Tuesday, April 30, 2024

ಜೋಶಿ ವರ್ಸಸ್‌ ದಿಂಗಾಲೇಶ್ವರ ಶ್ರೀ : ಸ್ವತಂತ್ರ ಅಭ್ಯರ್ಥಿಯಾಗಿ ಲಿಂಗಾಯತ ಶ್ರೀ ಸ್ಪರ್ಧೆ, ಕುತೂಹಲ ಕೆರಳಿಸಿದ ಧಾರವಾಡ ಲೋಕಸಮರ !

ಜನಪ್ರತಿನಿಧಿ (ಧಾರವಾಡ) : ಧಾರವಾಡ ಲೋಕಸಭಾ ಕ್ಷೇತ್ರ ಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಬಿಜೆಪಿ ಅಭ್ಯರ್ಥಿಯಾಗಿ ಕಣದಲ್ಲಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ವಿರುದ್ಧ ಸದ್ಯ, ದಿಂಗಾಲೇಶ್ವರ ಲಿಂಗಾಯತ ಶ್ರೀಗಳು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂದು ತಿಳಿದುಬಂದಿದೆ.

ಧಾರವಾಡ ಲೋಕಸಭಾ ಕ್ಷೇತ್ರದಿಂದ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸತತ ಐದನೇ ಬಾರಿ ಬಿಜೆಪಿಯಿಂದ ಚುನಾವಣಾ ಕಣದಲ್ಲಿದ್ದಾರೆ. ಕಾಂಗ್ರೆಸ್‌ ತನ್ನ ಅಭ್ಯರ್ಥಿಯನ್ನಾಗಿ ವಿನೋದ್‌ ಅಸೂಟಿಯನ್ನು ಕಣಕ್ಕಿಳಿಸಿದೆ. ಇದರ ನಡುವೆ ಧಾರವಾಡದಿಂದ ದಿಂಗಾಲೇಶ್ವರ ಸ್ವಾಮೀಜಿಗಳು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವುದು ಧಾರಾವಾಡ ಲೋಕಸಭಾ ಚುನಾವಣಾ  ಕಣವನ್ನು ಮತ್ತಷ್ಟು ಕುತೂಹಲಭರಿತವನ್ನಾಗಿಸಿದೆ.

ದಿಂಗಾಲೇಶ್ವರ ಶ್ರೀಗಳು ಈಗ ಸದ್ಯ ಧಾರವಾಡ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುತ್ತಿರುವುದರಿಂದ ಲಿಂಗಾಯತ ಮತಗಳು ವಿಭಜನೆಯಾಗಿ ಪ್ರಹ್ಲಾದ್‌ ಜೋಶಿ ಗೆಲುವು ಕಷ್ಟ ಆಗಬಹುದು ಎಂದು  ಹೇಳಲಾಗುತ್ತಿದೆ.

ಪ್ರಹ್ಲಾದ ಜೋಶಿ ಅವರನ್ನು ಸೋಲಿಸುವುದೇ ತಮ್ಮ ಗುರಿ ಎಂದು ದಿಂಗಾಲೇಶ್ವರ ಸ್ವಾಮಿ ಬಹಿರಂಗವಾಗಿಯೇ ಹೇಳಿದ್ದು, ಧಾರವಾಡ ಸಂಸದ ಅಭ್ಯರ್ಥಿಯನ್ನು ಬದಲಾವಣೆ ಮಾಡುವಂತೆ ಕರೆ ನೀಡಿದ್ದರು. ಅವರ ನೇತೃತ್ವದಲ್ಲಿ ಸಭೆಗಳನ್ನು ನಡೆಸಲಾಗಿತ್ತು. ನಾನು ಸ್ವಂತವಾಗಿ ಮಾತನಾಡುತ್ತಿಲ್ಲ, ಪ್ರಲ್ಹಾದ್ ಜೋಶಿಯವರ ಕೈಯಲ್ಲಿ ನೋವು ಅನುಭವಿಸಿದ ಜನರ ಧ್ವನಿಗಾಗಿ ನಾನು ಹೋರಾಟ ನಡೆಸುತ್ತಿದ್ದೆನೆ. ಅವರ ಆಡಳಿತ ವಿನಾಶಕಾರಿಯಾಗಿದೆ ಎಂದು ಹೇಳಿದ್ದರು.

ಇನ್ನು, ಪ್ರಹ್ಲಾದ ಜೋಶಿ ಅವರನ್ನು ಸೋಲಿಸುವುದೇ ತಮ್ಮ ಗುರಿ ಎಂದು ದಿಂಗಾಲೇಶ್ವರ ಸ್ವಾಮಿ ಬಹಿರಂಗವಾಗಿಯೇ ಹೇಳಿದ್ದರು, ಧಾರವಾಡ ಸಂಸದ ಅಭ್ಯರ್ಥಿಯನ್ನು ಬದಲಾವಣೆ ಮಾಡುವಂತೆ ಕರೆ ನೀಡಿದ್ದರು. ನಾನು ಸ್ವಂತವಾಗಿ ಮಾತನಾಡುತ್ತಿಲ್ಲ, ಪ್ರಲ್ಹಾದ್ ಜೋಶಿಯವರ ಕೈಯಲ್ಲಿ ನೋವು ಅನುಭವಿಸಿದ ಜನರ ಧ್ವನಿಗಾಗಿ ನಾನು ಹೋರಾಟ ನಡೆಸುತ್ತಿದ್ದೆನೆ. ಅವರ ಆಡಳಿತ ವಿನಾಶಕಾರಿಯಾಗಿದೆ, ತಮ್ಮ ನಿಲುವು ಬದಲಿಸುತ್ತಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸ್ವಾಮೀಜಿ ಇದರಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಖಡಕ್ ಆಗಿ ಹೇಳಿದ್ದರು.

Related Articles

Stay Connected

21,961FansLike
3,912FollowersFollow
21,700SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!