Thursday, November 14, 2024

ಡಾ.ಶಾಂತಾರಾಮ್ ಪ್ರಶಸ್ತಿಗೆ ಕೃತಿ ಆಹ್ವಾನ

ಕುಂದಾಪುರ: ಮಣಿಪಾಲ ಅಕಾಡೆಮಿಯ ಆಡಳಿತಾಧಿಕಾರಿಯಾಗಿದ್ದ ಡಾ.ಹೆಚ್.ಶಾಂತಾರಾಮ್‌ ಅವರ ಹೆಸರಿನಲ್ಲಿ ಕುಂದಾಪುರದ ಭಂಡಾರ್ಕಾರ್ಸ್‌ ಕಾಲೇಜು ದತ್ತಿನಿಧಿ ಸ್ಥಾಪಿಸಿ ಪ್ರತಿವರುಷ ಕನ್ನಡದ‌ ಅತ್ಯುತ್ತಮ ಸೃಜನಶೀಲ ಕೃತಿಗೆ ಪ್ರಶಸ್ತಿ ನೀಡುತ್ತಾ ಬಂದಿದೆ. ಈ ವರ್ಷ ಸಣ್ಣಕತೆಗಳನ್ನು ಪರಿಗಣಿಸಲಿದ್ದು, 2022 ಮತ್ತು 2023 ರಲ್ಲಿ ಮೊದಲ ಆವೃತ್ತಿಯಾಗಿ ಪ್ರಕಟಗೊಂಡ ಸಣ್ಣಕಥಾಸಂಕಲನಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಲೇಖಕರು ಮತ್ತು ಪ್ರಕಾಶಕರುಕಥಾ ಸಂಕಲನಗಳ ನಾಲ್ಕು ಪ್ರತಿಗಳನ್ನು ಇದೇಮೇ 10 ರ ಒಳಗೆಡಾ.ಹೆಚ್. ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಸಮಿತಿ, ಭಂಡಾರ್ಕಾರ್‍ಸ್‌ ಕಾಲೇಜು, ಕುಂದಾಪುರ-576201 ಈ ವಿಳಾಸಕ್ಕೆ ಕಳುಹಿಸಿಕೊಡುವಂತೆ ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9844284213 ನ್ನು ಸಂಪರ್ಕಿಸಬಹುದು. ಈಗಾಗಲೇ ಪ್ರಶಸ್ತಿ ಪಡೆದವರಿಗೆ ಅವಕಾಶ ಇರುವುದಿಲ್ಲ.

ಪ್ರಶಸ್ತಿ ಪ್ರದಾನ ಸಮಾರಂಭ‌ಆಗಸ್ಟ್ ತಿಂಗಳಿನಲ್ಲಿ ನಡೆಯಲಿದ್ದು, ಹದಿನೈದು ಸಾವಿರ ರೂಪಾಯಿಗಳೊಂದಿಗೆ ಬೆಳ್ಳಿಫಲಕ ನೀಡಲಾಗುವುದೆಂದು ಪ್ರಶಸ್ತಿ ಸಮಿತಿ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!