spot_img
Thursday, December 5, 2024
spot_img

ರಾಜ್ಯದಲ್ಲಿ ಬಿಜೆಪಿ 21, ಕಾಂಗ್ರೆಸ್‌ 5 ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ! : ಸಿ-ವೋಟರ್ಸ್ ಚುನಾವಣಾ ಪೂರ್ವ ಸಮೀಕ್ಷೆ

ಜನಪ್ರತಿನಿಧಿ (ಬೆಂಗಳೂರು) : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಸನಿಹವಾಗುತ್ತಿದ್ದು, ಚುನಾವಣಾ ಕಾವು ಹೆಚ್ಚಿದೆ. ಆಡಳಿತಾರೂಢ ಕಾಂಗ್ರೆಸ್‌  ಸಮರ ಜೋರಾಗಿದೆ. ತೀವ್ರ ಪೈಪೋಟಿ ಕೊಡಲು ರಾಜಕೀಯ ಪಕ್ಷಗಳು ಸಜ್ಜಾಗಿವೆ. ಇತ್ತ ಚುನಾವಣೆ ಪೂರ್ವ ಸಿ-ವೋಟರ್ಸ್ ಸಮೀಕ್ಷೆ ಹೊರ ಬಿದ್ದಿದೆ. ಹಾಗಾದರೆ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಎಷ್ಟು ಕ್ಷೇತ್ರಗಳಲ್ಲಿ ಗೆಲ್ಲಬಹುದು ಮತ್ತು ಆಡಳಿತ ಪಕ್ಷ ಕಾಂಗ್ರೆಸ್‌ ಗೆ ಎಷ್ಟು ಕ್ಷೇತ್ರಗಳು ಸಿಗಲಿವೆ? ಎಂಬ ಮಾಹಿತಿ ಇಲ್ಲಿದೆ.

ಸಿ-ವೋಟರ್ಸ್ ಚುನಾವಣಾ ಪೂರ್ವ ಸಮೀಕ್ಷೆ ಪ್ರಕಾರ, ಈ ಭಾರಿ ಮತ್ತೊಮ್ಮೆ ಕಮಲ ಪಡೆಗೆ ಅದೃಷ್ಟ ಒಲಿದಿದೆ. ವಿಧಾನಸಭೆ ಚುನಾವನೆಯಲ್ಲಿ ಗೆದ್ದ ಕಾಂಗ್ರೆಸ್‌ ಪಕ್ಷಕ್ಕೆ ಒಂದೆರಡು ಸ್ಥಾನಗಳು ಹೆಚ್ಚು ಸಿಗುವ ಸಾಧ್ಯತೆ ದಟ್ಟವಾಗಿದೆ. ಇನ್ನೂ ಜೆಡಿಎಸ್ ಕಡಿಮೆ ಕ್ಷೇತ್ರಗಳಿಗೆ ತೃಪ್ತಿಪಟ್ಟುಕೊಳ್ಳಲಿದೆ ಎಂದು ಹೇಳಲಾಗುತ್ತಿದೆ.

ಸಿ-ವೋಟರ್ಸ್ ಸಮೀಕ್ಷೆ ಪ್ರಕಾರ, ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ 21 ಕ್ಷೇತ್ರಗಳಲ್ಲಿ ಗೆಲ್ಲುತ್ತದೆ ಎಂದರೆ, ಮೈತ್ರಿಕೂಟದ ಪಾಲುದಾರ ಪಕ್ಷ ಜೆಡಿಎಸ್‌ಗೆ 2 ಹಾಗೂ ಆಡಳಿತ ಪಕ್ಷ ಕಾಂಗ್ರೆಸ್‌ಗೆ 5 ಕ್ಷೇತ್ರಗಳು ಬರಲಿವೆ ಎಂದು ಭವಿಷ್ಯ ನುಡಿದಿದೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!