Saturday, October 12, 2024

ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ (ಎಐ) ಮತ್ತು ಮೆಷಿನ್ ಲರ್ನಿಂಗ್ ಪ್ರಾಜೆಕ್ಟ್ ಮಾಹಿತಿ ಕಾರ್ಯಾಗಾರ

ಜನಪ್ರತಿನಿಧಿ (ಕುಂದಾಪುರ) : ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗದಿಂದ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ (ಎಐ) ಮತ್ತು ಮೆಷಿನ್ ಲರ್ನಿಂಗ್ ಪ್ರಾಜೆಕ್ಟ್ ಐಡಿಯಾಸ್ ವಿಷಯದ ಕುರಿತು ವಿವಿಧ ರೀತಿಯ ಮಾಹಿತಿಯನ್ನು ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ|. ಕೆ. ಉಮೇಶ್ ಶೆಟ್ಟಿಯವರು  ಕಾರ್ಯಕ್ರಮದ ಆಧ್ಯಕ್ಷತೆಯನ್ನು ವಹಿಸಿಕೊಂಡು “ವಿದ್ಯಾರ್ಥಿಗಳು ಹೊಸ ತಂತ್ರಜ್ಞಾನವನ್ನು ಬಳಸಿಕೊಂಡು ಹೊಸ ಅನ್ವೇಷಣೆಗಳನ್ನು ಮಾಡುವಲ್ಲಿ ಯಶಸ್ವಿಯಾಗಬೇಕೆಂದು” ತಿಳಿಸಿದರು.

ವಿಭಾಗದ ಪ್ರಾಧ್ಯಾಪಕರಾದ ಪ್ರಣಮ್ ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ವಿದ್ಯಾರ್ಥಿಗಳಿಗೆ ತ್ವರಿತವಾಗಿ ಬೆಳೆಯುತ್ತಿರುವ ಎಐ ಮತ್ತು ಎಂಎಲ್ ಕ್ಷೇತ್ರದ ಹೊಸ ಪ್ರಾಜೆಕ್ಟ್ನ ಸಾಧ್ಯತೆಗಳು ಮತ್ತು ಲಭ್ಯವಿರುವ ಸಾಧನಗಳ ಬಗ್ಗೆ ಮಾಹಿತಿಯನ್ನು ನೀಡಿದರು.

ವಿಭಾಗದ ಮುಖ್ಯಸ್ಥರಾದ ಮಹೇಶ್ ಕುಮಾರ್ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ಗಣಕಶಾಸ್ತ್ರ, ವಿಭಾಗದ ಪ್ರಾಧ್ಯಾಪಕರು ಹಾಗೂ ಆಸಕ್ತ ಅಂತಿಮ ವರ್ಷದ ಬಿ.ಸಿ.ಎ ಮತ್ತು ಬಿ.ಎಸ್ಸಿ. ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!