spot_img
Wednesday, January 22, 2025
spot_img

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ : ಇಬ್ಬರು ಬಾಂಬರ್‌ಗಳು ಎನ್ಐಎ ವಶಕ್ಕೆ !

ಜನಪ್ರತಿನಿಧಿ (ಬೆಂಗಳೂರು) : ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಂಧನಕ್ಕೆ ಒಳಪಟ್ಟಿರುವ ಬಾಂಬರ್ ಮುಸ್ಸಾವಿರ್ ಹುಸೇನ್ ಶಾಜಿಬ್ ಹಾಗೂ ಸ್ಫೋಟದ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹಾನನ್ನು ನ್ಯಾಯಾಧೀಶರು 10 ದಿನಗಳ ಕಾಲ ರಾಷ್ಟ್ರೀಯ ತನಿಖಾ ದಳ ವಶಕ್ಕೆ ನೀಡಿ ಆದೇಶ ಹೊರಡಿಸಿದ್ದಾರೆ.

ರಾಮೇಶ್ವರಂ ಕೆಫೆಯಲ್ಲಿ ಸ್ಫೋಟಗೊಳಿಸಿ ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ತಲೆಮರೆಸಿಕೊಂಡಿದ್ದ ಉಗ್ರರನ್ನು ಎನ್​​ಐಎ ಅಧಿಕಾರಿಗಳು ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದಾರೆ.

ಇಬ್ಬರು ಉಗ್ರರನ್ನು ಎನ್​ಐಎ ಅಧಿಕಾರಿಗಳು ಮಂಡಿವಾಳದ ಎಫ್​ಎಸ್​ಎಲ್​ ಸೆಂಟರ್​ ಬಳಿಯಿರುವ ಇಂಟ್ರಾಗೇಷನ್​​ ಸೆಲ್​ನಲ್ಲಿ ವಿಚಾರಣೆ ನಡೆಸಿದರು. ಬಳಿಕ ಬೆಳಿಗ್ಗೆ 10:30 ಕೋರಮಂಗಲದ ರಾಷ್ಟ್ರೀಯ ಕ್ರೀಡಾ ಗ್ರಾಮ ಸಮುಚ್ಚಯದಲ್ಲಿರುವ ನಿವಾಸದಲ್ಲಿ ನ್ಯಾಯಾಧೀಶರ ಮುಂದೆ ಉಗ್ರರನ್ನು ಹಾಜರುಪಡಿಸಿದರು. ಈ ವೇಳೆ ನ್ಯಾಯಾಧೀಶರು 10 ದಿನಗಳ ಕಾಲ ಎನ್​ಐಎ ಕಸ್ಟಡಿಗೆ ನೀಡಿ ಆದೇಶಿಸಿದ್ದಾರೆ.

ಕಳೆದ ಮಾರ್ಚ್ 1 ರಂದು ಬೆಂಗಳೂರಿನ ಐಟಿ ಕಾರಿಡಾರ್ ಕುಂದಲ ಹಳ್ಳಿ ಕಾಲೋನಿಯಲ್ಲಿರುವ ದಿ ರಾಮೇಶ್ವರ ಕೆಫೆಗೆ ಗ್ರಾಹಕನಂತೆ ತೆರಳಿ ಟಿಫನ್ ಬಾಕ್ಸ್ ಬ್ಯಾಗ್ ನಲ್ಲಿ ಬಾಂಬ್ ಇಟ್ಟು ಮುಸಾವೀರ್ ಪರಾರಿಯಾಗಿದ್ದ. ಸಿಸಿ ಟಿವಿಯಲ್ಲಿಯೂ ಆತ ಬಂದಿರುವುದು ಟಿಫನ್‌ ಬಾಕ್ಸ್‌ ಇಟ್ಟು ಅಲ್ಲಿಂದ ತೆರಳಿರುವುದು ಎಲ್ಲವೂ ಸೆರೆಯಾಗಿತ್ತು. ಸಿಸಿ ಟಿವಿ ದೃಶ್ಯವಾಳಿಯ ಆಧಾರದ  ಮೇಲೆ ಉಗ್ರರ ಜಾಡು ಹಿಡಿದಿದ್ದರು ಪೊಲೀಸರು.

ಬಾಂಬ್ ಸ್ಫೋಟದ ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಈ ಕೃತ್ಯದ ಹಿಂದೆ ಭಯೋತ್ಪಾದಕ ಸಂಘಟನೆ ಕೈವಾಡ ಇರುವುದು ಖಚಿತವಾದ ಹಿನ್ನೆಲೆಯಲ್ಲಿ ಎನ್ಐಎ ಮಧ್ಯಪ್ರವೇಶಿಸಿತ್ತು. ಅಷ್ಟರಲ್ಲಿ ಶಂಕಿತ ಉಗ್ರರ ಜಾಡು ಹಿಡಿಯುವಲ್ಲಿ ಸಿಸಿಬಿ ಪೊಲೀಸರು ಕೂಡ ಯಶಸ್ಸು ಕಂಡಿದ್ದರು.

ಕೆಫೆ ವಿಧ್ವಸಂಕ ಕೃತ್ಯದಲ್ಲಿ ಬಾಂಬರ್ ಬೆನ್ನು ಹತ್ತಿದ್ದ ಎನ್ಐಎ ಹಾಗೂ ಸಿಸಿಬಿ, ಕುಂದಲಹಳ್ಳಿಯಿಂದ ಬಳ್ಳಾರಿವರೆಗೆ ಸುಮಾರು 800ಕ್ಕೂ ಹೆಚ್ಚಿನ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿ ಪರಿಶೀಲಿಸಿದ್ದರು. ಆ ದೃಶ್ಯಾವಳಿಗಳಲ್ಲಿದ್ದ ಶಂಕಿತನಿಗೂ ಕಳೆದ ಮೂರು ವರ್ಷಗಳಿಂದ ತಲೆಮರೆಸಿಕೊಂಡಿರುವ ಮುಸಾವೀರ್ ಹುಸೇನ್ ಶಾಜಿಬ್ ಭಾವಚಿತ್ರಕ್ಕೂ ತಾಳೆಯಾಗಿತ್ತು. ಅಲ್ಲದೆ, ಕೆಫೆಗೆ ಬಾಂಬ್ ಇಡಲು ಬಂದಾಗ ಮುಸಾವೀರ್ ಧರಿಸಿದ್ದ ಕ್ಯಾಪ್ ಕೂಡ ಆತನ ಗುರಿತು ಪತ್ತೆಗೆ ಮಹತ್ವದ ಸುಳಿವು ನೀಡಿತ್ತು.

ಚೆನ್ನೈ ನಗರದ ಮಾಲ್ ನಲ್ಲಿ ಕ್ಯಾಪ್ ಖರೀದಿಲು ತೆರಳಿದ್ದಾಗ ಆ ಅಂಗಡಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಮುಸಾವೀರ್ ಹಾಗೂ ಮತೀನ್ ಸೆರೆಯಾಗಿದ್ದರು. ಕೆಫೆ ಕೃತ್ಯದಲ್ಲಿ ಈ ಇಬ್ಬರ ಪಾತ್ರ ಖಚಿತವಾದ ಬಳಿಕ ಎನ್ಐಎ, ಶಂಕಿತರ ಸುಳಿವು ನೀಡಿದರೆ ರೂ.10 ಲಕ್ಷ ಬಹುಮಾನ ಘೋಷಿಸಿತ್ತು.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!