spot_img
Wednesday, January 22, 2025
spot_img

ಶಿವಮೊಗ್ಗದಲ್ಲಿ ಬೃಹತ್‌ ಮೆರವಣಿಗೆಯ ಮೂಲಕ ಬಿ.ವೈ.ರಾ ಶಕ್ತಿ ಪ್ರದರ್ಶನ, ನಾಮಪತ್ರ ಸಲ್ಲಿಕೆ ! ಕೇಸರಿಮಯವಾದ ಶಿವಮೊಗ್ಗ.

ಜನಪ್ರತಿನಿಧಿ (ಶಿವಮೊಗ್ಗ) : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹಾಲಿ ಸಂಸದ ಬಿ.ವೈ. ರಾಘವೇಂದ್ರ ನಾಮಪತ್ರ ಸಲ್ಲಿಕೆಗೆ ಜಿಲ್ಲೆಯ ರಾಮಣ್ಣಶ್ರೇಷ್ಠಿ ಪಾರ್ಕ್ ನಿಂದ ಆರಂಭವಾಗಿರುವ ಬಿಜೆಪಿ-ಜೆಡಿಎಸ್ ಬೆಂಬಲಿಗರ ಬೃಹತ್ ಮೆರವಣಿಗೆ ಚುನಾವಣೆಗೆ ಮುನ್ನವೇ ಮೈತ್ರಿ ಪಕ್ಷಗಳ ಬೃಹತ್ ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾಯಿತು.

ಮುಂಜಾನೆಯಿಂದಲೇ ದೌಡಾಯಿಸಿದ ಜನರು ಬೇಸಿಗೆಯ ಉರಿ ಬಿಸಿಲನ್ನು ಲೆಕ್ಕಿಸದೇ ಎರಡೂ ಪಕ್ಷಗಳ ಬೆಂಬಲಿಗರು ಮೆರವಣಿಗೆಯಲ್ಲಿ ಸಾಗಿ ಬಂದರು, ಶಿವಮೊಗ್ಗದ ಹೃದಯಭಾಗ ಸಂಪೂರ್ಣವಾಗಿ ಕೇಸರಿಮಯವಾಗಿ ಪರಿವರ್ತನೆಯಾಗಿರುವ ದೃಶ್ಯ ಕಂಡು ಬಂತು. ಬಿಜೆಪಿ ಬೆಂಬಲಿಗರು ಕೇಸರಿ ಟೋಪಿ, ಹೆಗಲಿಗೆ ಕೇಸರಿ ಶಾಲು ಹಾಕಿಕೊಂಡಿದ್ದರೆ ಜೆಡಿಎಸ್ ಬೆಂಬಲಿಗರು ಹಸಿರು ಶಾಲು ಧರಿಸಿ ಬಿಜೆಪಿ ಅಭ್ಯರ್ಥಿ ಹಾಗೂ ಬಿಜೆಪಿ ಹಾಗೂ ಜೆಡಿಎಸ್‌ ಪ್ರಮುಖ ನಾಯಕರು ಇದ್ದ ತೆರೆದ ವಾಹನದೊಂದಿಗೆ ಹೆಜ್ಜೆ ಹಾಕಿದರು.

ಮೆರವಣಿಗೆಗೆ ಮುನ್ನ ಬಿ.ವೈ. ರಾಘವೇಂದ್ರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿಗೆ ಬಂದು ನಾಮಪತ್ರ ಸಲ್ಲಿಸಿದರು. ಮುಂಜಾನೆ ರಾಮಣ್ಣ ಶ್ರೇಷ್ಠಿ ಪಾರ್ಕ್‌ ದೇವಾಲಯದಲ್ಲಿ ವಿಶೇಷ ಪಾರ್ಥನೆ ಸಲ್ಲಿಸಿದ ಬಳಿಕೆ ಅಲ್ಲಿಂದಲೇ ಮೆರವಣಿಗೆ ಆರಂಭಿಸಿದರು. ಮೆರವಣಿಗೆಯಲ್ಲಿ ಸಾಗಿ ಬಂದು ಜಿಲ್ಲಾಧಿಕಾರಿಗಳಿಗೆ ಬಂದು ತಲುಪಿದ ಅವರು ನಾಮಪತ್ರ ಸಲ್ಲಿಸಿದರು.

ಶಿವಮೊಗ್ಗ ಜಿಲ್ಲೆಯ ಜಿಲ್ಲಾಧಿಕಾರಿಯೂ ಹಾಗೂ ಕ್ಷೇತ್ರದ ಚುನಾವಣಾಧಿಕಾರಿಯೂ ಆಗಿರುವ ಗುರುದತ್‌ ಹೆಗಡೆ ಅವರಿಗೆ ಬಿ. ವೈ ರಾಘವೇಂದ್ರ ಅವರು ತಮ್ಮ ನಾಮಪತ್ರ ಸಲ್ಲಿಸಿದರು.  ಈ ಸಂದರ್ಭದಲ್ಲಿ ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾನಾಯ್ಕ, ವಿಧಾನಪರಿಷತ್ ಮಾಜಿ ಸದಸ್ಯ ಭಾನುಪ್ರಕಾಶ್, ಮಾಜಿ ಶಾಸಕ ಹರತಾಳು ಹಾಲಪ್ಪ ಉಪಸ್ಥಿತರಿದ್ದರು.

ಮೆರವಣಿಗೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಎಚ್.ಡಿ.ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ ಸೇರಿ ಕುಮಾರ ಬಂಗಾರಪ್ಪ, ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷೆ ಮಾಳವಿಕ ಅವಿನಾಶ್‌, ಸಿ.ಟಿ ರವಿ, ಕುಮಾರ್‌ ಬಂಗಾರಪ್ಪ, ಆರಗ ಜ್ಙಾನೇಂದ್ರ, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ  ಗುರುರಾಜ್‌ ಶೆಟ್ಟಿ ಗಂಟಿಹೊಳೆ, ಅರುಣ್‌ ಕುಮಾರ್‌ ಪುತ್ತಿಲ ಮೊದಲಾದವರು ಇದ್ದರು.

ಮೆರವಣಿಗೆಯಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದು, ನಗರದ ಪ್ರಮುಖ ವೃತ್ತಗಳಲ್ಲಿ ಜನಜಂಗುಳಿ ಕಂಡುಬಂತು.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!