Tuesday, April 30, 2024

ಎಂ.ಎಸ್ ಮಂಜ ಚಾರಿಟೇಬಲ್ ಟ್ರಸ್ಟ್: ಎ.16ರಂದು ‘ಕಲ್ಪವೃಕ್ಷ’-ನೆರವು, ಸಾಧಕರಿಗೆ ಪ್ರಶಸ್ತಿ ಪ್ರದಾನ

ಕುಂದಾಪುರ: ಮಾರಣಕಟ್ಟೆ ಸುಬ್ರಹ್ಮಣ್ಯ ಮಂಜ ಚಾರಿಟೇಬಲ್ ಟ್ರಸ್ಟ್ ರಿ., ಮಾರಣಕಟ್ಟೆ, ಚಿತ್ತೂರು, ವತಿಯಿಂದ ಮಾರಣಕಟ್ಟೆ ಸುಬ್ರಹ್ಮಣ್ಯ ಮಂಜರವರ ಸಂಸ್ಮರಣಾ ಕಾರ್ಯಕ್ರಮ ‘ಕಲ್ಪವೃಕ್ಷ’ ಸೇವೆಯೇ ಉಸಿರು ಕಾರ್ಯಕ್ರಮದಡಿ ನೆರವು, ಸಾಧಕರಿಗೆ ಪ್ರಶಸ್ತಿ ಪ್ರದಾನ, ಸಾಂಸ್ಕೃತಿಕ ಕಾರ್ಯಕ್ರಮ ಎಪ್ರಿಲ್ 16 ಮಂಗಳವಾರ ಸಂಜೆ 6 ಗಂಟೆಯಿಂದ ಮಾರಣಕಟ್ಟೆ ಅನುಗ್ರಹ ದ ವಠಾರದಲ್ಲಿ ನಡೆಯಲಿದೆ.

ಸಂಜೆ 6 ಗಂಟೆಯಿಂದ ನೃತ್ಯ ರೂಪಕ ಪರಶುರಾಮನ ಪಿತೃಭಕ್ತಿ ಕರ್ನಾಟಕ ಕಲಾಶ್ರೀ ವಿದ್ವಾನ್ ಚಂದ್ರಶೇಖರ ನಾವಡ ಸುರತ್ಕಲ್ ಇವರ ನಿರ್ದೇಶನದಲ್ಲಿ ಬೈಂದೂರಿನ ಸುರಭಿ ಕಲಾವಿದರು ಪ್ರಸ್ತುತ ಪಡಿಸಲಿದ್ದಾರೆ.

ನಂತರ ದಿ.ಸುಬ್ರಹ್ಮಣ್ಯ ಮಂಜರವರ ನೆನಪಿನಲ್ಲಿ ನೆರವು ಕಾರ್ಯಕ್ರಮ ನಡೆಯಲಿದ್ದು ಟ್ರಸ್ಟ್‌ನ ಗೌರವಾಧ್ಯಕ್ಷರಾದ ಶ್ರೀಧರ ಮಂಜರು ಉದ್ಘಾಟಿಸಲಿದ್ದಾರೆ. ಟ್ರಸ್ಟ್ ಅಧ್ಯಕ್ಷರಾದ ಎಂ.ಕೃಷ್ಣಮೂರ್ತಿ ಮಂಜರು ಅಧ್ಯಕ್ಷತೆ ವಹಿಸಲಿದ್ದಾರೆ. ಡಾ.ವೆಂಕಟರಮಣ ಭಟ್ ನೆಂಪು ಇವರಿಗೆ ವಿಶೇಷ ಗೌರವ ಸಮರ್ಪಣೆ ನಡೆಯಲಿದೆ. ಮುಖ್ಯ‌ಅತಿಥಿಗಳಾಗಿ ಗೀತಾನಂದ ಫೌಂಡೇಶನ್ ಪ್ರವರ್ತಕರಾದ ಆನಂದ ಸಿ.ಕುಂದರ್, ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರರಾದ ಸದಾಶಿವ ಶೆಟ್ಟಿ, ಹಿರಿಯ ನ್ಯಾಯವಾದಿ ಎ.ಎಸ್.ಎನ್ ಹೆಬ್ಬಾರ್, ಪಾಂಡೇಶ್ವರದ ಅಷ್ಟಾಂಗ ಯೋಗ ಗುರುಕುಲದ ವಿದ್ವಾನ್ ಡಾ.ವಿಜಯ ಮಂಜರು, ಮಾರಣಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಅರ್ಚಕರಾಧ ವಿಘ್ನೇಶ್ವರ ಮಂಜರು ಭಾಗವಹಿಸಲಿದ್ದಾರೆ. ಟ್ರಸ್ಟಿನ ಕಾರ್ಯಾಧ್ಯಕ್ಷರಾದ ನಾಗರಾಜ ಮಂಜರು ಉಪಸ್ಥಿತರಿರಲಿದ್ದಾರೆ.

ಈ ಸಂದರ್ಭದಲ್ಲಿ ಹಲವು ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ವೈದಿಕ ರತ್ನ ಪ್ರಶಸ್ತಿಯನ್ನು ಇಡೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕರಾದ ವೇ.ಮೂ.ಸೀತಾರಾಮ ಅಡಿಗ ಅವರಿಗೆ, ಅಮೂಲ್ಯ ರತ್ನ ಪ್ರಶಸ್ತಿಯನ್ನು ಬಾಳೆಕುದ್ರು ರಾಮಚಂದ್ರ ಉಪಾಧ್ಯಾಯ ಬೆಂಗಳೂರು ಇವರಿಗೆ, ಸೇವಾರತ್ನ ಪ್ರಶಸ್ತಿಯನ್ನು ಕುಂದಾಪುರ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ನಾಗೇಶ್ ಅವರಿಗೆ, ಕಲಾ ರತ್ನ ಪ್ರಶಸ್ತಿಯನ್ನು ಸಾಲಿಗ್ರಾಮ ಮಕ್ಕಳ ಮೇಳದ ಸಂಚಾಲಕರು, ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರಾದ ಎಚ್.ಶ್ರೀಧರ್ ಹಂದೆಯವರಿಗೆ ಪ್ರದಾನ ಮಾಡಲಾಗುವುದು.

ರಾತ್ರಿ 9.30 ರಿಂದ ಮೆಕ್ಕೆಕಟ್ಟು ಮೇಳದವರಿಂದ ಯಕ್ಷಗಾನ ವಾಲಿ ಸುಗ್ರೀವ ಹಾಗೂ ಕನಕಾಂಗಿ ಕಲ್ಯಾಣ ಪ್ರದರ್ಶನಗೊಳ್ಳಲಿದೆ.

Related Articles

Stay Connected

21,961FansLike
3,912FollowersFollow
21,700SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!