Tuesday, April 30, 2024

ಬಿಜೆಪಿ ಅತೃಪ್ತ ನಾಯಕರು, ಜಿದ್ದಾಜಿದ್ದಿನ ಕ್ಷೇತ್ರಗಳ ಮೇಲೆ ಚಾಣಾಕ್ಯ ತೀವ್ರ ನಿಗಾ !

ಜನಪ್ರತಿನಿಧಿ (ಬೆಂಗಳೂರು) : ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಬಿಜೆಪಿಯ ದೆಹಲಿ ತಂಡವು ರಾಜ್ಯದ ಕೆಲವು ಜಿದ್ದಾಜಿದ್ದಿನ ಲೋಕಸಭಾ ಕ್ಷೇತ್ರಗಳ ಮೇಲೆ ತೀವ್ರ ನಿಗಾ ಇಡುತ್ತಿದೆ.

ರಾಜ್ಯದಲ್ಲಿ ಬಿಜೆಪಿ 25 ಸಂಸದರು, ಒಬ್ಬರು ಸ್ವತಂತ್ರ, ಒಬ್ಬರು ಜೆಡಿಎಸ್ ಮತ್ತು ಒಬ್ಬರು ಕಾಂಗ್ರೆಸ್ ಸಂಸದರಿದ್ದಾರೆ. ಬಿಜೆಪಿ ಈ ಬಾರಿ 25 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದು, ಮೂರು ಸ್ಥಾನಗಳನ್ನು ಮೈತ್ರಿಕೂಟ ಜೆಡಿಎಸ್‌ಗೆ ಬಿಟ್ಟುಕೊಟ್ಟಿದೆ. ಹಾಲಿ ಸಂಸದರ ಪೈಕಿ ಅರ್ಧಕ್ಕಿಂತ ಹೆಚ್ಚು ಮಂದಿಯನ್ನು ಬದಲಿಸಲಾಗಿದ್ದು, ಟಿಕೆಟ್ ಸಿಗದ ನಾಯಕರು ಹಾಗೂ ಅವರ ಬೆಂಬಲಿಗರು ಅಸಮಾಧಾನಗೊಂಡಿದ್ದಾರೆ.

ಈ ಕೆಲವು ಅತೃಪ್ತ ನಾಯಕರನ್ನು ಬಿಜೆಪಿಯ ಹಿರಿಯ ನಾಯಕರಾದ ಬಿಎಸ್ ಯಡಿಯೂರಪ್ಪ, ಪ್ರಲ್ಹಾದ್ ಜೋಶಿ ಹಾಗೂ ಇತರ ನಾಯಕರು ಮನವೊಲಿಸಿದ್ದಾರೆ, ಸದ್ಯ ಅವರು ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇತ್ತೀಚೆಗೆ ರಾಜ್ಯಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಕೆಲವು ಭಿನ್ನಮತೀಯ ನಾಯಕರಿಗೆ ಎಚ್ಚರಿಕೆ ನೀಡಿದ್ದರು. ಪಕ್ಷದ ಕೆಲವು ನಾಯಕರೊಂದಿಗೆ ಅಮಿತ್ ಸಂಧಾನ ನಡೆಸಿದ್ದಾರೆ. ರಾಜ್ಯ ನಾಯಕರಿಗಿಂತ ಪ್ರತಿ ಕ್ಷೇತ್ರದಲ್ಲಿನ ಭಿನ್ನಾಭಿಪ್ರಾಯದ ಬಗ್ಗೆ ಅಮಿತ್ ಶಾ ಅವರಿಗೆ ಹೆಚ್ಚಿನ ಮಾಹಿತಿಯಿದೆ ಎಂದು ಮೂಲಗಳು ತಿಳಿಸಿವೆ.

Related Articles

Stay Connected

21,961FansLike
3,912FollowersFollow
21,700SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!