spot_img
Thursday, December 5, 2024
spot_img

ʼಮದರಸಾ ಶಿಕ್ಷಣ ಮಂಡಳಿ ಕಾಯ್ದೆ 2004ʼ ಬಗ್ಗೆ ಅಲಹಾಬಾದ್‌ ಹೈಕೋರ್ಟ್‌ ನೀಡಿದ ತೀರ್ಪನ್ನು ತಡೆಹಿಡಿದು ʼಸುಪ್ರೀಂʼ ಆದೇಶ !

ಜನಪ್ರತಿನಿಧಿ (ನವ ದೆಹಲಿ) : ಉತ್ತರ ಪ್ರದೇಶ ʼಮದರಸಾ ಶಿಕ್ಷಣ ಮಂಡಳಿ ಕಾಯ್ದೆ 2004ʼಯು ಅಸಾಂವಿಧಾನಿಕವಾದದು. ಇದು, ಜಾತ್ಯತೀತ ತತ್ವಗಳನ್ನು ಉಲ್ಲಂಘಿಸಿದೆ ಎಂದು ಅಲಹಾಬಾದ್‌ ಹೈಕೋರ್ಟ್‌ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್‌ ಇಂದು (ಶುಕ್ರವಾರ) ತಡೆಹಿಡಿದು ಆದೇಶಿಸಿದೆ.

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ. ವೈ ಚಂದ್ರಚೂಡ್‌, ನ್ಯಾಯಮೂರ್ತಿಗಳಾದ ಜೆ.ಬಿ ಪಾರ್ದೀವಾಲ, ಮನೋಜ್‌ ಮಿಶ್ರ ಅವರಿದ್ದ ತ್ರಿಸದಸ್ಯ ನ್ಯಾಯಪೀಠ ಈ ಬಗ್ಗೆ ವಿಚಾರಣೆ ಮಾಡಿತ್ತು.

ಮದರಸಾ ಶಿಕ್ಷಣ ಮಂಡಳಿ ಕಾಯ್ದೆ ಜಾರಿಗೊಳಿಸಿರುವುದರಿಂದ ಜಾತ್ಯತೀತ ತತ್ವಗಳನ್ನು ಉಲ್ಲಂಘಿಸುತ್ತದೆ ಎಂಬ ಅಲಹಾಬಾದ್‌ ಹೈಕೋರ್ಟ್‌ನ ತೀರ್ಪು ಸರಿಯಲ್ಲ ಎಂದು ನ್ಯಾಯಪೀಠ ಹೇಳಿದೆ.

ವಿದ್ಯಾರ್ಥಿಗಳಿಗೆ ಹಾಗೂ ಅವರ ಪೋಷಕರಿಗೆ ನಿರ್ದಿಷ್ಟ ಶಿಕ್ಷಣವನ್ನು ಆಯ್ಕೆ ಮಾಡುವ ಅಧಿಕಾರ ಇದ್ದೇ ಇರುತ್ತದೆ. ಹಾಗಾಗಿ ಹೈಕೋರ್ಟ್‌ನ ತೀರ್ಪು ಹದಿನೇಳು ಲಕ್ಷ ವಿದ್ಯಾರ್ಥಿಗಳ ಶಿಕ್ಷಣ ಪಡೆಯುವ ಹಕ್ಕುಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಸುಪ್ರೀಂ ಕೋರ್ಟ್‌ ತನ್ನ ತೀರ್ಪನ್ನು ಸಮರ್ಥಿಸಿಕೊಂಡಿದೆ.

ರಾಜ್ಯಗಳು ಕಾನೂನಬದ್ಧವಾದ ಹಿತಾಸಕ್ತಿಗಳನ್ನು ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳುವ ಉದ್ದೇಶದಿಂದ ಹೊಂದಿದೆ. ಈ ಉದ್ದೇಶಕ್ಕಾಗಿ ಕಾಯ್ದೆಯನ್ನು ಸಂಪೂರ್ಣ ರದ್ದುಗೊಳಿಸಬೇಕೇ ಎಂಬುವುದನ್ನು ಪರಿಗಣಿಸುವ ಅಗತ್ಯವಿದೆ ಎಂಬುವುದನ್ನು ಪರಿಗಣಿಸುವ ಅಗತ್ಯವಿದೆ ಎಂದು ನ್ಯಾಯಪೀಠ ಪ್ರತಿಪಾದಿಸಿದೆ.

ಈ ಸಂದರ್ಭದಲ್ಲಿ ಮಾರ್ಷ್‌ ೨೨ರಂದು ಅಲಹಬಾದ್‌ ಹೈಕೋರ್ಟ್‌ ಹೊರಡಿಸದ್ದ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಸುಪ್ರೀಂ ಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ.

ಇನ್ನು, ಉತ್ತರಪ್ರದೇಶ ʼಮದರಸಾ ಶಿಕ್ಷಣ ಮಂಡಳಿ ಕಾಯ್ದೆ 2004ʼಯು ಅಸಾಂವಿಧಾನಿಕವಾದುದು. ಇದು ಜಾತ್ಯತೀತ ತತ್ವಗಳನ್ನು ಉಲ್ಲಂಘಿಸುತ್ತದೆ ಎಂದು ಅಲಹಾಬಾದ್‌ ಹೈಕೋರ್ಟ್‌ ಘೋಷಿಸಿತ್ತು. ರಾಜ್ಯದಲ್ಲಿ ಪ್ರಸ್ತುತ ಮದರಸಾಗಳಲ್ಲಿರುವ ವಿದ್ಯಾರ್ಥಿಗಳನ್ನು ಸಾಮಾನ್ಯ ವ್ಯವಸ್ಥೆಯ ಶಾಲೆಗಳಿಗೆ ದಾಖಲುಪಡಿಸಬೇಕು ಎಂದೂ ರಾಜ್ಯ ಸರ್ಕಾರಕ್ಕೆ ಕೋರ್ಟ್‌ ನಿರ್ದೇಶನ ನೀಡಿತ್ತು.

ನ್ಯಾಯಮೂರ್ತಿಗಳಾದ ವಿವೇಕ್‌ ಚೌಧರಿ ಹಾಗೂ ಸುಭಾಷ್‌ ವಿದ್ಯಾರ್ಥಿ ಅವರಿದ್ದ ನ್ಯಾಯ ಪೀಠ ಈ ಆದೇಶ ನೀಡಿತ್ತು. ಅನ್ಶುಮನ್‌ ಸಿಂಗ್‌ ರಾಥೋರ್‌ ಈ ಬಗ್ಗೆ ರಿಟ್‌ ಅರ್ಜಿ ಸಲ್ಲಿಸಿದ್ದರು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!