Sunday, September 8, 2024

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ದ.ಕ ಜಿಲ್ಲೆ ಪ್ರಥಮ, ಉಡುಪಿ ದ್ವಿತೀಯ

ಜನಪ್ರತಿನಿಧಿ (ಬೆಂಗಳೂರು) : ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) ಪ್ರಕಟಿಸಿದೆ. ಮಂಡಳಿ ಅಧ್ಯಕ್ಷೆ ಎನ್. ಮಂಜುಶ್ರೀ, ಪರೀಕ್ಷಾ ವಿಭಾಗದ ನಿರ್ದೇಶಕ ಗೋಪಾಲಕೃಷ್ಣ ಸೇರಿ ಹಿರಿಯ ಅಧಿಕಾರಿಗಳು ಪತ್ರಿಕಾಗೋಷ್ಠಿ ನಡೆಸಿ ಫಲಿತಾಂಶವನ್ನು ಪ್ರಕಟಿಸಿದ್ದಾರೆ. ಬೆಳಗ್ಗೆ 11 ಗಂಟೆಗೆ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದ್ದು, ನಾಡಿದ್ದು ಕಾಲೇಜ್‌ಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಸುಮಾರು 6 ಲಕ್ಷದ 98 ಸಾವಿರ ವಿದ್ಯಾರ್ಥಿಗಳ ಪರೀಕ್ಷೆಗೆ ಹಾಜರಾಗಿದ್ದರು. ಇದರಲ್ಲಿ 5,52,690 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ದ್ವೀತಿಯ ಪಿಯುಸಿ ಪರೀಕ್ಷೆಯಲ್ಲಿ ಈ ಬಾರಿಯೂ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ (97.37%) ಪಡೆದುಕೊಂಡಿದೆ. ಶೇಕಡಾ 96.80 ಫಲಿತಾಂಶದೊಂದಿಗೆ ಉಡುಪಿ ಜಿಲ್ಲೆ ದ್ವೀತಿಯ ಸ್ಥಾನ ಪಡೆದುಕೊಂಡಿದ್ದು, ವಿಜಯಪುರ ಶೇ. 94.89 ಫಲಿತಾಂಶದೊಂದಿಗೆ ತೃತೀಯ ಸ್ಥಾನ ಪಡೆದುಕೊಂಡಿದೆ.

ಕಲಾ ವಿಭಾಗದಲ್ಲಿ 596 ಅಂಕ ಗಳೊಂದಿಗೆ ಮೇದಾ ಡಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ಬೆಂಗಳೂರಿನ ಎನ್​​ಎಂಕೆಆರ್​​ವಿ ಪಿಯು ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದಾರೆ. ಉಳಿದಂತೆ ವಿಜಯಪುರ ಎಸ್​​ಎಸ್ ಪಿಯು ಕಾಲೇಜಿನ ವೇದಾಂತ್ 596 ಅಂಕ ಪಡೆದುಕೊಂಡಿದ್ದು, ಬಳ್ಳಾರಿಯ INDU INDP ಪಿಯು ಕಾಲೇಜಿನ ಕವಿತಾ ಬಿವಿ 596 ಅಂಕ ಪಡೆದುಕೊಂಡಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ತುಮಕೂರಿನ ವಿದ್ಯಾನಿಧಿ ಪಿಯು ಕಾಲೇಜಿನ ಗಾನವಿ ಎಂ 597 ಅಂಕಗಳೊಂದಿಗೆ ಮೊದಲ ರ್ಯಾಂಕ್ ಪಡೆದುಕೊಂಡಿದ್ದಾರೆ. ಉಳಿದಂತೆ ಶಿವಮೊಗ್ಗದ ಕುಮುದ್ವತಿ ಪಿಯು ಕಾಲೇಜಿನ ಪವನ್ ಎಂ.ಎಸ್-596 ಅಂಕ, ಉಡುಪಿಯ ಪೂರ್ಣ ಪ್ರಜ್ಙ ಪಿಯು ಕಾಲೇಜಿನ ಹರ್ಷಿತ್ ಎಸ್​ ಎಚ್​ 596 ಅಂಕಗಳನ್ನು ಪಡೆದುಕೊಂಡಿದ್ದಾರೆ.

ಸೈನ್ಸ್‌ ವಿಭಾಗದಲ್ಲಿ ಧಾರವಾಡ ವಿದ್ಯಾನಿಕೇತನ್ ಎಸ್ ಇ ಪಿಯು ಕಾಲೇಜಿನ ಎ ವಿದ್ಯಾಲಕ್ಷ್ಮೀ 598 ಅಂಕಗಳೊಂದಿಗೆ ರಾಜ್ಯದಲ್ಲಿ ಪ್ರಥಮ ರ್ಯಾಂಕ್ ಪಡೆದುಕೊಂಡಿದ್ದಾರೆ. ಮೈಸೂರು ಆದಿಚುಂಚಂಗಿರಿ ಪಿಯು ಕಾಲೇಜಿನ ಕೆಎಚ್ ಉರ್ವೀಶ್ ಪ್ರಶಾಂತ್ 597 ಅಂಕಗಳೊಂದಿಗೆ ಎರಡನೇ ಸ್ಥಾನ ಗಳಿಸಿದ್ದಾರೆ.

ಫಲಿತಾಂಶ ಪರಿಶೀಲನೆ ಮಾಡುವ ವಿಧಾನ :

  • nic.in ಅಥವಾ pue.kar.nic ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ.
  • ಮುಖಪುಟದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
  • ಲಾಗಿನ್ ಪುಟದಲ್ಲಿ ನಿಮ್ಮ ನೋಂದಣಿ ಸಂಖ್ಯೆಯೊಂದಿಗೆ ಯಾವ ವಿಭಾಗವೆಂದು ಕ್ಲಿಕ್ ಮಾಡಬೇಕು.
  • ವಿಜ್ಞಾನ, ವಾಣಿಜ್ಯ ಮತ್ತು ಕಲೆ ಆಯ್ಕೆ ಮಾಡಿಕೊಳ್ಳಿ.
  • ಕ್ಲಿಕ್ ಮಾಡಿದಾಗ ನಿಮಗೆ ಫಲಿತಾಂಶವು ಸ್ಕ್ರೀನ್ ಮೇಲೆ ಕಾಣಿಸುತ್ತದೆ.
  • ಬಳಿಕ ಫಲಿತಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!