spot_img
Wednesday, April 1, 2026
spot_img

ಲೋಕಸಭಾ ಚುನಾವಣೆ : ಬಿಜೆಪಿ ದೇಶದಾದ್ಯಂತ 150 ಕ್ಷೇತ್ರಗಳಿಗೆ ಕುಸಿಯಲಿದೆ : ರಾಗಾ ಭವಿಷ್ಯ

ಜನಪ್ರತಿನಿಧಿ ( ನವ ದೆಹಲಿ) : ಲೋಕಸಭಾ ಚುನಾವಣಾ ಹೊಸ್ತಿಲಲ್ಲಿ ಅಂತಿಮ ಹಂತದ ತಯಾರಿಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ತಮ್ಮ ಚುನಾವಣಾ ಪ್ರಚಾರ ಕಾರ್ಯದಲ್ಲಿವೆ. ಎಲ್ಲಾ ಪಕ್ಷಗಳು ಚುನಾವಣೆಯಲ್ಲಿ ಗೆಲ್ಲುವುದಕ್ಕೆ ಬೇಕಾಗಿ ರಾಜಕೀಯ ತಂತ್ರಗಾರಿಕೆಯಲ್ಲಿ ತೊಡಗಿವೆ. ಈ ನಡುವೆ ಕಾಂಗ್ರೆಸ್‌ ನಾಯಕ ಹಾಗೂ ಕೇರಳದ ವಯನಾಡಿನ ಹಾಲಿ ಸಂಸದ ಮತ್ತು ಕಾಂಗ್ರೆಸ್‌ ಪ್ರಧಾನಿ ಅಭ್ಯರ್ಥಿ ಎಂದು ಬಿಂಬಿಸಲ್ಪಡುತ್ತಿರುವ ರಾಹುಲ್‌ ಗಾಂಧಿ ಲೋಕಸಭಾ ಚುನಾವಣೆಯ ಬಗ್ಗೆ ಅಚ್ಚರಿಯ ಭವಿಷ್ಯ ನುಡಿದಿದ್ದಾರೆ.

ಕಳೆದ 15-20 ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಭಾರತೀಯ ಜನತಾ ಪಾರ್ಟಿ ದೇಶದಾದ್ಯಂತ 180 ಕ್ಷೇತ್ರಗಳನ್ನು ಗೆಲ್ಲಬಹುದು ಎಂದು ಹೇಳಿದ್ದೆ. ಆದರೇ ಈಗ ಅದು 150ಕ್ಕೆ ಕುಸಿಯಲಿದೆ ಅನ್ನಿಸುತ್ತಿದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಸುದ್ದಿಗೋಷ್ಠಿಯೊಂದರಲ್ಲಿ ಮಾತನಾಡಿದ ರಾಗಾ, ಪ್ರತಿ ರಾಜ್ಯಗಳಲ್ಲೂ ನಮಗೆ ನಮ್ಮ ಪರವಾದ ವರದಿಗಳು ದೊರಕುತ್ತಿವೆ. ಪ್ರತಿ ರಾಜ್ಯಗಳಲ್ಲೂ ನಮ್ಮ ಪರವಾದ ಅಲೆ ಇದೆ ಎಂದು ಅವರು ಹೇಳಿರುವುದು ಈಗ ರಾಜಕೀಯ ವಲಯವನ್ನು ಬೆರಗು ಕಣ್ಣಿಂದ ನೋಡುವ ಹಾಗೆ ಮಾಡಿದೆ.

ನಿನ್ನೆ (ಬುಧವಾರ) ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ನ್ಯಾಯಯುತ ಚುನಾವಣೆ ನಡೆಸಿದರೆ, ಇವಿಎಂಗಳನ್ನು ಟ್ಯಾಂಪರಿಂಗ್ ಮಾಡದೆ ಇದ್ದರೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭಾರತೀಯ ಜನತಾ ಪಕ್ಷ 180ಕ್ಕಿಂತ ಹೆಚ್ಚು ಕ್ಷೇತ್ರಗಳನ್ನು ಗೆಲ್ಲುವುದಿಲ್ಲ ಎಂದು ಹೇಳಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!