Wednesday, September 11, 2024

ಭಯೋತ್ಪಾದನೆ ನಿರ್ಮೂಲನೆಗೆ ಪಾಕಿಸ್ತಾನಕ್ಕೆ ಬೆಂಬಲಿಸಲು ಭಾರತ ಸಿದ್ಧ : ರಾಜನಾಥ್‌ ಸಿಂಗ್‌

ಜನಪ್ರತಿನಿಧಿ (ನವದೆಹಲಿ) : ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಪಾಕಿಸ್ತಾನಕ್ಕೆ ಸಹಾಯ ಮಾಡಲು ಭಾರತ ಸಿದ್ಧವಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಹೇಳಿದ್ದಾರೆ.

ಅಂತರಾಷ್ಟ್ರೀಯ ಸುದ್ದಿ ಸಂಸ್ಥೆ ಎಎನ್‌ಐಗೆ ನೀಡಿದ ಸಂದರ್ಶನವೊಂದರಲ್ಲಿ, ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆಗಳಿಗೆ ಅವಕಾಶ ನೀಡುವುದಿಲ್ಲ. ಭಾರತವನ್ನು ಅಸ್ಥಿರಗೊಳಿಸಲು ಪ್ರಯತ್ನಿಸಿದರೆ ಇಸ್ಲಾಮಾಬಾದ್‌ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

“ಪಾಕಿಸ್ತಾನ ಭಯೋತ್ಪಾದನೆಯನ್ನು ನಿಯಂತ್ರಿಸುವ ಸಾಮರ್ಥ್ಯ ಹೊಂದಿಲ್ಲವಾದರೆ ಹಾಗೂ ಅಸಮರ್ಥರೆಂದು ಭಾವಿಸಿದರೆ, ನೆರೆಯ ದೇಶದ ಸಹಾಯ ಪಡೆಯಲು ಬಯಸಿದರೆ, ಭಯೋತ್ಪಾದನೆಯನ್ನು ತಡೆಯಲು ಸಹಕರಿಸಲು ಭಾರತ ಸಿದ್ಧವಾಗಿದೆ” ಎಂದಿದ್ದಾರೆ.

ಅವರು ನಮ್ಮ ನೆರೆಹೊರೆಯವರು, ಭಯೋತ್ಪಾದನೆ ಕೊನೆಗೊಳ್ಳಬೇಕು ಎಂಬ ಅವರ ಉದ್ದೇಶ ಸ್ಪಷ್ಟವಾಗಿದ್ದರೆ, ಅವರೇ ಅದನ್ನು ಮಾಡಬೇಕು ಅಥವಾ ಭಾರತದಿಂದ ಸಹಾಯವನ್ನು ತೆಗೆದುಕೊಳ್ಳಬೇಕು. ಭಯೋತ್ಪಾದನೆಯನ್ನು ಕೊನೆಗೊಳಿಸಬಹುದು ಎಂದು ಹೇಳಿದ್ದಾರೆ.

1975ರಲ್ಲಿ ಆಗಿನ ಪ್ರಧಾನಿ ಇಂದಿರಾಗಾಂಧಿ ಅವರು ಹೇರಿದ್ದ ತುರ್ತು ಪರಿಸ್ಥಿತಿಯ ಕುರಿತು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ರಾಜನಾಥ್ ಸಿಂಗ್, ತುರ್ತು ಪರಿಸ್ಥಿತಿಯ ಸಮಯದಲ್ಲಿ ನಾನು ಜೈಲಿನಲ್ಲಿದ್ದೆ. ಆಗ ತನ್ನ ತಾಯಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದರು. ಅಂತಿಮ ದರ್ಶನ ಪಡೆಯಲು ಸಹ ಆಗಲಿಲ್ಲ ಎಂದು ಭಾವುಕರಾದರು.

ತುರ್ತು ಪರಿಸ್ಥಿತಿಯ ಸಮಯದಲ್ಲಿ ನನ್ನ ತಾಯಿಯ ಅಂತಿಮ ವಿಧಿಗಳಲ್ಲಿ ಪಾಲ್ಗೊಳ್ಳಲು ನನಗೆ ಪೆರೋಲ್ ನೀಡಲಿಲ್ಲ. ಈಗ ಕಾಂಗ್ರೆಸ್​ನವರು ನಮ್ಮನ್ನು ಸರ್ವಾಧಿಕಾರಿಗಳು ಎಂದು ಕರೆಯುತ್ತಾರೆ. 27 ದಿನಗಳ ಕಾಲ ಆಸ್ಪತ್ರೆಯಲ್ಲಿ ದಾಖಲಾಗಿದ್ದ ತಾಯಿಯ ಅಂತಿಮ ದಿನಗಳಲ್ಲಿ ಆಕೆಯನ್ನು ಭೇಟಿಯಾಗಲು ನನಗೆ ಸಾಧ್ಯವಾಗಲಿಲ್ಲ ಎಂದು ಹೇಳಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!