Tuesday, April 30, 2024

ಏ.24 ರಂದು ಉಡುಪಿಗೆ ಯೋಗಿ ಆದಿತ್ಯನಾಥ್‌ | ಏ.19ರಿಂದ ದಿನನಿತ್ಯ ಸ್ಟಾರ್‌ ಪ್ರಚಾರಕರಿಂದ ಜಿಲ್ಲೆಯಲ್ಲಿ ಪ್ರಚಾರ ಸಭೆ ! : ಕಿಶೋರ್‌ ಕುಮಾರ್‌ ಕುಂದಾಪುರ

ಜನಪ್ರತಿನಿಧಿ (ಉಡುಪಿ) : ಉಡುಪಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಪರ ಪ್ರಚಾರ ಮಾಡುವುದಕ್ಕೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಏ.24ರಂದು ಉಡುಪಿಗೆ ಭೇಟಿ ನೀಡಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ಕಿಶೋರ್‌ ಕುಮಾರ್‌ ಕುಂದಾಪುರ ತಿಳಿಸಿದ್ದಾರೆ.

ಜನಪ್ರತಿನಿಧಿಯೊಂದಿಗೆ ಮಾತನಾಡಿದ ಬಿಜೆಪಿ ಜಿಲ್ಲಾ ಅಧ್ಯಕ್ಷ ಕಿಶೋರ್‌ ಕುಮಾರ್‌ ಕುಂದಾಪುರ, ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಭರದಿಂದ ಸಾಗುತ್ತಿದೆ. ನಿರಂತರವಾಗಿ ಜನರನ್ನು ಸಂಪರ್ಕಿಸಿ ಮತಯಾಚನೆ ಮಾಡಲಾಗುತ್ತಿದೆ. ಎಲ್ಲಾ ಕಡೆಯಿಂದಲೂ ಜನರಿಂದ ಉತ್ತಮ ಪ್ರತಿಕ್ರಿಯೇ ದೊರಕುತ್ತಿದೆ. ನಮ್ಮ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ದೊಡ್ಡ ಅಂತರದಿಂದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಗೆಲ್ಲಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಅಂತಿಮ ಹಂತದ ಚುನಾವಣಾ ಪ್ರಚಾರದಲ್ಲಿ ಏ. 24ರಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಉಡುಪಿಯಲ್ಲಿ ಬಹಿರಂಗ ಸಾರ್ವಜನಕಿ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ. ಯೋಗಿ ಆದಿತ್ಯನಾಥ್‌  ಪ್ರಚಾರ ಸಭೆಯಲ್ಲಿ ಸುಮಾರು 50,000 ಕಾರ್ಯಕರ್ತರು, ಮೋದಿ ಭಕ್ತರು, ಹಿಂದೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಪ್ರಚಾರ ಸಭೆಯ ಸ್ಥಳ ಇನ್ನೂ ಅಂತಿಮವಾಗಿಲ್ಲ. ಶೀಘ್ರವೇ ಸ್ಥಳ ನಿಗದಿಗೊಳಿಸಿ ಪ್ರಚಾರ ಸಭೆಯ ಅಂತಿಮ ರೂಪುರೇಷೆ ತಯಾರು ಮಾಡಲಾಗುವುದು ಎಂದು ತಿಳಿಸಿದರು.

ಅಷ್ಟಲ್ಲದೇ, ಏ.19 ರಂದು ಉಪ್ಪೂರಿನಲ್ಲಿ ಬೃಹತ್‌ ಮಹಿಳಾ ಸಮಾವೇಷವನ್ನು ಆಯೋಜಿಸಿದ್ದು, ಮಂಡ್ಯ ಹಾಲಿ ಸಂಸದೆ ಸುಮಲತಾ ಅಂಬರೀಷ್‌ ಹಾಗೂ ಸಂಸದೆ, ವಿದೇಶಾಂಗ ವ್ಯವಹಾರಗಳು ಹಾಗೂ ಸಂಸ್ಕೃತಿಯ ರಾಜ್ಯ ಸಚಿವೆ ಮೀನಾಕ್ಷಿ ಲೇಖಿ ಭಾಗವಹಿಸಲಿದ್ದಾರೆ.

ಏ.20 ರಂದು ಕಡಿಯಾಳಿಯ ಬಿಜೆಪಿ ಕಚೇರಿಯ ಬಳಿ ʼಯುವ ಭಾರತ್‌ʼ ಕಾರ್ಯಕ್ರಮವನ್ನೂ ಆಯೋಜಿಸಲಾಗಿದೆ. ಬಿಜೆಪಿಯ ಯುವ ಕಾರ್ಯಕರ್ತರನ್ನು ಕೇಂದ್ರೀಕರಿಸಿಕೊಂಡು ಮಾಡುತ್ತಿರುವ ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ. ವೈ ವಿಜಯೇಂದ್ರ ಭಾಗವಹಿಸಲಿದ್ದಾರೆ. ಏ. 21 ರಂದು ಕಾಪುವಿನಲ್ಲಿ ನಡೆಯಲಿರುವ ಸಾರ್ವಜನಿಕ ಪ್ರಚಾರ ಸಭೆಯಲ್ಲಿ ಮೈಸೂರಿನ ಹಾಲಿ ಸಂಸದ ಪ್ರತಾಪ್‌ ಸಿಂಹ, ಏ.22 ರಂದು ಹಿರಿಯಡ್ಕದಲ್ಲಿ ನಡೆಯಲಿರುವ ರೋಡ್‌ ಶೋ ನಲ್ಲಿ ತಮಿಳುನಾಡು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಅಣ್ಣಾಮಲೈ ಭಾಗವಹಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ಧಾರೆ.

Related Articles

Stay Connected

21,961FansLike
3,912FollowersFollow
21,700SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!