spot_img
Saturday, December 7, 2024
spot_img

ವಿಜಯ ಮಕ್ಕಳಕೂಟ ಆಂಗ್ಲ ಮಾಧ್ಯಮ ಶಾಲೆ ಆತ್ರಾಡಿ: ವಾರ್ಷಿಕೋತ್ಸವ ‘ಬಯಲಾಟ-2024’ ಸಂಪನ್ನ

ಕುಂದಾಪುರ: (ಜನಪ್ರತಿನಿಧಿ ವಾರ್ತೆ) ವಿಜಯ ಮಕ್ಕಳಕೂಟ ಆಂಗ್ಲ ಮಾಧ್ಯಮ ಶಾಲೆ ಆತ್ರಾಡಿ-ವಂಡ್ಸೆ ಇಲ್ಲಿನ ವಾರ್ಷಿಕೋತ್ಸವ ‘ಬಯಲಾಟ-2023-24’ ಏ.8ರಂದು ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ವಿಜಯ ಬ್ಯಾಂಕ್ ನಿವೃತ್ತ ಮ್ಯಾನೇಜರ್ ಶೇಖರ ಶೆಟ್ಟಿ ಸಂಪಿಗೇಡಿ, ಶೈಕ್ಷಣಿಕ ಸಂಸ್ಥೆಯೊಂದನ್ನು ಕಟ್ಟಿ ಬೆಳೆಸುವುದು ಸುಲಭದ ಮಾತಲ್ಲ. ಮೂಲ ಸೌಕರ್ಯಗಳು ಪ್ರಮುಖ ಪಾತ್ರ ವಹಿಸುತ್ತದೆ. ಜೊತೆಯಲ್ಲಿ ಗುಣಮಟ್ಟದ ಶಿಕ್ಷಣವನ್ನು ನೀಡುವ ಮೂಲಕ ಸಾರ್ವಜನಿಕ ವಿಶ್ವಾಸವನ್ನು ಗಳಿಸಬೇಕಾಗುತ್ತದೆ. ಆ ಹಿನ್ನೆಲೆಯಲ್ಲಿ ವಿಎಂಕೆ ಪ್ರಶಂಸನೀಯ ಸಾಧನೆ ಮಾಡಿದೆ ಎಂದರು.

ವಿ.ಎಂ.ಕೆಯ ಗವರ್ನಿಂಗ್ ಕೌನ್ಸಿಲ್ ಅಧ್ಯಕ್ಷರಾದ ಬಿ.ಎನ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜನ್ನಾಡಿಯ ಹೆಗ್ಡೆ ಕ್ಯಾಶೂಸ್‍ನ ಶಂಕರ ಹೆಗ್ಡೆ ಸಂಸ್ಥೆಯ ನೂತನ ಗ್ರಂಥಾಲಯ ಹಾಗೂ ಕೆ.ಜಿ ತರಗತಿ ಕಟ್ಟಡವನ್ನು ಉದ್ಘಾಟಿಸಿದರು.

ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯ್ಕ 2022-23ನೇ ಸಾಲಿನ ಎಸ್.ಎಸ್.ಎಲ್.ಸಿಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು. ಬೈಂದೂರು ವಲಯದಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಪ್ರಥಮ ಸ್ಥಾನ ಪಡೆದ ವಿಜಯಮಕ್ಕಳ ಕೂಟ ಶೈಕ್ಷಣಿಕ ಸಂಸ್ಥೆಯನ್ನು ಶ್ಲಾಘಿಸಿಸಿ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ವಿಎಂಕೆ ಗವರ್ನಿಂಗ್ ಕೌನ್ಸಿಲ್ ಉಪಾಧ್ಯಕ್ಷ ನಾರಾಯಣ ಶೆಟ್ಟಿ ಆತ್ರಾಡಿ ದತ್ತಿನಿಧಿ ಬಹುಮಾನ ವಿತರಿಸಿದರು.

ಸ್ಕೌಟ್ ಮತ್ತು ಗೈಡ್ ನಲ್ಲಿ ರಾಜ್ಯ ಪುರಸ್ಕಾರ ಪಡೆದ ವಿದ್ಯಾರ್ಥಿಗಳನ್ನು ತಾಲೂಕು ದೈಹಿಕ ಪರಿವೀಕ್ಷಣಾಧಿಕಾರಿ ಚಂದ್ರಶೇಖರ ಶೆಟ್ಟಿ ಸನ್ಮಾನಿಸಿದರು, ನಿವೃತ್ತ ಮುಖ್ಯೋಪಾಧ್ಯಾಯರಾದ ರಾಜೀವ ಶೆಟ್ಟಿ ಬಗ್ವಾಡಿ, ವಂಡ್ಸೆ ಸಿ.ಆರ್.ಪಿ ನಾಗರಾಜ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಸಂಸ್ಥೆಯ ಸಂಚಾಲಕರಾದ ಸುಭಾಶ್ಚಂದ್ರ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿ, ವಿಜಯ ಮಕ್ಕಳ ಕೂಟ ಆಂಗ್ಲ ಮಾಧ್ಯಮ ಶಾಲೆಯು ಕಳೆದ 11 ವರ್ಷಗಳಿಂದ ಶೈಕ್ಷಣಿಕ, ಸಾಂಸ್ಕøತಿಕ, ಕ್ರೀಡೆಯಲ್ಲಿ ವಿದ್ಯಾರ್ಥಿಗಳನ್ನು ಪರಿಪೂರ್ಣಗೊಳಿಸುವಲ್ಲಿ ಶ್ರಮಿಸುತ್ತಿದೆ. ‘ಕನ್ನಡಮ್ಮನ ಹರಕೆ ಇದು ಮರೆಯದಿರು ಚಿನ್ನ’ ಸಾಂಸ್ಕøತಿಕ ವೇದಿಕೆಯ ಮೂಲಕ ‘ಬಯಲಾಟ’ ಶೀರ್ಷಿಕೆಯಡಿ ವಾರ್ಷಿಕೋತ್ಸವವನ್ನು ನಡೆಸಿಕೊಂಡು ಬರುತ್ತಿದೆ. ಕಳೆದ 8 ವರ್ಷಗಳಿಂದ ಸಂಸ್ಥೆಯ ಆಸಕ್ತ ವಿದ್ಯಾರ್ಥಿಗಳಿಗೆ ಯಕ್ಷಗಾನ ತರಬೇತಿ ನೀಡಲಾಗುತ್ತಿದೆ. ವಾರ್ಷಿಕೋತ್ಸವದಂದು ಯಕ್ಷಗಾನ ತರಗತಿಯ ವಿದ್ಯಾರ್ಥಿಗಳು ಪ್ರದರ್ಶನ ನೀಡುತ್ತಾರೆ. ಕುಣಿತ ಭಜನೆ ತರಬೇತಿಯನ್ನು ನೀಡಲಾಗುತ್ತಿದ್ದು, ಒಂದು ದಿನ ಪ್ರತ್ಯೇಕವಾಗಿ ಭಜನಾ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ. ಸ್ಕೌಟ್ ಮತ್ತು ಗೈಡ್ ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರುತ್ತಿದ್ದು ಕಳೆದ ವರ್ಷ 12 ವಿದ್ಯಾರ್ಥಿಗಳು ರಾಜ್ಯ ಪುರಸ್ಕಾರ ಪಡೆದಿದ್ದರು. ಈ ವರ್ಷ ಇಬ್ಬರು ವಿದ್ಯಾರ್ಥಿಗಳು ರಾಜ್ಯ ಪುರಸ್ಕಾರ ಪಡೆದಿದ್ದಾರೆ. ದೈಹಿಕ ಕ್ಷಮತೆ ಬೆಳೆಸುವ ನಿಟ್ಟಿನಲ್ಲಿ ಪಠ್ಯೇತರ ಚಟುವಟಿಕೆಯಲ್ಲಿಯೂ ವಿದ್ಯಾರ್ಥಿಗಳು ತೊಡಗಿಸಿಕೊಳ್ಳುತ್ತಿದ್ದಾರೆ. ಎಸ್,ಎಸ್.ಎಲ್,ಸಿಯಲ್ಲಿ ಎರಡು ಬ್ಯಾಚ್ ಗಳು ಹೊರ ಹೋಗಿದ್ದು 2021-22ನೇ ಸಾಲಿನಲ್ಲಿ ಶೇ.98% ಫಲಿತಾಂಶ ಪಡೆದಿದ್ದು, ರಾಜ್ಯಕ್ಕೆ 6 ಮತ್ತು 7ನೇ ರ್ಯಾಂಕ್ ಪಡೆದಿದೆ. 2022-23ನೇ ಸಾಲಿನಲ್ಲಿ 100% ಫಲಿತಾಂಶ ಪಡೆದಿದೆ. ಗುಣಮಟ್ಟದ ಫಲಿತಾಂಶದಿಂದಿಗೆ ಬೈಂದೂರು ವಲಯದಲ್ಲಿ ಪ್ರಥಮ ಸ್ಥಾನ, ಉಡುಪಿ ಜಿಲ್ಲೆಯ ಟಾಪ್-10 ನಲ್ಲಿ 2 ಮತ್ತು 3 ಸ್ಥಾನ ಪಡೆದಿದೆ ಎಂದರು.

ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ದೀಪಿಕಾ ಸುಭಾಶ್ ಸ್ವಾಗತಿಸಿದರು. ಸಂಸ್ಥೆಯ 9ನೇ ತರಗತಿ ವಿದ್ಯಾರ್ಥಿ ಸುಜನಾ ಮತ್ತು ಅನ್ವಿತಾ ಕಾರ್ಯಕ್ರಮ ನಿರ್ವಹಿಸಿದರು. 7ನೇ ತರಗತಿ ವಿದ್ಯಾರ್ಥಿ ಸಂದೀಪ್ ಸ್ವರಾಜ್ ವಂದಿಸಿದರು. ವಿದ್ಯಾರ್ಥಿ ನಾಯಕಿ ಸಿಂಚನಾ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ ವೈವಿದ್ಯಮಯ ಸಾಂಸ್ಕøತಿಕ ಕಾರ್ಯಕ್ರಮ ಪ್ರದರ್ಶನಗೊಂಡಿತು. ವಿದ್ಯಾರ್ಥಿಗಳಿಂದ ಯಕ್ಷಗುರು ಪ್ರಸಾದ್ ಕುಮಾರ್ ಮೊಗೆಬೆಟ್ಟು ನಿರ್ದೇಶನದಲ್ಲಿ ‘ಮೀನಾಕ್ಷಿ ಕಲ್ಯಾಣ’ ಯಕ್ಷಗಾನ ಪ್ರದರ್ಶನಗೊಂಡಿತು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!