spot_img
Wednesday, April 1, 2026
spot_img

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ : ಜನತಾ ಸ್ವತಂತ್ರ ಪಿಯು ಕಾಲೇಜು ಶೇ. 100 ಸಾಧನೆ

ಜನಪ್ರತಿನಿಧಿ (ಹೆಮ್ಮಾಡಿ ) : 2024 ಮಾರ್ಚ್‌ನಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕುಂದಾಪುರ ತಾಲೂಕಿನ ಪ್ರತಿಷ್ಠಿತ ಪದವಿ ಪೂರ್ವ ಕಾಲೇಜುಗಳಲ್ಲಿ ಒಂದಾದ ಜನತಾ ಸ್ವತಂತ್ರ ಪಿಯು ಕಾಲೇಜಿನಿಂದ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಕಲ ಶೇ. 100 ಫಲಿತಾಂಶ ದಾಖಲಿಸಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

386 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು,226 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ,(ಡಿಸ್ಟ್ರಿಂಕ್ಷನ್) ಉತ್ತೀರ್ಣರಾಗಿದ್ದು, ಈ ವಿದ್ಯಾರ್ಥಿಗಳು ಅತ್ಯದಿಕ ಅಂಕಗಳನ್ನು ಪಡೆದು ಸಾಧನೆ ಮೆರೆದಿದ್ದಾರೆ.

ಪ್ರತೀಕ್ಷಾ 589 (ವಾಣಿಜ್ಯ ವಿಭಾಗ), ಪ್ರಜ್ವಲ್ ಪೂಜಾರಿ 588 (ವಿಜ್ಞಾನ ವಿಭಾಗ), ಪವಿತ್ರಾ 588(ವಿಜ್ಞಾನ ವಿಭಾಗ),
ಲಾವಣ್ಯ 588(ವಾಣಿಜ್ಯ ವಿಭಾಗ) ಐಶ್ವರ್ಯ ವೈದ್ಯ 587(ವಿಜ್ಞಾನ ವಿಭಾಗ).

155 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ,ಹಾಗೂ 5 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.
ಕಾಲೇಜು ಪ್ರಾರಂಭಗೊಂಡ 2ನೇ ವರ್ಷದಲ್ಲಿಯೂ ಅತ್ಯುತ್ತಮ ಫಲಿತಾಂಶವನ್ನು ಪಡೆಯುವುದರ ಮೂಲಕ ಕರಾವಳಿ ಭಾಗದಲ್ಲಿ ವಿಶೇಷವಾಗಿ ಗುರುತಿಸಿಕೊಂಡಿದೆ.

ಶೈಕ್ಷಣಿಕ ಚಟುವಟಿಕೆಗಳೊಂದಿಗೆ ಕ್ರೀಡೆ, ಕಲೆ, ಸಾಹಿತ್ಯ ಚಟುವಟಿಕೆಗಳಿಗೂ ಪೆÇ್ರೀತ್ಸಾಹ ನೀಡುತ್ತಿರುವುದು ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಗೆ ಪೂರಕವಾಗಿದ್ದು,ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು ಅಭಿನಂದಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!