spot_img
Friday, March 21, 2025
spot_img

ಬರ ಪರಿಹಾರ ಕೋರಿ ರಾಜ್ಯ ಸರ್ಕಾರದ ಅರ್ಜಿ | ಕೇಂದ್ರ ಸರ್ಕಾರಕ್ಕೆ ʼಸುಪ್ರೀಂʼ ನೋಟೀಸ್‌

ಜನಪ್ರತಿನಿಧಿ (ನವ ದೆಹಲಿ) : ಬರಗಾಲದಿಂದ ಕಂಗೆಟ್ಟಿರುವ ಕರ್ನಾಟಕ ರಾಜ್ಯ ಸರ್ಕಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬರ ಪರಿಹಾರ ನೀಡುತ್ತಿಲ್ಲ, ನೆರವೂ ನೀಡುತ್ತಿಲ್ಲ ಎಂದು ಆರೋಪಿಸಿ ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ, ತನ್ನ ಹೋರಾಟವನ್ನು ಸುಪ್ರೀಂ ಅಂಗಳಕ್ಕೆ ಕೊಂಡೊಯ್ದಿದೆ.

ಬರಗಾಲದ ಪರಿಹಾರ ಬಿಡುಗಡೆ ಕೋರಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌, ಕೇಂದ್ರ ಸರ್ಕಾರಕ್ಕೆ ನೋಟೀಸ್‌ ನೀಡಿದ್ದು, ಎರಡು ವಾರಗಳಲ್ಲಿ ಪ್ರತಿಕ್ರಿಯಿಸುವಂತೆ ಆದೇಶ ನೀಡಿದೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ(ಎನ್‌ಡಿಆರ್‌ಎಫ್‌) ಈ ಕೂಡಲೇ ಹಣ ಬಿಡುಗಡೆಗೊಳಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ ಕದ ತಟ್ಟಿತ್ತು. ಪರಿಹಾರ ಬಿಡುಗಡೆಗೆ ಆಗ್ರಹಿಸಿ ಕೇಂದ್ರದ ವಿರುದ್ಧ ರಾಜ್ಯ ಈ ಹಿಂದೆ ನಡೆಸುತ್ತಿರುವ ಹೋರಾಟ ಮತ್ತೊಂದು ಆಯಾಮ ಪಡೆದಿದೆ. ಕೇಂದ್ರದ ಜೊತೆ ರಾಜ್ಯ ಸರ್ಕಾರ ಪತ್ರ ವ್ಯವಹಾರ ನಡೆಸಿತ್ತು. ರಾಜ್ಯ ಸಚಿವರ ನಿಯೋಗಚು ಕೇಂದ್ರ ಸಚಿವರನ್ನು ಭೇಟಿ ಮಾಡಿತ್ತು. ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯ ಸರ್ಕಾರದಿಂದ ಮನವಿಯನ್ನೂ ಸಲ್ಲಿಸಲಾಗಿತ್ತು. ಹಲವು ಸುತ್ತಿನ ಆಪಾದನಾ ಪರ್ವಗಳನ್ನು ನಡೆಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ, ಸಚಿವ, ಶಾಸಕರ ದಂಡಿನೊಂದಿಗೆ ದೆಹಲಿಯ ಜಂತರ್‌ ಮಂತರ್‌ನಲ್ಲಿ ಧರಣಿಯನ್ನೂ ನಡೆಸಿ ದೇಶದ ಗಮನ ಸೆಳೆದಿತ್ತು.

Related Articles

Stay Connected

21,961FansLike
3,912FollowersFollow
22,300SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!