spot_img
Saturday, December 7, 2024
spot_img

ಬಿಡದಿ ತೋಟದ ಮನೆಯಿಂದ ಮದ್ಯ, ಬಾಡೂಟದ ಘಮಲು : ಕಾಂಗ್ರೆಸ್‌ ಆರೋಪ

ಜನಪ್ರತಿನಿಧಿ (ರಾಮನಗರ) : ಜೆಡಿಎಸ್ ಪಕ್ಷದ ಹೆಡ್ಡಾಫೀಸ್‌ನಂತಿರುವ ಬಿಡದಿ ತೋಟದ ಮನೆಯಿಂದ ಮದ್ಯ ಹಾಗೂ ಬಾಡೂಟದ ಘಮಲು ಹೊರಬರುತ್ತಿದೆಯಂತೆ? ಸೋಲಿನ ಭೀತಿಯಿಂದ ಹೊಸ್ತೊಡಕಿನ ಹೆಸರಲ್ಲಿ ಮತದಾರರಿಗೆ, ಕಾರ್ಯಕರ್ತರಿಗೆ ಬಾಡೂಟದ ವ್ಯವಸ್ಥೆ ಮಾಡಿರುವ ಕುರಿತು ಮಾಹಿತಿಗಳಿದ್ದರೂ ರಾಜ್ಯದ ಚುನಾವಣಾಧಿಕಾರಿ ಅವರು ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕೂತಿರುವುದೇಕೆ? ಎಂದು ರಾಜ್ಯ ಕಾಂಗ್ರೆಸ್‌ ಪ್ರಶ್ನೆ ಮಾಡಿದೆ.

ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಪರೋಕ್ಷವಾಗಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ವಿರುದ್ಧ ಟೀಕಿಸಿದ ಕಾಂಗ್ರೆಸ್‌, ಸೋಲಿನ ಭಯದಲ್ಲಿರುವ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಮದ್ಯ, ಮಾಂಸದ ರುಚಿ ತೋರಿಸಿ ಮತ ಕೇಳಲು ಮುಂದಾಗಿವೆಯೇ? ಎಂದು ಪ್ರಶ್ನಿಸಿದೆ.

ಮಾತ್ರವಲ್ಲದೇ, ರಾಮನಗರ ಅಪರ ಜಿಲ್ಲಾ ಚುನಾವಣಾಧಿಕಾರಿಗಳು  ಬಾಡೂಟದ ಆಮಿಷವನ್ನು ತಡೆಯದೇ ವಾಮಮಾರ್ಗದ ಚುನಾವಣೆಗೆ ಬೆಂಬಲ ನೀಡುತ್ತಿದ್ದಾರೆಯೇ? ಎಂದು ಕಟುವಾಗಿ ಪ್ರಶ್ನಿಸಿದೆ.

https://x.com/INCKarnataka/status/1777921332497273258

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!