spot_img
Friday, January 17, 2025
spot_img

ಲೋಕಸಭಾ ಚುನಾವಣೆ : ಕಾರ್ಮಿಕರುಗಳಿಗೆ ವೇತನ ಸಹಿತ ರಜೆ

ಉಡುಪಿ:  ಭಾರತ ಚುನಾವಣಾ ಆಯೋಗವು 2024 ರ ಲೋಕಸಭಾ ಚುನಾವಣೆಯನ್ನು ಘೋಷಿಸಿದ್ದು, ರಾಜ್ಯದಲ್ಲಿ
ಎರಡು ಹಂತದಲ್ಲಿ ಚುನಾವಣೆ ನಿಗಧಿಯಾಗಿರುತ್ತದೆ.

ಜಿಲ್ಲೆಯ 15-ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಮೊದಲ ಹಂತದಲ್ಲಿ ಏಪ್ರಿಲ್ 26 ರಂದು ಹಾಗೂ 14-ಶಿವಮೊಗ್ಗ
ಲೋಕಸಭಾ ಕ್ಷೇತ್ರಕ್ಕೆ ಎರಡನೇ ಹಂತದಲ್ಲಿ ಮೇ 7 ರಂದು ಮತದಾನ ನಡೆಯಲಿರುವ ಹಿನ್ನೆಲೆ, ಸದರಿ ದಿನಗಳಂದು ಸದರಿ ಲೋಕಸಭಾ
ಕ್ಷೇತ್ರದ ವ್ಯಾಪ್ತಿಯಲ್ಲಿರುವ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ
ನಿರ್ವಹಿಸುತ್ತಿರುವ ಕಾರ್ಮಿಕರುಗಳಿಗೆ 1951 ರ ಪ್ರಜಾ ಪ್ರತಿನಿಧಿ ಕಾಯ್ದೆ, ಸೆಕ್ಷನ್ 135(ಬಿ) ರಡಿ ಹಾಗೂ ಕೈಗಾರಿಕಾ ಸಂಸ್ಥೆಗಳ
(ರಾಷ್ಟಿಯ ಮತ್ತು ಹಬ್ಬದ ರಜೆಗಳು) ಕಾಯ್ದೆ-1963 ಕಲಂ 3(ಎ) ರನ್ವಯ ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸಲು
ಅನುಕೂಲವಾಗುವಂತೆ ಎಲ್ಲಾ ಕಾರ್ಖಾನೆಗಳು, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರು ಮತದಾನದ ದಿನದಂದು ವೇತನ ಸಹಿತ
ರಜೆ ನೀಡಬೇಕು. ತಪ್ಪಿದಲ್ಲಿ ಸಂಬ0ಧಪಟ್ಟ ಸಂಸ್ಥೆ ಹಾಗೂ ನಿಯೊಜಕರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ
ಕೈಗೊಳ್ಳಲಾಗುವುದು ಎಂದು ಉಡುಪಿ ಉಪ ವಿಭಾಗದ ಕಾರ್ಮಿಕ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!