spot_img
Friday, April 3, 2026
spot_img

ದ.ಕ ಲೋಕಸಭಾ ಚುನಾವಣೆ : ಜೇನುಗೂಡುಗಳ ತೆರವಿಗೆ ಸೂಚನೆ : ಪರಿಸರವಾದಿಗಳ ಆಕ್ರೋಶ

ಜನಪ್ರತಿನಿಧಿ (ಮಂಗಳೂರು) : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಷ್ ಚೌಟ ಪರ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ನಗರದಲ್ಲಿ ರೋಡ್‌ ಶೋ ನಡೆಸಲಿರುವ ಹಿನ್ನೆಲೆಯಲ್ಲಿ ಪ್ರಚಾರದ ಮಾರ್ಗದುದ್ದಕ್ಕೂ  ಇರುವ ಜೇನುಗೂಡುಗಳನ್ನು ತೆರವುಗೊಳಿಸುವಂತೆ ಮಂಗಳೂರು ನಗರ ಪೊಲೀಸ್‌ ಆಯುಕ್ತರು ಅರಣ್ಯ ಇಲಾಖೆಯ ಸಂರಕ್ಷಣಾಧಿಕಾರಿಗಳಿಗೆ ಪತ್ರ ಬರೆದಿರುವುದಕ್ಕೆ ಸಂಬಂಧಿಸಿದಂತೆ ಪರಿಸರ ಪ್ರೇಮಿಗಳು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಪೊಲೀಸ್‌ ಆಯುಕ್ತರ ಈ ನಿರ್ಧಾರದ ವಿರುದ್ಧ ಜಿಲ್ಲೆಯ ಪರಿಸರವಾದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶ ವ್ಯಕ್ತಪಡಿಸಿದ್ದು, ಜೇನು ಸಂತತಿ ನಾಶ ಮಾಡುವುದಕ್ಕೆ ಇದು ನಾಂದಿ ಹಾಡಿದಂತಾಗುತ್ತದೆ. ಹವಾಮಾನ ಬದಲಾವಣೆಯಿಂದಾಗಿ ಈಗಾಗಲೇ ಜೇನು ಸಂತತಿ ವಿನಾಶದ ಹಾದಿಯಲ್ಲಿದೆ. ಜೇನು ಇಲ್ಲದಿದ್ದರೇ ಪರಾಗ ಸ್ಪರ್ಶವಾಗದು, ಮುಂದೆ ಆಹಾರ ಬೆಳೆಯಲು ಕಷ್ಟವಾಗಲಿದೆ. ಅಧಿಕಾರಿಗಳು ಜೇನು ಗೂಡುಗಳನ್ನು ತೆರವುಗೊಳಿಸಲು ಮುಂದಾಗಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!