spot_img
Wednesday, January 22, 2025
spot_img

ಕಾಂಗ್ರೆಸ್ ಗ್ಯಾರಂಟಿಗಳಿಗೆ ಐದು ವರ್ಷ ವಾರಂಟಿ ಇದೆ : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ಕೋಲಾರ) : ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್, ರಸಗೊಬ್ಬರ, ಅಡುಗೆ ಎಣ್ಣೆ, ಬೇಳೆ-ಕಾಳು, ತರಕಾರಿ ಸೇರಿ ಪ್ರತಿಯೊಂದರ ಬೆಲೆಯನ್ನು ವಿಪರೀತ ಏರಿಸಿತ್ತು. ಇದರಿಂದ ನಾಡಿನ ಪ್ರತೀ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದ್ದವು. ಈ ಸಂಕಷ್ಟಕ್ಕೆ ಸ್ಪಂದಿಸಿ ಕಷ್ಟ ಕಡಿಮೆ ಮಾಡುವ ಉದ್ದೇಶದಿಂದ ಐದು ಗ್ಯಾರಂಟಿ ಭರವಸೆಗಳನ್ನು ಘೋಷಿಸಿದೆವು. ಅಧಿಕಾರಕ್ಕೆ ಬಂದು ಐದಕ್ಕೆ ಐದನ್ನೂ ಜಾರಿ ಮಾಡಿದೆವು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕೋಲಾರದಲ್ಲಿ ನಡೆದ ಬೃಹತ್‌ ರೋಡ್‌ ಶೋ ನಲ್ಲಿ ಮತದಾರರನ್ನು ಉದ್ದೇಶಿಸಿ ಅವರು ಮಾತನಾಡಿದರು. ಮೊದಲಿಗೆ ಗ್ಯಾರಂಟಿಗಳ ಜಾರಿ ಸಾಧ್ಯವೇ ಇಲ್ಲ ಎನ್ನುವ ಸುಳ್ಳನ್ನು ಬಿಜೆಪಿ ಹುಟ್ಟಿಸಿತು. ಗ್ಯಾರಂಟಿಗಳು ಜಾರಿಯಾದ ಬಳಿಕ ಗ್ಯಾರಂಟಿಗಳು ನಿಂತು ಹೋಗುತ್ತವೆ ಎನ್ನುವ ಹೊಸ ಸುಳ್ಳು ಸೃಷ್ಟಿಸಿದ್ದಾರೆ. ಯಾವುದೇ ಕಾರಣಕ್ಕೂ ನಮ್ಮ ಗ್ಯಾರಂಟಿಗಳು ನಿಲ್ಲುವುದಿಲ್ಲ. ಕಾಂಗ್ರೆಸ್ ಗ್ಯಾರಂಟಿಗಳಿಗೆ ಐದು ವರ್ಷ ವಾರಂಟಿ ಇದೆ ಎಂದು ಅವರು ಹೇಳಿದರು.

ಸೋಲುವ ಭೀತಿಯಿಂದ ಬಿಜೆಪಿ ಸೃಷ್ಟಿಸುವ ಸುಳ್ಳುಗಳಿಗೆ ಸೊಪ್ಪು ಹಾಕಬೇಡಿ. ರಾಜ್ಯ ಬಿಜೆಪಿ ಸುಳ್ಳಿನ ಕಾರ್ಖಾನೆ. ನಾವು ಕೊಟ್ಟ ಮಾತಿನಂತೆ ನಡೆದುಕೊಂಡು ನಿಮ್ಮ ಮತಕ್ಕೆ ಘನತೆ ತಂದಿದ್ದೇವೆ. ಲೋಕಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಗೆಲ್ಲಿಸಿ ನಿಮ್ಮ ಮತಕ್ಕೆ ಮೌಲ್ಯ ತಂದು ಕೊಡುವ ರೀತಿಯಲ್ಲಿ ಸರ್ಕಾರ ಕೆಲಸ ಮಾಡುತ್ತದೆ ಎಂದು ಅವರು ಭರವಸೆ ನೀಡಿದರು.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!