spot_img
Wednesday, January 22, 2025
spot_img

ಏಪ್ರಿಲ್‌ 12ರಿಂದ ಮೂರನೇ ಹಂತದ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ !

ಜನಪ್ರತಿನಿಧಿ (ನವ ದೆಹಲಿ) : ಕರ್ನಾಟಕ ರಾಜ್ಯ ಸೇರಿದಂತೆ 12 ರಾಜ್ಯಗಳು ಮತ್ತು ಕೇಂದ್ರೆ ಆಡಳಿತ ಪ್ರದೇಶಗಳ 94 ಲೋಕಸಭಾ ಕ್ಷೇತ್ರಗಳಿಗಾಗಿ ಮೇ 7 ರಂದು ನಡೆಯಲಿರುವ ಮೂರನೇ ಹಂತದ ಚುನಾವಣೆಗೆ ಏಪ್ರಿಲ್‌ 12 ಶುಕ್ರವಾರದಿಂದ ಹೊರಡಿಸುವುದರೊಂದಿಗೆ ನಾಮಪತ್ರ ಸಲ್ಲಿಕೆಯಾಗಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

ಮೂರನೇ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಏಪ್ರಿಲ್‌ 19 ಕೊನೆಯ ದಿನವಾಗಿದ್ದು, ಏಪ್ರಿಲ್‌ 20 ರಂದು ನಾಮಪತ್ರ ಮರು ಪರಿಶೀಲನೆ ನಡೆಯುತ್ತದೆ. ಏಪ್ರಿಲ್‌ 22 ರಂದು ನಾಮಪತ್ರ ಹಿಂಪಡೆಯುವುದಕ್ಕೆ ಕೊನೆಯ ದಿನವಾಗಿದೆ ಎಂದೂ ತಿಳಿಸಿದೆ.

ಮೂರನೇ ಹಂತದ ಲೋಕಸಭಾ ಚುನಾವಣೆಯೂ ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ದಾದ್ರಾ ಮತ್ತು ನಗರ, ಹವೇಲಿ, ಧಮನ್‌, ದಿಯು, ಗೋವಾ, ಗುಜರಾತ್‌, ಜಮ್ಮು ಮತ್ತು ಕಾಶ್ಮೀರ, ಕರ್ನಾಟಕ, ಮಹಾರಾಷ್ಟ್ರ, ಮಧ್ಯ ಪ್ರದೇಶ, ಉತ್ತರ ಪ್ರದೇಶ ಹಾಗೂ ಪಶ್ಚಿಮ ಬಂಗಾಳದಲ್ಲಿ ನಡೆಯಲಿದೆ.

ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ತಲಾ 14 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಏಪ್ರಿಲ್‌ 26 ರಂದು ಮೊದಲನೇ ಹಂತ ಹಾಗೂ ಮೇ 7ರಂದು ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ.

https://x.com/ANI/status/1778290945429254631

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!