Tuesday, October 8, 2024

ಶಿವಮೊಗ್ಗ ಲೋಕಸಭಾ ಚುನಾವಣೆ : ಬಂಡಾಯ ಅಭ್ಯರ್ಥಿಯಾಗಿ ಈಶ್ವರಪ್ಪ ನಾಮಪತ್ರ ಸಲ್ಲಿಕೆ !

ಜನಪ್ರತಿನಿಧಿ (ಶಿವಮೊಗ್ಗ) :  ತಮ್ಮ ಮಗ ಕಾಂತೇಶ್‌ಗೆ ಲೋಕಸಭಾ ಚುನಾವಣೆಯ ಟಿಕೇಟ್‌ ನೀಡದೇ ನಂಬಿಕೆ ದ್ರೋಹ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಹಾಗೂ ಅವರ ಈರ್ವರು ಮಕ್ಕಳಾದ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಬಿ. ವೈ ರಾಘವೇಂದ್ರ ಹಾಗೂ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ. ವೈ ವಿಜಯೇಂದ್ರ ಮೇಲೆ ವಂಶ ಪಾರಂಪರ್ಯ ರಾಜಕೀಯ ಆರೋಪ ಹೊರಿಸಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಸ್ಪರ್ಧೆಗೆ ಮುಂದಾಗಿರುವ ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ  ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಅವರು ಇಂದು(ಶುಕ್ರವಾರ) ನಾಮಪತ್ರ ಸಲ್ಲಿಸಿದ್ದಾರೆ.

ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ಚುನಾವಣಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ಈಶ್ವರಪ್ಪ ಅವರು ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆ ವೇಳೆ ಪತ್ನಿ ಜಯಲಕ್ಷ್ಮಿ, ಮಾಜಿ ಸಚಿವ ಗೂಳಿಹಟ್ಟಿ ಶೇಖರ್, ಮಾಜಿ ಪಾಲಿಕೆ ಸದಸ್ಯ ವಿಶ್ವಾಸ್ ಉಪಸ್ಥಿತರಿದ್ದರು.

ಒಂದೇ ದಿನ ಎರಡನೇ ಬಾರಿಗೆ ಈಶ್ವರಪ್ಪನವರಿಂದ ಉಮೇದುವಾರಿಕೆ ಸಲ್ಲಿಕೆಯಾಗಿದೆ. ಇಂದು ಬೆಳಗ್ಗೆ ಈಶ್ವರಪ್ಪ ಅತ್ಯಾಪ್ತ ಹಾಗೂ ಮಾಜಿ ಪಾಲಿಕೆ ಸದಸ್ಯ ವಿಶ್ವಾಸ್ ಅವರು ಈಶ್ವರಪ್ಪ ಪರವಾಗಿ ನಾಮಪತ್ರ ಸಲ್ಲಿಸಿದ್ದರು.

ಈ ನಡುವೆ, ಯಡಿಯೂರಪ್ಪ ಹಾಗೂ ಅವರ ಮಕ್ಕಳ ಮೇಲೆ ನೇರಾನೇರ ಆರೋಪ ಮಾಡುತ್ತಿರುವ ಈಶ್ವರಪ್ಪ ಅವರನ್ನು ಬಿಜೆಪಿ ಉಚ್ಛಾಟನೆ ಮಾಡಲಿದೆ ಎಂದು ಹೇಳಲಾಗುತ್ತಿದೆ. ಈ ನಡುವೆ ಸ್ವತಃ ಈಶ್ವರಪ್ಪ ಅವರೇ ಉಚ್ಛಾಟನೆ ಮಾಡುವುದಾದರೇ ಮಾಡಲಿ, ನಾನು ಅದಕ್ಕೆ ಕಾಯುತ್ತಿದ್ದೇನೆ ಎಂದು ಅವರು ಹೇಳಿಕೆ ನೀಡಿದ್ದಲ್ಲದೇ, ಶೇ.೬೦ರಷ್ಟು ಬಿಜೆಪಿ ಕಾರ್ಯಕರ್ತರು ನನ್ನ ಪರವಾಗಿ ಇದ್ದಾರೆ, ನಾನೇ ಚುನಾವಣೆಯಲ್ಲಿ ಗೆಲ್ಲುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತ ಪಡಿಸಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!