spot_img
Thursday, December 5, 2024
spot_img

ರಾಜಧಾನಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲು ಸಂಚು : ಅತಿಶಿ ಆರೋಪ

ಜನಪ್ರತಿನಿಧಿ (ನವ ದೆಹಲಿ) : ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆಯ ನಕಲಿ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂಣದ ಕೇಜ್ರಿವಾಲ್‌ ಅವರನ್ನು ಬಂದಿಸಲಾಗಿದೆ ಎಂದು ದೆಹಲಿ ಸಚಿವೆ ಅತಿಶಿ ಆರೋಪಿಸಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವ ಸಂಚು ಇದರಲ್ಲಿ ಅಡಗಿಉದೆ, ಅದರ ಸೂಚನೆಗಳು ನಮಗೆ ದೊರಕಿವೆ. ಲೋಕಸಭಾ ಚುನಾವಣೆ ಘೋಷಣೆಯಾದಾಗಿನಿಂದ ದೆಹಲಿಯಲ್ಲಿ ಯಾವುದೇ ಅಧಿಕಾರಿಯ ಪೋಸ್ಟಿಂಗ್‌, ವರ್ಗಾವಣೆ ಆಗಿಲ್ಲ. ಅಧಿಕಾರಿಗಳು ಸರ್ಕಾರದ ಸಭೆಗಳಿಗೆ ಬರುತ್ತಿಲಲ. ಕಳೆದ ವಾದ, ಲೆಫ್ಟಿನೆಂಟ್‌ ಗವರ್ನರ್‌ ಅವರು ಕೇಂದ್ರ ಗೃಹ ಸಚಿವಾಲಯಕ್ಕೆ ಆಧಾರ ರಹಿತ ಪತ್ರ ಬರೆದು, ಮುಖ್ಯಮಂತ್ರಿಯವರ ಆಪ್ತ ಕಾರ್ಯದರ್ಶಿಯನ್ನೂ ವಜಾ ಮಾಡಿಸಿದ್ದಾರೆ. ಇವೆಲ್ಲವೂ ದೆಹಲಿ ಸರ್ಕಾರವನ್ನೂ ಮಾಡಿರುವ ಸಂಚು ಎಂದು ಅತಿಶಿ ಗಂಭೀರ ಆರೋಪ ಮಾಡಿದ್ದಾರೆ.

ದೆಹಲಿಯಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಜಾರಿಗೆ ತರುವುದು ಕಾನೂನು ಬಾಹೀರವಾಗಿದೆ. ಅಸಾಂವಿಧಾನಿಕ ಹಾಗೂ ಜನರ ತೀರ್ಪಿಗೆ ವಿರುದ್ಧವಾದದ್ದು ಎಂದು ಬಿಜೆಪಿಯನ್ನು ಎಚ್ಚರಿಸಲು ಬಯಸುತ್ತೇನೆ. ದೆಹಲಿ ಜನರು ಅರವಿಂದ ಕೇಜ್ರಿವಾಲ್‌ ಹಾಗ ಆಮ್‌ ಆದ್ಮಿ ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡಿದ್ದಾರೆ ಎಂದೂ ಅವರು ಹೇಳಿದ್ದಾರೆ.

ಕೆಲವು ತಿಂಗಳುಗಳಿಂದ ಇಲಾಖೆಗಳಲ್ಲಿ ಹಲವು ಹುದ್ದೆಗಳು ಖಾಲಿ ಇವೆ, ಆದರೇ, ಯಾವುದೇ ಪೋಸ್ಟಿಂಗ್‌ಗಳು ಆಗಿಲ್ಲ. ಮಾದಿರಿ ನೀತಿ ಸಂಹಿತೆಯನ್ನು ಉಲ್ಲೇಖಿಸಿ ಅಧಿಕಾರಿಗಳು ಮಂತ್ರಿಗಳು ಕರೆದ ಸಭೆಗಳಿಗೆ ಹಾಜರಾಗುವುದನ್ನು ನಿಲ್ಲಿಸಿದ್ದಾರೆ. ಲೆಫ್ಟಿನೆಂಟ್‌ ಗವರ್ನರ್‌ ಅವರು ದೆಹಲಿ ಸರ್ಕಾರದ ಕಾರ್ಯನಿರ್ವಹಣೆಯ ಬಗ್ಗೆ ಆಧಾರರಹಿತ ಪತ್ರಗಳನ್ನು ಬರೆಯುತ್ತಿದ್ದಾರೆ ಎಂದು ಅವರು ಆರೋಪ ಮಾಡಿದ್ದಾರೆ.

https://x.com/ANI/status/1778650368022344102

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!