Saturday, September 14, 2024

ಚುನಾವಣೆಯ ಬಳಿಕ ಪ್ರಧಾನಿ ಅಭ್ಯರ್ಥಿಯ ಬಗ್ಗೆ ನಿರ್ಧಾರ : ರಾಗಾ

ಜನಪ್ರತಿನಿಧಿ (ನವದೆಹಲಿ) : ಈ ಲೋಕಸಭೆ ಚುನಾವಣೆ ಸಂವಿಧಾನ ಹಾಗೂ ಪ್ರಜಾಪ್ರಭುತ್ವವನ್ನು ನಾಶಪಡಿಸಲು ಪ್ರಯತ್ನಿಸುತ್ತಿರುವ ಶಕ್ತಿಗಳು ಹಾಗೂ ಅವುಗಳನ್ನು ರಕ್ಷಿಸುವ ಶಕ್ತಿಗಳ ನಡುವಿನ ಚುನಾವಣೆಯಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು(ಶುಕ್ರವಾರ) ಪರೋಕ್ಷವಾಗಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯನ್ನು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಪ್ರಣಾಳಿಕೆ ʼನ್ಯಾಯ ಪತ್ರʼ ಬಿಡುಗಡೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ರಾಗಾ, ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು. 2004ರ ಲೋಕಸಭಾ ಚುನಾವಣೆಗೆ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎಯ ಆಕ್ರಮಣಕಾರಿ ‘ಇಂಡಿಯಾ ಶೈನಿಂಗ್’ ಅಭಿಯಾನವನ್ನು ಉಲ್ಲೇಖಿಸಿದ ಅವರು, ‘ಆ ಅಭಿಯಾನವನ್ನು ಯಾರು ಗೆದ್ದಿದ್ದಾರೆಂದು ನೆನಪಿಸಿಕೊಳ್ಳಿ’ ಎಂದು ಹೇಳಿದ್ದಾರೆ.

ಅಂದಿನ ಚುನಾವಣೆಯಲ್ಲಿ ಬಿಜೆಪಿ ಸೋತು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಅಧಿಕಾರಕ್ಕೆ ಬಂದಿತ್ತು. ಇಂಡಿಯಾ ಮೈತ್ರಿಕೂಟ ಸೈದ್ಧಾಂತಿಕ ಚುನಾವಣೆಯನ್ನು ಎದುರಿಸುತ್ತಿದೆ ಎಂದು ನಿರ್ಧರಿಸಿದೆ ಹಾಗೂ ಚುನಾವಣೆಯ ನಂತರ ಪ್ರಧಾನಿ ಅಭ್ಯರ್ಥಿಯ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಅಪ್ರೆಂಟಿಸ್‌ಶಿಪ್ ಹಕ್ಕು, ಎಂಎಸ್‌ಪಿಗೆ ಕಾನೂನು ಖಾತರಿ ಸೇರಿದಂತೆ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳಿಗೆ ಮೀಸಲಾತಿಯಲ್ಲಿ ಶೇ 50 ರಷ್ಟು ಮಿತಿಯನ್ನು ಹೆಚ್ಚಿಸಲು ಸಾಂವಿಧಾನಿಕ ತಿದ್ದುಪಡಿಯನ್ನು ಅಂಗೀಕರಿಸುವುದು ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳಲ್ಲಿ ಒಂದಾಗಿದೆ.

ಕೇಂದ್ರ ಸರ್ಕಾರದ ವಿವಿಧ ಹಂತಗಳಲ್ಲಿ ಮಂಜೂರಾದ ಹುದ್ದೆಗಳಲ್ಲಿ ಖಾಲಿ ಇರುವ ಸುಮಾರು 30 ಲಕ್ಷ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪಕ್ಷ ಭರವಸೆ ನೀಡಿದೆ. ಪಕ್ಷ ಅಧಿಕಾರಕ್ಕೆ ಬಂದರೆ ಎಲ್ಲಾ ಜಾತಿಗಳು, ಸಮುದಾಯಗಳಿಗೆ ತಾರತಮ್ಯವಿಲ್ಲದೆ ಉದ್ಯೋಗ, ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ (ಇಡಬ್ಲ್ಯುಎಸ್) ಶಿಕ್ಷಣ ಸಂಸ್ಥೆಗಳಲ್ಲಿ ಶೇ 10 ರಷ್ಟು ಮೀಸಲಾತಿ ಜಾರಿಗೊಳಿಸುವುದಾಗಿ ಹೇಳಿದೆ.

https://x.com/ANI/status/1776149262646272315

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!