Thursday, November 21, 2024

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ : ಎನ್‌ಐಎ, ರಾಜ್ಯ ಪೊಲೀಸರ ಕಾರ್ಯ ಶ್ಲಾಘನೀಯ | ʼಇಂಡಿಯಾʼ ಮೈತ್ರಿಗೆ ಬಹುಮತ : ಸಿದ್ದರಾಮಯ್ಯ ಭವಿಷ್ಯ

ಜನಪ್ರತಿನಿಧಿ (ಬೆಂಗಳೂರು) : ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಪ್ರಮುಖ ಆರೋಪಿಗಳನ್ನು ಬಂಧಿಸಿರುವ ಎನ್.ಐ. ಎ ತಂಡ ಮತ್ತು ಕರ್ನಾಟಕ ಪೊಲೀಸರ ಕಾರ್ಯ ಶ್ಲಾಘನೀಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಾತ್ರವಲ್ಲದೇ, ಆರೋಪಿಗಳನ್ನು ಕೋಲ್ಕತ್ತಾದಿಂದ ಬೆಂಗಳೂರಿಗೆ ಕರೆ ತಂದ ನಂತರ ವಿಚಾರಣೆ ಮಾಡಿ ಹೆಚ್ಚಿನ ವಿವರ ಪಡೆಯಲಾಗುವುದು ಎಂದೂ ಹೇಳಿದ್ದಾರೆ.

https://x.com/siddaramaiah/status/1779040690024128815?t=bqw0Fz9dhXrHfmCVhBWieA&s=08

ಇನ್ನು, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತಮ್ಮ ಅಧಿಕೃತ ಎಕ್ಸ್‌ ಖಾತೆಯ ಮೂಲಕ ಸರಣಿ ಟ್ವೀಟ್‌ ಮಾಡಿದ ಸಿದ್ದರಾಮಯ್ಯ ಅವರು, ಎನ್.ಡಿ.ಎ ಗೆ ಪೂರ್ಣ ಬಹುಮತ ದೊರಕುವುದಿಲ್ಲ, ಬಿಜೆಪಿ ವಿರುದ್ಧವಿರುವ ಇಂಡಿಯಾ ಮೈತ್ರಿಗೆ ಬಹುಮತ ದೊರೆಯಲಿದೆ. 400ಕ್ಕೂ ಹೆಚ್ಚು ಸ್ಥಾನ ಪಡೆಯುವುದಾಗಿ ಹೇಳಿಕೊಳ್ಳುತ್ತಿರುವ ಬಿಜೆಪಿಯದ್ದು ಜನರ ದಾರಿತಪ್ಪಿಸುವ ಕಾರ್ಯತಂತ್ರವಾಗಿದೆ ಎಂದು ಹೇಳಿದ್ದಾರೆ.

ಮೋದಿಯವರು ಬಂದು ಹೋಗಲು ನನ್ನದೇನೂ ತಕರಾರಿಲ್ಲ. ಕರ್ನಾಟಕಕ್ಕೆ ಏನು ಮಾಡಿದ್ದಾರೆ ಎಂದು ರಾಜ್ಯದ ಜನತೆಗೆ ಹೇಳಬೇಕು. ನಿರುದ್ಯೋಗ ಯಾಕೆ ಮಿತಿಮೀರಿದೆ? ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಯಾಕೆ ಅನ್ಯಾಯವಾಗುತ್ತಿದೆ? ಬರಗಾಲಕ್ಕೆ ಇಂದಿನವರೆಗೂ ಯಾಕೆ ಪರಿಹಾರ ನೀಡಿಲ್ಲ? ಎಂಬುದಕ್ಕೆಲ್ಲಾ ಪ್ರಧಾನಿ ನರೇಂದ್ರ ಮೋದಿ ಉತ್ತರ ಹೇಳಲಿ ಎಂದು ಅವರು ಆಗ್ರಹಿಸಿದ್ದಾರೆ.

ಅಂಬೇಡ್ಕರ್ ಬಂದರೂ ಸಂವಿಧಾನ ಬದಲಿಸಲು ಸಾಧ್ಯವಿಲ್ಲ. ಬಿಜೆಪಿ ಸಂವಿಧಾನದ ಪರವಾಗಿದೆ ಎಂಬುದು ನರೇಂದ್ರ ಮೋದಿ ಅವರ ಮನಸಿನ ಮಾತಾಗಿದ್ದರೆ ಸಂವಿಧಾನ ಬದಲಿಸುತ್ತೇವೆ ಎಂದ ಅನಂತಕುಮಾರ್ ಹೆಗಡೆ ಮೇಲೆ ಕ್ರಮ ಯಾಕೆ ತೆಗೆದುಕೊಂಡಿಲ್ಲ? ಅವರನ್ನು ಪಕ್ಷದಿಂದ ಅಥವಾ ಮಂತ್ರಿ ಸ್ಥಾನದಿಂದ ಕೈಬಿಟ್ಟರೇ? ಉತ್ತರ ಕರ್ನಾಟಕದಲ್ಲಿ ಐದು ವರ್ಷಗಳಿಂದ ಏನೂ ಕೆಲಸ ಮಾಡದೇ ಮನೆಯಲ್ಲಿ ಕುಳಿತಿದ್ದರು. ಕೊನೆಯ 3-4 ತಿಂಗಳು ಬಂದು ಭಾಷಣ ಮಾಡಿದರು. ಟಿಕೆಟ್ ಕೊಟ್ಟರೆ ಸೋಲುತ್ತಾರೆ ಎಂಬ ವರದಿ ಬಂದಿದ್ದಕ್ಕೆ ಅನಂತಕುಮಾರ್ ಅವರಿಗೆ ಟಿಕೆಟ್ ಕೊಟ್ಟಿಲ್ಲ. ಬಿಜೆಪಿ ಯಾವತ್ತೂ ಸಂವಿಧಾನದ ಪರವಾಗಿಲ್ಲ. ಸಂವಿಧಾನ ಜಾರಿಯಾದಾಗ ಸಾವರ್ಕರ್ ಹಾಗೂ ಗೋಲ್ವಾಲ್ಕರ್ ಅವರು ಸಂವಿಧಾನವನ್ನು ವಿರೋಧಿಸಿದ್ದರು ಎಂದೂ ಅವರು ಉಲ್ಲೇಖಿಸಿದ್ದಾರೆ.

https://x.com/siddaramaiah/status/1779040884316877025?t=h-3YU2wvbi8YboD-PyOlAA&s=08

https://x.com/siddaramaiah/status/1779041278828978183?t=lNtk2UhSOOprdiEXMsgydA&s=08

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!