spot_img
Wednesday, April 1, 2026
spot_img

ಲೋಕಸಭಾ ಚುನಾವಣೆ : ಕಾಂಗ್ರೆಸ್‌ ಪ್ರಣಾಳಿಕೆ ʼಸುಳ್ಳುಗಳ ಕಂತೆʼ : ಬಿಜೆಪಿ

ಜನಪ್ರತಿನಿಧಿ (ನವ ದೆಹಲಿ ) : ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಇಂದು ಬಿಡುಗಡೆಗೊಳಿಸಿರುವ ಪ್ರಣಾಳಿಕೆಯ ಬಗ್ಗೆ ಬಿಜೆಪಿ ಟೀಕಿಸಿದ್ದು, ಕಾಂಗ್ರೆಸ್‌ ಪ್ರಣಾಳಿಕೆ ʼಸುಳ್ಳುಗಳ ಕಂತೆʼ ಎಂದಿದೆ.

ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆ ‘ನ್ಯಾಯ ಪತ್ರ’ವನ್ನು ಇಂದು(ಶುಕ್ರವಾರ) ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಬಿಡುಗಡೆ ಮಾಡಿದರು. ಮೋದಿ ಆಡಳಿತ ಶೈಲಿ ಬದಲಾವಣೆ, ಪ್ರಜಾಪ್ರಭುತ್ವ ಸರ್ಕಾರ ಸ್ಥಾಪನೆ ವಿಶ್ವಾಸ ಸೇರಿದಂತೆ ಹಲವು ಅಂಶಗಳನ್ನು ಕಾಂಗ್ರೆಸ್‌ ʼನ್ಯಾಯ ಪತ್ರʼ ಒಳಗೊಂಡಿದೆ.

ಕಾಂಗ್ರೆಸ್‌ ಮತದಾರಲ್ಲಿ ಗೊಂದಲ ಸೃಷ್ಟಿಸಲು ಯತ್ನಿಸುತ್ತಿದೆ ಎಂದು ಬಿಜೆಪಿ ಆರೋಪಿಸಿದ್ದಲ್ಲದೇ, ಹಲವು ದಶಕಗಳ ಕಾಲ ದೇಶದಲ್ಲಿ ಅಧಿಕಾರ ನಡೆಸಿದ್ದ ಕಾಂಗ್ರೆಸ್‌ ಪಕ್ಷ ಈ ಹಿಂದಿನ ಲೋಕಸಭಾ ಹಾಗೂ ವಿಧಾನಸಭಾ ಚುನಾವಣೆಗಳಲ್ಲಿ ನೀಡಿದ್ದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ ಎಂದು ಬಿಜೆಪಿ ಕಾಂಗ್ರೆಸ್‌ ವಿರುದ್ಧ ದೂರು ಹೇಳಿದೆ.

ದಶಕಗಳ ಕಾಲ ದೇಶದಲ್ಲಿ ಆಡಳಿತ ನಡೆಸಿದ್ದ ಕಾಂಗ್ರೆಸ್‌ ಈಗ ʼನ್ಯಾಯದ ಬಗ್ಗೆ ಮಾತನಾಡುತ್ತಿದೆ. ಅಧಿಕಾರದಲ್ಲಿದ್ದಾಗ ಎಂದೂ ನ್ಯಾಯ ಈಡೇಸಿಲ್ಲ ಎಂದು ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರ ಪ್ರಶ್ನೆಯೊಂದಲ್ಲೆ ಪ್ರತಿಕ್ರಿಯಿಸಿ ಬಿಜೆಪಿ ನಾಯಕ ಸುಧಾಂಶು ತ್ರಿವೇದಿ ಆರೋಪ ಮಾಡಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!