spot_img
Sunday, February 15, 2026
spot_img

ಬಿಜೆಪಿ – ಜೆಡಿಎಸ್‌ ಸುಳ್‌ ಸುದ್ದಿ ವೈರಲ್ : ಫೇಕ್‌ ಫ್ಯಾಕ್ಟರಿಯನ್ನು ಕಾನೂನಿನ ಮೂಲಕ ಬೇರು ಸಹಿತ ಕಿತ್ತೆಸೆಯುತ್ತೇವೆ : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ಬೆಂಗಳೂರು) : ಬಿಜೆಪಿ – ಜೆಡಿಎಸ್‌ ಮಿತ್ರಮಂಡಳಿ ಕೃಪಾಪೋಷಿತ ಕಿಡಿಗೇಡಿಗಳು ವಾರ್ತಾಪತ್ರಿಕೆಯನ್ನು ಹೋಲುವ ಸುಳ್ಳು ಸುದ್ದಿಯ ತುಣುಕೊಂದನ್ನು ಸೃಷ್ಟಿಸಿ, ಅದರಲ್ಲಿ ಜನರ ಕೋಮುಭಾವನೆ ಕೆರಳಿಸುವ ಸುದ್ದಿಯನ್ನು ತುಂಬಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಈ ಬಗ್ಗೆ ಈಗಾಗಲೇ ನಾನು ಪೊಲೀಸ್‌ ಇಲಾಖೆಗೆ ದೂರು ನೀಡಿದ್ದೇನೆ. ಇದರ ಹಿಂದಿರುವ ದುಷ್ಟ ಶಕ್ತಿ ಯಾರು ಎಂಬ ಬಗ್ಗೆ ನಮಗೆ ಮಾಹಿತಿ ಇದ್ದು, ಆದಷ್ಟು ಬೇಗನೆ ಅವರನ್ನು ನ್ಯಾಯದ ಕೈಗಳಿಗೆ ಒಪ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್‌ ಆಗಿ ಹೇಳಿದ್ದಾರೆ.

ರಾಜಕೀಯ ವಿರೋಧಿಗಳನ್ನು ನ್ಯಾಯಸಮ್ಮತ ರೀತಿಯಲ್ಲಿ ಎದುರಿಸಲಾಗದೆ ಇಂತಹ ಅಡ್ಡದಾರಿ ಮೂಲಕ ಚುನಾವಣೆ ಗೆಲ್ಲಲು ಹೊರಟಿರುವುದು ರಾಜ್ಯ ಬಿಜೆಪಿ ಮತ್ತು ಜೆಡಿಎಸ್‌ನ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ. ಹತ್ತು ವರ್ಷಗಳ ಕಾಲ ದೇಶದ ಆಡಳಿತ ನಡೆಸಿದ ಪಕ್ಷವೊಂದು ಚುನಾವಣೆ ಗೆಲ್ಲಲು ಸುಳ್ಳು ಸುದ್ದಿಯ ಮೊರೆ ಹೋಗುವಂತಹ ಹೀನಾಯ ಸ್ಥಿತಿಗೆ ತಲುಪಬಾರದಿತ್ತು ಎಂದು ಹೇಳಿದ್ದಾರೆ.

ಸುಳ್ಳು ಸುದ್ದಿಗಳನ್ನು ನಂಬಿ ಶೇರ್‌ ಮಾಡುವ ಮುನ್ನ ಎಚ್ಚರಿಕೆ ವಹಿಸಿ….!!  ಸುಳ್ಳು ಸುದ್ದಿಯ ಸೃಷ್ಟಿಕರ್ತರು, ಅವರ ಬೆನ್ನ ಹಿಂದೆ ಬೆಂಬಲಕ್ಕೆ ನಿಂತಿರುವವರು ಹೀಗೆ ಫೇಕ್‌ ಫ್ಯಾಕ್ಟರಿಯನ್ನು ಕಾನೂನಿನ ಮೂಲಕ ಬೇರು ಸಹಿತ ಕಿತ್ತೆಸೆಯುತ್ತೇವೆ ಎಂದು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!