spot_img
Thursday, December 5, 2024
spot_img

55 ವರ್ಷದ ಮಹಿಳೆಯ ಮೇಲೆ ಅಮಾನುಷವಾಗಿ ಹಲ್ಲೆ, ಅರೆಬೆತ್ತಲೆ ಮೆರವಣಿಗೆ | ದೂರು ದಾಖಲು

ಜನಪ್ರತಿನಿಧಿ (ಪಂಜಾಬ್) : ವಧುವಿನ ಪೋಷಕರ ಇಚ್ಛೆಗೆ ವಿರುದ್ಧವಾಗಿ ವಿವಾಹವಾಗಿದ್ದಕ್ಕೆ 55 ವರ್ಷದ ವರನ ತಾಯಿಗೆ ಬೀಗರು ಅಮಾನುಷವಾಗಿ ಹಲ್ಲೆ ನಡೆಸಿ, ಅರೆಬೆತ್ತಲೆ ಮೆರವಣಿಗೆ ಮಾಡಿರುವ ಆತಂಕಕಾರಿ ದುರ್ಘಟನೆ ಪಂಜಾಬಿನ ತರ್ನ್ ತರನ್ ಎಂಬಲ್ಲಿ ನಡೆದಿರುವುದಾಗಿ ಪೊಲೀಸರು ಇಂದು(ಶನಿವಾರ) ತಿಳಿಸಿದ್ದಾರೆ.

ಅರೆಬೆತ್ತಲೆ ಮೆರವಣಿಯಲ್ಲಿ ಸಂತ್ರಸ್ತೆಯನ್ನು ಹಿಂಸಿಸುತ್ತಿರುವ ವಿಡಿಯೋ ನಿನ್ನೆ(ಶುಕ್ರವಾರ) ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಮಾರ್ಚ್ 31 ರಂದು ಸಂತ್ರಸ್ತೆಯ ಮಗ ಯುವತಿಯೊಂದಿಗೆ ಓಡಿಹೋಗಿ ಆಕೆಯ ಕುಟುಂಬದ ಇಚ್ಛೆಗೆ ವಿರುದ್ಧವಾಗಿ ಅವಳನ್ನು ವಿವಾಹವಾದ ಕೆಲವು ದಿನಗಳ ನಂತರ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿರುವುದಾಗಿ ರಾಷ್ಟ್ರೀಯ ಸುದ್ದಿ ಸಂಸ್ಥೆಗಳು ಮಾಹಿತಿ ನೀಡಿವೆ.

ಸಂತ್ರಸ್ತೆ ನೀಡಿರುವ ದೂರಿನ ಪ್ರಕಾರ, ಆಕೆ ತನ್ನ ಮನೆಯಲ್ಲಿ ಒಬ್ಬಳೇ ಇದ್ದಾಗ ಆಕೆಯ ಮಗನ ಮಾವನ ಮನೆಯವರು ಆಕೆಯ ಮೇಲೆ ಹಲ್ಲೆ ನಡೆಸಿ ಬಟ್ಟೆ ಹರಿದು ಹಾಕಿದ್ದಾರೆ ಎಂದು ತಿಳಿದುಬಂದಿದ್ದು, ಆ ಬಳಿಕ ಅರೆಬೆತ್ತಲೆ ಸ್ಥಿತಿಯಲ್ಲಿ ಗ್ರಾಮದಲ್ಲಿ ಮೆರವಣಿಗೆ ಮಾಡಿದರು ಎಂದು ಸಂತ್ರಸ್ತೆ ದೂರು ನೀಡಿದ್ದಾರೆ.

ಸದ್ಯ, ಈ ಪ್ರಕರಣದಲ್ಲಿ ಐವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಮೂವರನ್ನು ಕುಲ್ವಿಂದರ್ ಕೌರ್ ಮಣಿ, ಶರಣಜಿತ್ ಸಿಂಗ್ ಶಾನಿ ಹಾಗೂ ಗುರ್ಚರಣ್ ಸಿಂಗ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೂರಿನ ಆಧಾರದ ಮೇಲೆ, ಏಪ್ರಿಲ್ 3 ರಂದು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 (ಮಹಿಳೆಯ ಮೇಲೆ ಹಲ್ಲೆ ಅಥವಾ ಕ್ರಿಮಿನಲ್ ಬಲ), 354 ಬಿ (ವಿವಸ್ತ್ರಗೊಳ್ಳುವ ಉದ್ದೇಶದಿಂದ ಮಹಿಳೆಯ ಮೇಲೆ ಹಲ್ಲೆ) 354D (ಹಿಂಬಾಲಿಸುವಿಕೆ), 323 (ಸ್ವಯಂಪ್ರೇರಿತವಾಗಿ ಗಾಯವನ್ನು ಉಂಟುಮಾಡುವುದು) ಮತ್ತು 149 ಅಡಿಯಲ್ಲಿ ಎಫ್‌ಐಆರ್ ದಾಖಲು ಮಾಡಿಕೊಳ್ಳಲಾಗಿದೆ. ಯಾವೊಬ್ಬ ಆರೋಪಿಗಳನ್ನು ಈವರೆಗೆ ಬಂಧನಕ್ಕೊಳಪಡಿಸಿಲ್ಲ ಎಂಬ ಮಾಹಿತಿಯನ್ನು ಪೊಲೀಸರೇ ನೀಡಿರುವುದಾಗಿ ವರದಿಯಾಗಿದೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!