ರಿಕೂಟದ ನೇತೃತ್ವ ವಹಿಸಿಕೊಂಡಿರುವ ಕಾಂಗ್ರೆಸ್‌ ಇಂದು ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಚುನಾವಣಾ ಪ್ರಣಾಳಿಕೆಯನ್ನು ಕಾಂಗ್ರೆಸ್ ‘ನ್ಯಾಯಪತ್ರ’ ಎಂದು ಕರೆದಿದೆ.

ಕಾಂಗ್ರೆಸ್‌ ಚುನಾವಣಾ ಪ್ರಣಾಳಿಕೆ ʼನ್ಯಾಯ ಪತ್ರʼದಲ್ಲಿ ಏನಿದೆ ?

ಕಾಂಗ್ರೆಸ್‌ ಬಿಡುಗಡೆ ಮಾಡಿರುವ ಚುನಾವಣಾ ʼನ್ಯಾಯ ಪತ್ರʼದಲ್ಲಿ ಬಹಳ ಪ್ರಮುಖವಾಗಿ ಕಳೆದೊಂದು ದಶಕದಲ್ಲಿನ ಮೋದಿ ಸರ್ಕಾರದ ಆಡಳಿತ ಶೈಲಿಯನ್ನು ಆಮೂಲಾಗ್ರವಾಗಿ ಬದಲಾಯಿಸಲು ಪಣತೊಡಲಾಗಿದ್ದು, ಈ ಅವಕಾಶವನ್ನು ಹಾಲಿ ಸಾರ್ವತ್ರಿಕ ಚುನಾವಣೆ ನೀಡಿದೆ. ಧರ್ಮ, ಭಾಷೆ, ಜಾತಿಯನ್ನು ಮೀರಿ ದೇಶವನ್ನು ನೋಡುವಂತೆ ದೇಶದ ಜನರಿಗೆ ಕಾಂಗ್ರೆಸ್ ಮನವಿ ಮಾಡಲಾಗಿದ್ದು, ಬುದ್ಧಿವಂತಿಕೆಯಿಂದ ಆಯ್ಕೆ ಮಾಡಿ ಮತ್ತು ಪ್ರಜಾಪ್ರಭುತ್ವ ಸರ್ಕಾರವನ್ನು ಸ್ಥಾಪಿಸಿ ಎಂದು ಕಾಂಗ್ರೆಸ್ ಮತದಾರರಿಗೆ ಮನವಿ ಮಾಡಿಕೊಂಡಿದೆ.

ಅಂತೆಯೇ ಕಾಂಗ್ರೆಸ್ ರಾಷ್ಟ್ರವ್ಯಾಪಿ ಸಾಮಾಜಿಕ-ಆರ್ಥಿಕ ಮತ್ತು ಜಾತಿ ಗಣತಿ ನಡೆಸಲಿದ್ದು, SC, ST ಮತ್ತು OBC ಗಳಿಗೆ ಮೀಸಲಾತಿಯಲ್ಲಿ 50 ಪ್ರತಿಶತ ಮಿತಿಯನ್ನು ಹೆಚ್ಚಿಸಲು ಸಾಂವಿಧಾನಿಕ ತಿದ್ದುಪಡಿಯನ್ನು ಅಂಗೀಕರಿಸುವುದಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ.

ಕಾಂಗ್ರೆಸ್ ಉದ್ಯೋಗ ಖಾತ್ರಿ :

ಇನ್ನು ಉದ್ಯೋಗಗಳಲ್ಲಿ ಶೇಕಡಾ ಹತ್ತರಷ್ಟು ಕೋಟಾ, EWS ಗಾಗಿ ಶಿಕ್ಷಣ ಸಂಸ್ಥೆಗಳು ಎಲ್ಲಾ ಜಾತಿಗಳು, ಸಮುದಾಯಗಳಿಗೆ ತಾರತಮ್ಯವಿಲ್ಲದೆ ಜಾರಿಗೆ ತರಲಾಗುವುದು. ಸಾರ್ವತ್ರಿಕ ಆರೋಗ್ಯ ರಕ್ಷಣೆಗಾಗಿ 25 ಲಕ್ಷ ರೂ.ವರೆಗಿನ ನಗದು ರಹಿತ ವಿಮೆಯ ರಾಜಸ್ಥಾನ ಮಾದರಿಯನ್ನು ಅಳವಡಿಸಿಕೊಳ್ಳಲಾಗುವುದು. ಕೇಂದ್ರ ಸರ್ಕಾರದಲ್ಲಿ ವಿವಿಧ ಹಂತಗಳಲ್ಲಿ ಮಂಜೂರಾದ ಹುದ್ದೆಗಳಲ್ಲಿ ಸುಮಾರು 30 ಲಕ್ಷ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಸರ್ಕಾರವು ಪ್ರತಿ ವರ್ಷ ಘೋಷಿಸುವ ಎಂಎಸ್‌ಪಿಗೆ ಕಾಂಗ್ರೆಸ್ ಕಾನೂನು ಖಾತರಿ ನೀಡುತ್ತದೆ ಎಂದು ಭರವಸೆ ನೀಡಲಾಗಿದೆ.

ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ, ರಾಹುಲ್ ಗಾಂಧಿ ಉಪಸ್ಥಿತರಿದ್ದರು.

https://x.com/ANI/status/1776129085368115241

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!