spot_img
Wednesday, January 22, 2025
spot_img

ಜಲಿಯನ್‍ವಾಲಾ ಬಾಗ್ ಹತ್ಯಾಕಾಂಡ : ಹುತಾತ್ಮ ಯೋಧರಿಗೆ ಪ್ರಧಾನಿ, ರಾಷ್ಟ್ರಪತಿ ಗೌರವ !

ಜನಪ್ರತಿನಿಧಿ (ನವ ದೆಹಲಿ) :  ೧೯೧೯ರಲ್ಲಿ ನಡೆದ ಜಲಿಯನ್‌ ವಾಲಾಬಾಗ್‌ ಹತ್ಯಕಾಂಡ ಕರಾಳ ದಿನದ ಸ್ಮರಣೆಯ ಭಾಗವಾಗಿ ಹುತಾತ್ಮರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಿ ನರೇಂದ್ರ ಮೋದಿ ಗೌರವ ಸಲ್ಲಿಸಿದ್ದಾರೆ.

ಜಲಿಯನ್‌ ವಾಲಾಬಾಗ್‌ನಲ್ಲಿ ಮಾತೃಭೂಮಿಗಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರಿಗೆ ನನ್ನ ಭಾವಪೂರ್ಣ ನಮನಗಳು. ದೇಶಕ್ಕಾಗಿ ತಮ್ಮ ಪ್ರಾಣವನ್ನೇ ಬಲಿದಾನ ಮಾಡಿದ ಎಲ್ಲಾ ಮಹಾನ್‌ ಚೇತನಗಳಿಗೆ ದೇಶವಾಸಿಗಳು ಎಂದಿಗೂ ಋನಿಯಾಗಿರುತ್ತಾರೆ. ಹುತಾತ್ಮರ ದೇಶಪ್ರೇಮವು ಸದಾ ಮುಂದಿನ ಜನಾಂಗಕ್ಕೆ ಸ್ಪೂರ್ತಿ ನೀಡುತ್ತದೆ ಎಂದು ರಾಷ್ಟ್ರಪತಿ ಮುರ್ಮು ಹೇಳಿದ್ದಾರೆ.

ದೇಶದಾದ್ಯಂತ ನನ್ನ ಕುಟುಂಬದ ಸದಸ್ಯರ ಪರವಾಗಿ, ಜಲಿಯನ್‌ ವಾಲಾಬಾಗ್‌ ಹತ್ಯಾಕಾಂಡ ಎಲ್ಲಾ ವೀರ ಹುತಾತ್ಮರಿಗೆ ನನ್ನ ಗೌರವ ಸಲ್ಲಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಅಮೃತಸರದಲ್ಲಿರುವ ಜಲಿಯನ್‍ವಾಲಾ ಬಾಗ್ ಉದ್ಯಾನದಲ್ಲಿ ಏಪ್ರಿಲ್ ೧೩, ೧೯೧೯ರಂದು ಬ್ರಿಟೀಷ್ ಭಾರತ ಸೇನೆಯಿಂದ ಅಲ್ಲಿ ನೆರೆದಿದ್ದ ಗಂಡಸರು, ಹೆಂಗಸರು, ಮಕ್ಕಳೆಲ್ಲರ ಮೇಲೆ ನಡೆಸಿದ ಗುಂಡಿನ ದಾಳಿಯ ಪರಿಣಾಮವಾಗಿ ನಡೆದ ಮಾರಣಹೋಮ. ಅಧಿಕೃತ ಮೂಲಗಳ ಪ್ರಕಾರ ಸಾವಿಗೀಡಾದವರ ಸಂಖ್ಯೆ ೩೭೯ ಆಗಿತ್ತು ಎನ್ನುವುದು ಉಲ್ಲೇಖಾರ್ಹ.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!