Tuesday, April 30, 2024

ಮಂಗಳೂರು : ಮೋದಿ ರೋಡ್‌ ಶೋ | ಭದ್ರತೆಗೆ ಜೇನುಗೂಡುಗಳನ್ನು ತೆರವುಗೊಳಿಸುವಂತೆ ನಗರ ಪೊಲೀಸ್‌ ಕಮಿಷನರ್‌ ಪತ್ರ

ಜನಪ್ರತಿನಿಧಿ (ಮಂಗಳೂರು) : ಏ.14ರಂದು ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಚುನಾವಣೆಯ ಹೈ ವೋಲ್ಟೇಜ್‌ ಕ್ಷೇತ್ರ ಎಂದೇ ಗುರುತಿಸಲ್ಪಡುವ ಕ್ಷೇತ್ರಗಳಲ್ಲಿ ಒಂದಾದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಪ್ರಧಾನಿ ರೋಡ್‌ ಶೋ ನಡೆಯಲಿದ್ದು, ರೋಡ್‌ ಶೋ ನಡೆಯಲಿರುವ ಮಾರ್ಗದಲ್ಲಿ ಇರುವ ಎಲ್ಲ ಜೇನುಗೂಡುಗಳನ್ನು ತೆರವುಗೊಳಿಸುವಂತೆ ನಗರ ಪೊಲೀಸ್‌ ಕಮಿಷನರ್‌ ಅನುಪಮ್‌ ಅಗರ್‌ವಾಲ್‌ ಅವರು ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಪತ್ರದ ಮೂಲಕ ತಿಳಿಸಿದ್ದಾರೆ.

ಸಿಟಿಯ ನಾರಾಯಣಗುರು ಸರ್ಕಲ್‌ನಿಂದ ನವಭಾರತ್‌ ಸರ್ಕಲ್‌ವರಗೆ ರೋಡ್‌ ಶೋ ನಡೆಯುವ ಸ್ಥಳ, ವಾಹನ ನಿಲುಗಡೆ ಸ್ಥಳ, ಮಂಗಲೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಹೆಲಿಪ್ಯಾಡ್‌, ಸೇಫ್‌ ಹೌಸ್‌ ಹಾಗೂ ಸೇಫ್‌ ಆಸ್ಪತ್ರೆಗಳಾದ ಎ.ಜೆ ಆಸ್ಪತ್ರೆ, ವೆನ್ಲಾಕ್‌ ಆಸ್ಪತ್ರೆ, ಕೆಎಂಸಿ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರ ಕಚೇರಿ, ಎಸ್‌ಡಿಎಂ ಲಾ ಕಾಲೇಜು, ಸರ್ಕ್ಯೂಟ್‌ ಹೌಸ್‌ ಹಾಗೂ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಗಣ್ಯರಯ ಸಂಚರಿಸುವ ಕಾರ್ಯಕ್ರಮದ ಸ್ಥಳದವರೆಗಿನ ಎಲ್ಲಾ ಮಾರ್ಗಗಳಲ್ಲಿ ಈ ಕ್ರಮ ವಹಿಸಬೇಕು ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪೊಲೀಸ್‌ ಕಮಿಷನರ್‌ ಅನುಪಮ್‌ ಅಗರ್‌ವಾಲ್‌, ಈ ಪತ್ರದ ಬಗ್ಗೆ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ಮಾಡಿದ್ದಾರೆ. ಆದರೇ, ಇದು ಹೊಸ ಕ್ರಮವೇನಲ್ಲ. ಪ್ರಧಾನಿ ಭದ್ರತೆಯ ಮಾರ್ಗಸೂಚಿಯಂತೆಯೇ ಈ ಪತ್ರ ಬರೆದಿದ್ದೇನೆ ಎಂದು ಅವರು ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
21,700SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!