spot_img
Sunday, February 15, 2026
spot_img

ಬಿ. ಬಿ. ಹೆಗ್ಡೆ ಕಾಲೇಜು: ಮತದಾನ ಜಾಗೃತಿ ಅಭಿಯಾನ

ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ 1 ಮತ್ತು 2 ಹಾಗೂ ಚುನಾವಣಾ ಸಾಕ್ಷರತಾ ಸಂಘದ ಆಶ್ರಯದಲ್ಲಿ ನಮ್ಮ ಭೂಮಿ ಸಂಸ್ಥೆಯ ಸಹಯೋಗದೊಂದಿಗೆ ಮತದಾನ ಜಾಗೃತಿ ಅಭಿಯಾನ ಏಪ್ರಿಲ್ 4ರಂದು ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ನಮ್ಮ ಭೂಮಿ ಸಂಸ್ಥೆಯ ಗ್ರಾಮ ಮಟ್ಟದ ಸಂಯೋಜಕ ಗಣೇಶ ಶೆಟ್ಟಿ ಮಾತನಾಡಿ ಮತ ಚಲಾವಣೆ ನಮ್ಮ ಸಂವಿಧಾನಾತ್ಮಕ ಹಕ್ಕು, ನಾವು ಜವಾಬ್ದಾರಿಯುತವಾಗಿ ಮತ ಚಲಾಯಿಸಬೇಕು. ಆ ಮೂಲಕ ಪ್ರಜಾಪ್ರಭುತ್ವದ ಮೌಲ್ಯವನ್ನು ಎತ್ತಿ ಹಿಡಿಯಬೇಕು ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ|. ಕೆ. ಉಮೇಶ್ ಶೆಟ್ಟಿ ಸಭೆಯ ಅಧ್ಯಕ್ಷತೆ ವಹಿಸಿದರು. ನಮ್ಮ ಭೂಮಿ ಸಂಸ್ಥೆಯ ಗ್ರಾಮ ಮಟ್ಟದ ಸಂಯೋಜಕರಾದ ಶ್ರೇಯಸ್, ಅನಿತಾ ಹಾಗೂ ಆಶಾ ಉಪಸ್ಥಿತರಿದ್ದರು.

ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಡಾ| ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು. ಚುನಾವಣಾ ಸಾಕ್ಷರತಾ ಸಂಘದ ಸಂಯೋಜಕರಾದ ಪ್ರವೀಣ್ ಮೊಗವೀರ ಗಂಗೊಳ್ಳಿ ವಂದಿಸಿದರು. ಇನ್ನೋರ್ವ ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ದೀಪಾ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!