Tuesday, April 30, 2024

ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಸರ್ವಿಸ್ ರಸ್ತೆಗೆ ಪಲ್ಟಿಯಾದ ಕಾರು: ಮಹಿಳೆ ಸಾವು

ಕುಂದಾಪುರ: ರಾಷ್ಟ್ರೀಯ ಹೆದ್ದಾರಿ 66 ಕೆ‌ಎಸ್‌ಆರ್‌ಟಿಸಿ ಡಿಪೋ ಹತ್ತಿರ ಟೊಯೋಟೊ ಇನ್ನೋವಾ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಡಿವೈಡರ್‌ಗೆ ಡಿಕ್ಕಿ ಹೊಡೆದು ಸರ್ವೀಸ್ ರೋಡಿಗೆ ಪಲ್ಟಿಯಾಗಿದೆ. ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.

ಕೇರಳ ರಾಜ್ಯದ ಪಾಂಡಿಚೇರಿ ಎಂಬಲ್ಲಿಗೆ ಹಿಂತಿರುಗುತ್ತಿದ್ದ ಮೂವರು ಪ್ರಯಾಣಿಸುತ್ತಿದ್ದ ಟೊಯೋಟೊ ಇನ್ನೋವಾ ಕಾರು ಅಪಘಾತಗೀಡಾಗಿದೆ.

ವೇಗವಾಗಿ ಚಲಿಸುತ್ತಿದ್ದ ಕಾರು ಹೆದ್ದಾರಿಯ ಗಾರ್ಡ್‌ಗೆ ಡಿಕ್ಕಿ ಹೊಡೆದು ಗಾರ್ಡ್ ಮುರಿದುಕೊಂಡು ಸರ್ವಿಸ್ ರಸ್ತೆಗೆ ಉಲ್ಟಾವಾಗಿ ಬಿದ್ದಿದೆ. ಕಾರು ಸರ್ವೀಸ್ ರಸ್ತೆಗೆ ಬಿದ್ದ ಪರಿಣಾಮ ಕೆಲವೊತ್ತು ಸರ್ವೀಸ್ ರಸ್ತೆಯಲ್ಲಿ ಸಂಚಾರ ಸಮಸ್ಯೆಯಾಯಿತು.

Related Articles

Stay Connected

21,961FansLike
3,912FollowersFollow
21,700SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!